LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಂ-ಕಿಸಾನ್ ಯೋಜನೆ: ರೈತರಿಗೆ ಪ್ರತಿ ವರ್ಷ `ಬಯೋಮೆಟ್ರಿಕ್ ಇ-ಕೆವೈಸಿ’ ಕಡ್ಡಾಯ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನ ಪಡೆಯುತ್ತಿರುವ ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ 01-02-2019 ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತ ಕುಟುಂಬಕ್ಕೆ ವರ್ಷಕ್ಕೆ ಒಟ್ಟು ರೂ. 6,000 ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ ರೂ. 2,000 ರೂ.ಗಳಂತೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಮುಂದುವರಿಸಲು ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ಅಗ್ರಿಸ್ಟ್ಯಾಕ್ ಯೋಜನೆಯಡಿ ಗುರುತಿನ ಸಂಖ್ಯೆಯನ್ನು ಸೃಷ್ಟಿಸುವುದು ಕಡ್ಡಾಯವಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ಪಿ.ಎಂ.ಕಿಸಾನ್ ಯೋಜನೆಯಡಿ ಒಟ್ಟು 1,36,616 ಫಲಾನುಭವಿಗಳಿದ್ದಾರೆ. ತಾಲ್ಲೂಕುವಾರು ವಿವರ ಹೀಗಿದೆ: ಶಿವಮೊಗ್ಗ-18,065, ಭದ್ರಾವತಿ-18,920, ತೀರ್ಥಹಳ್ಳಿ-16,216, ಸಾಗರ-19,916, ಹೊಸನಗರ-12,634, ಶಿಕಾರಿಪುರ-25,196 ಹಾಗೂ ಸೊರಬ-25,669. ಈ ಪೈಕಿ ಇ-ಕೆವೈಸಿ ಬಾಕಿ ಇರುವ ರೈತರು ಕೂಡಲೇ ಅದನ್ನು ಪೂರ್ಣಗೊಳಿಸಬೇಕಾಗಿದೆ.

ಇ-ಕೆವೈಸಿ ಮಾಡಿಸುವ ವಿಧಾನ:

ರೈತರು ಎರಡು ವಿಧಾನಗಳ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು:

ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಿಗೆ (ಸಿಎಸ್ ಸಿ) ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸಬಹುದು.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 'PMKISAN e-KYC through FaceRecognition App' ಮೂಲಕ ಮುಖ (ಫೇಸ್) ದೃಢೀಕರಣದ ಆಧಾರದ ಮೇಲೆಯೂ ರೈತ ಸಂಪರ್ಕ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳಬಹುದು.

ಆದ್ದರಿಂದ ಜಿಲ್ಲೆಯ ಫಲಾನುಭವಿ ರೈತರು ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಾಕಿ ಇರುವ ಇ-ಕೆವೈಸಿಯನ್ನು ತಕ್ಷಣವೇ ಪೂರ್ಣಗೊಳಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾಗಿ: 7 ವರ್ಷಗಳ ನಂತರ ಭಾರತಕ್ಕೆ ಭೇಟಿಸಾಗರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ 'ಬ್ಲಾಕ್ ಕಾಂಗ್ರೆಸ್'ನಿಂದ ಕಾಗೋಡು ತಿಮ್ಮಪ್ಪ ಹುಟ್ಟುಹಬ್ಬ ಆಚರಣೆ‘ಉಳುವವನೇ ಒಡೆಯ’ ತತ್ವದಡಿ ಬಡವರಿಗೆ ಹಕ್ಕುಪತ್ರ ನೀಡಿ: ಸಾಗರದಲ್ಲಿ ಮಾಜಿ ಸಚಿವ ಹಾಲಪ್ಪ ಆಗ್ರಹBREAKING: KPSC ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸದಸ್ಯೆ ಶಾಂತಾ ಹೊಸಮನಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿಚೆನ್ನೈ ಆಭರಣ ಮಳಿಗೆಯಲ್ಲಿ ಬಿಐಎಸ್ ಹಾಲ್ ಮಾರ್ಕ್ ಇಲ್ಲದ ಚಿನ್ನಾಭರಣಗಳ ವಶಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿಸಾಗರದಲ್ಲಿ ಹಕ್ಕುಪತ್ರಕ್ಕಾಗಿ ಹೋರಾಟ: ಇದೊಂದು ಕೇವಲ ರಾಜಕೀಯ ಷಡ್ಯಂತ್ರವೆಂದ ಶಾಸಕ ಗೋಪಾಲಕೃಷ್ಣ ಬೇಳೂರುಮಂಡ್ಯದ ಬಸರಾಳು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ: ನೀರಿಲ್ಲದೆ ಬರದ ಭೀತಿ, ಕಣ್ಣೀರಿಡುತ್ತಿರುವ ಗ್ರಾಮಸ್ಥರುಮಂಡ್ಯ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕಮಂಡ್ಯದ ಕೆ.ಆರ್ ಪೇಟೆಯಲ್ಲಿ ಮೊರಾರ್ಜಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು