ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದಿಂದ ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಪ್ರವೇಶಕ್ಕೆ ಚಾಯ್ಸ್ ದಾಖಲಿಸಲು ಆ.29ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಶುಲ್ಕ ಪಾವತಿಸಿ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಆ.31ರವರಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಎಂಜಿನಿಯರಿಂಗ್, ವಾಸ್ತುಶಿಲ್ಪ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎಸ್ಸಿ(ನರ್ಸಿಂಗ್), ಬಿ. ಫಾರ್ಮಾ, ಫಾರ್ಮ್-ಡಿ ಮತ್ತು ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸಸ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆಯಾದವರಿಗೆ ಆಯ್ಕೆ, ಶುಲ್ಕ ಪಾವತಿ ಮತ್ತು ನಿಗದಿಪಡಿಸಿದ ಕಾಲೇಜಿಗೆ ವರದಿ ಮಾಡಲು ದಿನಾಂಕವನ್ನು ವಿಸ್ತರಿಸಲಾಗಿದೆ.
ಯುಜಿಸಿಇಟಿ-2026 ಕೋರ್ಸ್‌ಗಳ ಪ್ರವೇಶಕ್ಕಾಗಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕೆಇಎ 24-08-2026 ರಂದು ಪ್ರಕಟಿಸಿದೆ; ಆಯ್ಕೆ, ಶುಲ್ಕ ಪಾವತಿ ಮತ್ತು ಹಂಚಿಕೆಯಾದ ಕಾಲೇಜಿಗೆ ವರದಿ ಮಾಡುವ ದಿನಾಂಕಗಳನ್ನು ವಿಸ್ತರಿಸಲಾಗಿದೆ:
#UGCET-2026: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಪ್ರವೇಶಕ್ಕೆ ಚಾಯ್ಸ್ ದಾಖಲಿಸಲು ಆ.29ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಶುಲ್ಕ ಪಾವತಿಸಿ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಆ.31ರವರಗೆ ಅವಕಾಶ ನೀಡಲಾಗಿದೆ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ@CMofKarnataka… pic.twitter.com/CZO7KdENUh— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 27, 2026