LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ 2026–27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು 'ಸೇವಾ ಸಿಂಧು' ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 03, 2026 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದೆ.

ಲಭ್ಯವಿರುವ ಸೌಲಭ್ಯಗಳು:

ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಹೊಲಿಗೆ ಯಂತ್ರ ವಿತರಣೆ ಸೇರಿದಂತೆ ನಿಗಮಗಳ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಆಹ್ವಾನಿಸಿರುವ ನಿಗಮಗಳ ಪಟ್ಟಿ:

 

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)

 

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)

 

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (ನಿ)

 

ಅರ್ಹ ಸಾರ್ವಜನಿಕರು ಹಾಗೂ ಸಮುದಾಯದ ಫಲಾನುಭವಿಗಳು ಸರ್ಕಾರದ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಆಸಕ್ತರು ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ (http://sevasindhu.karnataka.gov.in) ಅರ್ಜಿ ಸಲ್ಲಿಸಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಬ್ಬ ವ್ಯಕ್ತಿಗೆ ಎಷ್ಟು ಬ್ಯಾಂಕ್ ಖಾತೆಗಳಿರಬೇಕು? ಹೆಚ್ಚು ಖಾತೆಗಳಿದ್ದರೆ ಲಾಭವೋ, ನಷ್ಟವೋ? ಇಲ್ಲಿದೆ ಮಾಹಿತಿBREAKING : ಗಣೇಶ ಚತುರ್ಥಿ ಹಿನ್ನೆಲೆ ಸೆ.14ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!ALERT : ಪೋಷಕರೇ ಎಚ್ಚರ : ಮಕ್ಕಳಿಗೆ ಬಾಟಲಿ ಹಾಲು ನೀಡುವಾಗ ಈ ತಪ್ಪು ಮಾಡಬೇಡಿ.!JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 28,721 ಹುದ್ದೆಗಳ ನೇಮಕಾತಿಗೆ `GBA’ ಗ್ರೀನ್ ಸಿಗ್ನಲ್.!BREAKING : ಬೆಂಗಳೂರಿನ ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಸಾರ್ವಜನಿಕರಲ್ಲಿ ಆತಂಕ ಸೃಷ್ಟಿBREAKING : ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ತಾತ್ಕಾಲಿಕ ಫಲಿತಾಂಶ ಪ್ರಕಟಗೌರಿ-ಗಣೇಶ ಹಬ್ಬಕ್ಕೆ ಗ್ರಾಹಕರಿಗೆ ಬಿಗ್ ಶಾಕ್ : ಹೂವು, ಹಣ್ಣು, ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆ.!ಮೊದಲ ಹೆಂಡತಿ ಇರುವಾಗಲೇ 2ನೇ ಪತ್ನಿಗೆ ಜೀವನಾಂಶದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪುBIG NEWS : ರಾಜ್ಯ`ಸರ್ಕಾರಿ ನೌಕರರೇ’ ಗಮನಿಸಿ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ