ಶಿವಮೊಗ್ಗ: ಭದ್ರಾವತಿ ಶಿಶು ಅಭಿವೃದ್ಧಿ ಯೋಜನೆಯಡಿಯ 16 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 1 ಕಾರ್ಯಕರ್ತೆ ಹಾಗೂ 1 ಸಹಾಯಕಿಯರ ತಾತ್ಕಾಲಿಕ ಗೌರವಧನ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಆ.29 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೂ.ಸಂ.: 08282-295051 ನ್ನು ಸಂಪರ್ಕಿಸುವಂತೆ ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.