LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರ್ಗಿ : ಪ್ರೀತಿಗೆ ಕುಟುಂಬಸ್ಥರ ವಿರೋಧ : ಒಂದೇ ವೇಲ್ ನಲ್ಲಿ ನೇಣು ಬಿಗಿದುಕೊಂಡು ಯುವಕ, ಮಹಿಳೆ ಆತ್ಮಹತ್ಯೆ!

ಕಲಬುರಗಿ: ಪ್ರೀತಿಗೆ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದ ಯುವಕ ಹಾಗೂ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಗುಡ್ಡದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಚಿತ್ತಾಪುರ ಪಟ್ಟಣದ ನಿವಾಸಿ ಶರಣಮ್ಮ (32) ಹಾಗೂ ಯಾದಗಿರಿ ಜಿಲ್ಲೆಯ ಬಾಚವಾರ ಗ್ರಾಮದ ಬಸವರಾಜ್ (21) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿದ್ದು, ಇವರ ಪ್ರೀತಿ-ಪ್ರೇಮಕ್ಕೆ ಕುಟುಂಬದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಬೇಸತ್ತು ಇಬ್ಬರೂ ಈ ಹೆಜ್ಜೆಯಿಟ್ಟಿದ್ದಾರೆ ಎನ್ನಲಾಗಿದೆ.

ಇಬ್ಬರೂ ಕಳೆದ ಎರಡು-ಮೂರು ದಿನಗಳ ಹಿಂದೆಯೇ ಸಂಕನೂರು ಗ್ರಾಮದ ಗುಡ್ಡಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಶವಗಳು ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಚಿತ್ತಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ