ಇತ್ತೀಚಿನ ದಿನಗಳಲ್ಲಿ ಹಬ್ಬಗಳು ಮೆರವಣಿಗೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಹೆಚ್ಚಿನ ಡೆಸಿಬೆಲ್ ಡಿಜೆ ವ್ಯವಸ್ಥೆಗಳು, ಲೌಡ್‍ಸ್ಪೀಕರ್‍ಗಳು ಹಾಗೂ ಶಬ್ದ ವೃದ್ಧಿ ಸಾಧನಗಳ ಅತಿಯಾದ ಬಳಕೆಯಿಂದ ಸಾರ್ವಜನಿಕ ಶಾಂತಿ, ಆರೋಗ್ಯ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಶಬ್ದ ಮಾಲಿನ್ಯ ನಿಯಮಗಳಡಿ ಡಿಜೆ ವ್ಯವಸ್ಥೆಗಳು ಮತ್ತು ಹೆಚ್ಚಿನ ಡೆಸಿಬೆಲ್ ಶಬ್ದ ವೃದ್ಧಿ ಸಾಧನಗಳ ನಿಯಂತ್ರಣ, ನಿಷೇಧಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಆಜ್ಞೆ ಹೊರಡಿಸಿದ್ದಾರೆ.
ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮ) ನಿಯಮಗಳು, 2000 ರನ್ವಯ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್), 2023 ಕಲಂ 163 ರಡಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‍ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್ ಮೀರಿದ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿμÉೀಧಿಸಿ, ಆದೇಶಿಸಲಾಗಿದೆ.
ವಸತಿ ಪ್ರದೇಶಗಳು, ಸೈಲೆಂಟ್ ಝೋನ್‍ಗಳು ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶಗಳು, ರಸೆ ಸಂಚಾರ ದಟ್ಟಣೆ ಪ್ರದೇಶಗಳು, ಸಮುದಾಯ ಸೂಕ್ಷ್ಮ ಪ್ರದೇಶಗಳು ಹಾಗೂ ಇಡೀ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಜೆ ಅಥವಾ ಹೆಚ್ಚಿನ ಶಬ್ದ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿμÉೀಧಿಸಿ, ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಸಂಬಂಧಿಸಿದ ಪೆÇಲೀಸ್ ಠಾಣಾ ಅಧಿಕಾರಿಗಳಿಗೆ ಮೆರವಣಿಗೆ ಅಥವಾ ಕಾರ್ಯಕ್ರಮವನ್ನು ತಕ್ಷಣ ನಿಲ್ಲಿಸುವುದು, ಡಿಜೆ ಉಪಕರಣಗಳನ್ನು ಜಪ್ತಿ ಮಾಡುವುದು. ಅಗತ್ಯವಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು, ಗುಂಪನ್ನು ಚದುರಿಸುವುದು, ಸಂಬಂಧಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಹಾಗೂ ಮುಂದಿನ ಅನುಮತಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಈ ಮೂಲಕ ನೀಡಲಾಗಿದೆ. ಎಂದು ಆದೇಶಿಸಲಾಗಿದೆ.
ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯನ್ನು ಆಯೋಜಿಸುವವರು ಅತೀ ಅವಶ್ಯವಿದ್ದಲ್ಲಿ ಪೂರ್ವ ಲಿಖಿತ ಷರತ್ತು ಬದ್ದ ಮಿತ ಶಬ್ದ ವ್ಯವಸ್ಥೆಗ ಮಾತ್ರ ಪೆÇಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಶಬ್ದ ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಲಿಖಿತ ಮುಚ್ಚಳಿಕೆ ಪತ್ರ ನೀಡಬೇಕು ಹಾಗೂ ಈ ಆದೇಶದ ಉಲ್ಲಂಘನೆ ಸಂಭವಿಸಿದ್ದಲ್ಲಿ ಆಯೋಜಕರು ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶವನ್ನು ಹುಬ್ಬಳ್ಳಿ-ಧಾರವಾಡ ನಗರ, ಹುಬ್ಬಳಿ, ಪೆÇಲೀಸ್ ಆಯುಕ್ತರು, ಮತ್ತು ಧಾರವಾಡ ಜಿಲ್ಲೆ ಪೆÇಲೀಸ್ ಅಧೀಕ್ಷಕರು ಇವರು ತಕ್ಷಣದಿಂದ ಜಾರಿಗೆ ತರಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.