ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.
ಒಟ್ಟು 900 ಸ್ನಾತಕೋತ್ತರ ದಂತ ವೈದ್ಯಕೀಯ ಸೀಟುಗಳ ಪೈಕಿ ಮೊದಲ ಸುತ್ತಿನಲ್ಲೇ 858 ಸೀಟು ಹಂಚಿಕೆಯಾಗಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು.
ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆ.14ರೊಳಗೆ ಚಾಯ್ಸ್ ಆಯ್ಕೆ ಮಾಡಿಕೊಳ್ಳಬೇಕು. ಚಾಯ್ಸ್- 1 ಮತ್ತು ಚಾಯ್ಸ್- 2 ಆಯ್ಕೆ ಮಾಡಿದ ಅಭ್ಯರ್ಥಿಗಳು ಸೆ.15ರಿಂದ 16ರೊಳಗೆ ಶುಲ್ಕ ಪಾವತಿಸಬೇಕು.
ಚಾಯ್ಸ್- 1 ಆಯ್ಕೆ ಮಾಡಿದ ಅಭ್ಯರ್ಥಿಗಳು ಸೆ.15ರಿಂದ 17ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಸೆ.18ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.