LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆ : ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು :  2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ ನೀಡುವ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ರಚಿಸಲಾಗಿರುವ ವಿಶೇಷ ಸದನ ಸಮಿತಿಯ ಮಧ್ಯಂತರ ವರದಿಯನ್ನು ಸಮಿತಿಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಬುಧವಾರ ಸಲ್ಲಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಪುಟ್ಟಣ್ಣ ಅವರು ಮಧ್ಯಂತರ ವರದಿಯನ್ನು ಸಚಿವರಿಗೆ ಹಸ್ತಾಂತರಿಸಿದರು.

ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಇರುವ ನಿಯಮಗಳು, ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನಿಯಮ ಸಡಿಲಿಕೆಗೆ ಸಂಬಂಧಿಸಿದ ಅಂಶಗಳನ್ನು ಸಮಿತಿ ಪರಿಶೀಲಿಸಿ ಮಧ್ಯಂತರ ವರದಿಯಲ್ಲಿ ಶಿಫಾರಸುಗಳನ್ನು ಒಳಗೊಂಡಿದೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುಜಿ ಸಿಇಟಿ ಸೀಟು ಹಂಚಿಕೆ ಮುಕ್ತಾಯ: ಎಂಜಿನಿಯರಿಂಗ್ 24,283 ಉಳಿಕೆ ಸೀಟು ಕಾಲೇಜುಗಳಿಗೆ ಹಸ್ತಾಂತರಗಣೇಶೋತ್ಸವ ಹಿನ್ನೆಲೆ: ಸೆ.13ರಿಂದ 27ರವರೆಗೆ ಈ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆ : ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪಗಣೇಶ ಹಬ್ಬದ ಆಚರಣೆ ಮತ್ತು ಮೆರವಣೆಗೆ ವೇಳೆ `DJ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ್ಯಾಲಿ ನಿಷೇಧ.!ಜನಸ್ನೇಹಿ ಹಾಗೂ ಪರಿಣಾಮಕಾರಿಯಾಗಿ ‘ಸಹಾಯ 3.0’ ತಂತ್ರಾಂಶ ಅಭಿವೃದ್ಧಿ: ಕೃಷ್ಣ ಬೈರೇಗೌಡಪಿಎಂ-ಕಿಸಾನ್ ಯೋಜನೆ: ರೈತರಿಗೆ ಪ್ರತಿ ವರ್ಷ `ಬಯೋಮೆಟ್ರಿಕ್ ಇ-ಕೆವೈಸಿ’ ಕಡ್ಡಾಯಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲಿನ ED ದಾಳಿ ರಾಜಕೀಯ ಪ್ರೇರಿತ: ಸಚಿವ ರಘುಮೂರ್ತಿರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆಗೆ ತಕ್ಷಣ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಇರಬಹುದೇ? ಪ್ರತ್ಯೇಕ ಕಾರ್ಡ್ ಪಡೆಯಲು ಇರುವ ನಿಯಮಗಳಿವು!ಈಶ್ವರ ಖಂಡ್ರೆ ಭೇಟಿ ಬೆನ್ನಲ್ಲೇ ಹಿರೇಹಳ್ಳಿ ಕೆರೆ ಒತ್ತುವರಿ ತೆರವು