LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : "ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. 

ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ  ಅವರು ಗೃಹ ಕಚೇರಿ ಕೃಷ್ಣಾದಲ್ಲಿ  ಶುಕ್ರವಾರ ಸಿಎಂ‌ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. 

"ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸಕ್ರಿಯವಾಗಿ  ಪಾಲ್ಗೊಂಡಿದ್ದೆ" ಎಂದರು

ಸಿಂಧ್ಯಾ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಗೆ  ಇಂಜಿನಿಯರ್ ಹಾಗೂ ವೈದ್ಯಕೀಯ ಸೀಟುಗಳ ಮೀಸಲಾತಿಯನ್ನು ಏರಿಕೆ,  ನಿವೃತ್ತ ನೌಕರರಿಗೆ ಪಿಂಚಣಿ ಬಿಡುಗಡೆಗೆ ಮನವಿ ಸಲ್ಲಿಸಿದರು.

ಧಾರವಾಡ ಮತ್ತು ವಿಜಯಪುರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್  ಸ್ಥಳದ ಗುತ್ತಿಗೆ ಅವಧಿ ಮುಗಿದಿದ್ದು ಅವಧಿಯನ್ನು ಮುಂದುವರೆಸಬೇಕೆಂದು ಕೋರಿದರು.

ಕಟ್ಟಡ ನಿರ್ಮಾಣ ಕಾಮಗಾರಿಗೆ  ಅನುದಾನ ಬಿಡುಗಡೆಗೆ ಕೂಡ ಮನವಿ ಮಾಡಿದಾಗ, "ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರದಡಿ ಬಿಡುಗಡೆ ಮಾಡುವಂತೆ" ಸಿಎಂ ಸೂಚಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಬ್ಬ ವ್ಯಕ್ತಿಗೆ ಎಷ್ಟು ಬ್ಯಾಂಕ್ ಖಾತೆಗಳಿರಬೇಕು? ಹೆಚ್ಚು ಖಾತೆಗಳಿದ್ದರೆ ಲಾಭವೋ, ನಷ್ಟವೋ? ಇಲ್ಲಿದೆ ಮಾಹಿತಿBREAKING : ಗಣೇಶ ಚತುರ್ಥಿ ಹಿನ್ನೆಲೆ ಸೆ.14ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!ALERT : ಪೋಷಕರೇ ಎಚ್ಚರ : ಮಕ್ಕಳಿಗೆ ಬಾಟಲಿ ಹಾಲು ನೀಡುವಾಗ ಈ ತಪ್ಪು ಮಾಡಬೇಡಿ.!JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 28,721 ಹುದ್ದೆಗಳ ನೇಮಕಾತಿಗೆ `GBA’ ಗ್ರೀನ್ ಸಿಗ್ನಲ್.!BREAKING : ಬೆಂಗಳೂರಿನ ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಸಾರ್ವಜನಿಕರಲ್ಲಿ ಆತಂಕ ಸೃಷ್ಟಿBREAKING : ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ತಾತ್ಕಾಲಿಕ ಫಲಿತಾಂಶ ಪ್ರಕಟಗೌರಿ-ಗಣೇಶ ಹಬ್ಬಕ್ಕೆ ಗ್ರಾಹಕರಿಗೆ ಬಿಗ್ ಶಾಕ್ : ಹೂವು, ಹಣ್ಣು, ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆ.!ಮೊದಲ ಹೆಂಡತಿ ಇರುವಾಗಲೇ 2ನೇ ಪತ್ನಿಗೆ ಜೀವನಾಂಶದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪುBIG NEWS : ರಾಜ್ಯ`ಸರ್ಕಾರಿ ನೌಕರರೇ’ ಗಮನಿಸಿ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ