LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ಶಿಕ್ಷಕರಿಗೂ ರಾಜ್ಯ ಮಟ್ಟದ ಪ್ರಶಸ್ತಿ: ಸರ್ಕಾರದ ಚಿಂತನೆ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಖಾಸಗಿ ಶಾಲೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಶಿಕ್ಷಕರನ್ನೂ ಸಹ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಆನೇಕಲ್ ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಲ್ಲಿಸಿರುವ ವಿವಿಧ ನ್ಯಾಯಯುತ ಬೇಡಿಕೆಗಳು ಈಗಾಗಲೇ ಸರ್ಕಾರದ ಗಮನದಲ್ಲಿದ್ದು, ಅವುಗಳ ಈಡೇರಿಕೆಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಲಿದೆ ಎಂದು ಅವರು ಭರವಸೆ ನೀಡಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಯನ್ನು (ಟ್ರಾಫಿಕ್ ಜಾಮ್) ನಿಯಂತ್ರಿಸುವ ಸಲುವಾಗಿ ಶಾಲಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವಂತೆ ಮನವಿ ಸಲ್ಲಿಕೆಯಾಗಿದೆ. ಈ ವಿಷಯವಾಗಿ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳ ಜೊತೆ ವಿಸ್ತೃತವಾಗಿ ಚರ್ಚಿಸಿ, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅನುಕೂಲವಾಗುವಂತೆ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಇನ್ನು ಖಾಸಗಿ ಶಾಲೆಗಳ ಆರ್‌ಆರ್ ನವೀಕರಣದ ಸರಳೀಕರಣ ಹಾಗೂ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಮನೆ ಬಾಡಿಗೆ ಭತ್ಯೆಯನ್ನು (ಎಚ್‌ಆರ್‌ಎ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ಸಮಿತಿಯು ಶಿಫಾರಸು ಮಾಡಿದೆ. ಈ ಶಿಫಾರಸುಗಳ ಕುರಿತಾಗಿಯೂ ಶೀಘ್ರದಲ್ಲೇ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ