LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸನಗರದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಜಿಂಕೆ ಮಾಂಸ ಸೀಜ್, ಆರೋಪಿ ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ನೆವಟೂರು ಗ್ರಾಮದಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿ ಮಾಂಸ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ದಿಢೀರ್ ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯನ್ನು ಸ್ಥಳೀಯ ನಿವಾಸಿ ನಿಂಗಪ್ಪ (ಲಿಂಗಪ್ಪ) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ

ನೆವಟೂರು ಗ್ರಾಮದ ವ್ಯಾಪ್ತಿಯಲ್ಲಿ ಕಾಡುಪ್ರಾಣಿಯ ಶಿಕಾರಿ ನಡೆದಿರುವ ಬಗ್ಗೆ ಸೆಪ್ಟೆಂಬರ್ 11ರಂದು ಅರಣ್ಯ ಸಂಚಾರಿ ದಳಕ್ಕೆ ಖಚಿತ ಸುಳಿವು ಲಭ್ಯವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿದಾಗ, ಜಿಂಕೆಯನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಸಿದ್ಧಪಡಿಸುತ್ತಿದ್ದ ದೃಶ್ಯ ಬೆಳಕಿಗೆ ಬಂದಿದೆ. ಸ್ಥಳದಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು, ಮಾಂಸ ಹಾಗೂ ಕೃತ್ಯಕ್ಕೆ ಬಳಸಲಾದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ನ್ಯಾಯಾಂಗ ಬಂಧನಕ್ಕೆ ಆರೋಪಿ

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸ್‌ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ ಅವರ ನೇತೃತ್ವದಲ್ಲಿ ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಈ ಕೃತ್ಯದಲ್ಲಿ ಇತರೆ ವ್ಯಕ್ತಿಗಳು ಶಾಮೀಲಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ