LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!

ಹಾವೇರಿ: ಕೆಟ್ಟು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕ ಹೊಡೆದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಲದಿನ್ನಿ ಗ್ರಾಮದ ನಿವಾಸಿಗಳಾದ ಮಾರುತಿ (41) ಹಾಗೂ ಅವರ ಮಗ ಪರಶುರಾಮ್ (15) ಅಪಘಾತದಲ್ಲಿ ಮೃತಪಟ್ಟ ದುರದೃಷ್ಟಕರ ದುರಂತಕ್ಕೊಳಗಾದವರಾಗಿದ್ದಾರೆ.

ಮಾರುತಿ ಅವರು ತಮ್ಮ ಪತ್ನಿ ಮಂಜುಳಾ ಮತ್ತು ಮತ್ತೊಬ್ಬ ಪುತ್ರ ನಂಜುಂಡ ಅವರೊಂದಿಗೆ ಹಿರಿಯೂರಿನಿಂದ ಸ್ವಗ್ರಾಮ ಚಿಕ್ಕಲದಿನ್ನಿಗೆ ಟಿವಿಎಸ್ ಎಕ್ಸೆಲ್ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ - 48ರ ಗುಂಡೇನಹಳ್ಳಿ ಕ್ರಾಸ್ ಸಮೀಪ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಯನ್ನು ಗಮನಿಸದೇ ಸ್ಕೂಟರ್ ಚಾಲಕ ಭರದಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ತಂದೆ-ಮಗ ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಮಾರುತಿ ಅವರ ಪತ್ನಿ ಮಂಜುಳಾ ಹಾಗೂ ಮತ್ತೊಬ್ಬ ಮಗ ನಂಜುಂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ಕರಗದ ಬೇಸಿಗೆಯ ಬಿಸಿ: ಮುಂದಿನ ಏಳರಿಂದ ಹತ್ತು ದಿನಗಳ ಕಾಲ ಒಣ ಹವಾಮಾನ ಮುಂದುವರಿಯುವ ಸಾಧ್ಯತೆBREAKING : ಬೆಂಗಳೂರಿನ ಸರ್ಕಾರಿ ಶಾಲೆಗಳ ಸಮಯ ಶೀಘ್ರ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ!Rain Alert : ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆBREAKING : KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ₹5 ಕೋಟಿಗೂ ಹೆಚ್ಚು ಅಕ್ರಮ ಹಣ ರವಾನೆ ಪತ್ತೆಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!