LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿಗೂ ಮಂಜುನಾಥ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ: ಜಾರಿ ನಿರ್ದೇಶನಾಲಯ ಸ್ಪಷ್ಟನೆ

ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನಡೆಸಿರುವ ಶೋಧ ಕಾರ್ಯಾಚರಣೆಯು ಹೊಸ ತಿರುವು ಪಡೆದುಕೊಂಡಿದ್ದು, ಸಚಿವರ ಬಾಮೈದ ಹಾಗೂ ಅಬಕಾರಿ ಇಲಾಖೆಯ ಮಾಜಿ ಅಧಿಕಾರಿ ವೈ. ಮಂಜುನಾಥ್ ಪ್ರಕರಣಕ್ಕೂ ಈ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಇಡಿ ಸ್ಪಷ್ಟಪಡಿಸಿದೆ. ಆರಂಭದಲ್ಲಿ ಮಂಜುನಾಥ್ ಪ್ರಕರಣದ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿತ್ತಾದರೂ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ)-1999ರ ಅಡಿಯಲ್ಲಿ ಈ ಪ್ರತ್ಯೇಕ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ದಕ್ಷಿಣ ಆಫ್ರಿಕಾ ಮತ್ತು ಉಗಾಂಡ ಸೇರಿದಂತೆ ವಿವಿಧ ವಿದೇಶಗಳಲ್ಲಿ ನಡೆದಿರುವ ಅಕ್ರಮ ಹೂಡಿಕೆಗಳು ಹಾಗೂ ಹಣಕಾಸು ವಹಿವಾಟುಗಳ ಆರೋಪದ ಹಿನ್ನೆಲೆಯಲ್ಲಿ ಈ ತನಿಖೆ ನಡೆಯುತ್ತಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರ ಕಡೆಯಿಂದ ಆ ದೇಶಗಳಲ್ಲಿ ಹಣ ಅಥವಾ ಹೂಡಿಕೆ ಮಾಡಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋರಿಯಲ್ಲಿರುವ ಸಚಿವರ ನಿವಾಸ ಹಾಗೂ ಅವರ ಆಪ್ತರ ಮನೆಗಳಲ್ಲಿ ವಿದೇಶಿ ಹೂಡಿಕೆ, ಹಣ ವರ್ಗಾವಣೆ ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಶೋಧಿಸಲಾಗುತ್ತಿದ್ದು, ಇದರೊಂದಿಗೆ ಬೆಳಗಾವಿ ನಗರದ ಲಕ್ಷ್ಮೀ ಟೆಕ್ ಪ್ರದೇಶದಲ್ಲಿರುವ ಸಚಿವರ ಆಪ್ತ ಹಾಗೂ ವೈದ್ಯ ಡಾ. ಗಿರೀಶ್ ಸೋನ್ವಾಲ್ಕರ್ ಸೇರಿದಂತೆ ಮೂವರು ಆಪ್ತರ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತನಿಖೆ ಮುಂದುವರಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ್ ಜೋಡೋ ಯಾತ್ರೆ; ದೇಶದ ಜನಸಾಮಾನ್ಯರ ಸಂಕಷ್ಟಕ್ಕೆ ಸಿಕ್ಕ ಪರಿಹಾರ: ಸಿಎಂ ಡಿ ಕೆ ಶಿವಕುಮಾರ್ ಅಭಿಮತBIG NEWS : ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತಪೆಟ್ಟಿಗೆಗಳ ಮಾಹಿತಿ ಸಲ್ಲಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕಸೆ.11ರಂದು ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪರಾಜ್ಯದ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ 1 ಲಕ್ಷದವರೆಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಭಾರತ ರತ್ನ ಪ್ರೊ.ಸಿ.ಎನ್.ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟನೆಆರೋಗ್ಯ ಇಲಾಖೆಯಲ್ಲಿ 51 ಮಂದಿಗೆ ಉದ್ಯೋಗ ಭಾಗ್ಯಅಪಘಾತದಲ್ಲಿ ಮೃತಪಟ್ಟ NHM ನೌಕರನ ಕುಟುಂಬಕ್ಕೆ ₹68 ಲಕ್ಷ ವಿಮೆ ಪರಿಹಾರ ಹಸ್ತಾಂತರ: ಇದು KSHCOEA - BMS ಸಂಘದ ಶ್ರಮಕ್ಕೆ ಸಂದ ಜಯಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಯೇ ಅಸಮರ್ಪಕ: ಸಚಿವ ಈಶ್ವರ ಖಂಡ್ರೆ ಆಕ್ರೋಶ