LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತಪೆಟ್ಟಿಗೆಗಳ ಮಾಹಿತಿ ಸಲ್ಲಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಪೂರ್ವಭಾವಿ ಸಿದ್ಧತೆಗಳನ್ನು ಆರಂಭಿಸಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಲಭ್ಯವಿರುವ ಮತಪೆಟ್ಟಿಗೆಗಳ (ಬ್ಯಾಲೆಟ್ ಬಾಕ್ಸ್) ನಿಖರ ವಿವರವನ್ನು ತುರ್ತಾಗಿ ಸಲ್ಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ.

ಸರ್ಕಾರದ ಅಧಿಸೂಚನೆಯನ್ವಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಬ್ಯಾಲೆಟ್ ಬಾಕ್ಸ್‌ಗಳನ್ನು ಬಳಸಿ ನಡೆಸಬೇಕಿದೆ. ಈ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದೊಡ್ಡ ಗಾತ್ರದ ಮತಪೆಟ್ಟಿಗೆಗಳ ವರದಿಯನ್ನು ಇ-ಮೇಲ್ ಮೂಲಕ ಪಡೆಯಲಾಗಿತ್ತು. ಆದರೆ, ಇತ್ತೀಚೆಗೆ ಆಯೋಗದ ಕಾರ್ಯದರ್ಶಿಗಳು ಕೆಲವು ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ಕೆಲವೆಡೆ ಮತಪೆಟ್ಟಿಗೆಗಳನ್ನು ದಾಸ್ತಾನು ಪಟ್ಟಿಗೆ ಒಳಪಡಿಸದೆ ತಪ್ಪು ಮಾಹಿತಿ ನೀಡಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆಯೋಗ, ಗ್ರಾಮ ಪಂಚಾಯಿತಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗಳಿಗೆ ಅಗತ್ಯವಿರುವ ಎಲ್ಲ ಮತಪೆಟ್ಟಿಗೆಗಳ ಸಮಗ್ರ ವಿವರವನ್ನು ಆಯೋಗ ನೀಡಿರುವ ನಮೂನೆ 1 ರಿಂದ 4 ರಲ್ಲಿ ಭರ್ತಿ ಮಾಡಿ ಕಳುಹಿಸಬೇಕು ಎಂದು ಸೂಚಿಸಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಗಳ ಸಿದ್ಧತೆಗೆ ಇದು ಅತ್ಯಂತ ನಿರ್ಣಾಯಕ ವಿಷಯವಾಗಿರುವುದರಿಂದ, ಇದನ್ನು "ಅತೀ ಜರೂರು" ಎಂದು ಪರಿಗಣಿಸಿ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ ಸೆಪ್ಟೆಂಬರ್ 11, 2026ರ ಒಳಗೆ ತಪ್ಪದೇ ವರದಿ ಸಲ್ಲಿಸುವಂತೆ ಆಯೋಗದ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

news_1788949273_0_788.webp

 

news_1788949274_1_194.webp

 

news_1788949274_2_656.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ