LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್

ಶಿವಮೊಗ್ಗ: ನಗರದ ಕೋಟೆ ದುರ್ಗಾಂಬ ದೇವಸ್ಥಾನದ ಸಮೀಪವಿರುವ ಪೂರ್ವ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ, ಕರ್ತವ್ಯನಿರತ ಸಂಚಾರ ಪೊಲೀಸ್ ಸಿಬ್ಬಂದಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿಯುತ್ತ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಗಣೇಶ ಚತುರ್ಥಿಯ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ನಿನ್ನೆ ನಗರದಲ್ಲಿ ವೈಭವದಿಂದ ಜರುಗಿತು. ಈ ವೇಳೆ ತುಂಗಾ ನದಿಯ ಭೀಮನ ಮಡಿಲಿನಲ್ಲಿ ಮೂರ್ತಿ ವಿಸರ್ಜನೆ ಮಾಡುವ ಪ್ರಕ್ರಿಯೆ ವೀಕ್ಷಿಸಲು ಹಾಗೂ ಬಂದೋಬಸ್ತ್ ಪರಿಶೀಲಿಸಲು ಶಾಸಕ ಚೆನ್ನಬಸಪ್ಪ ಅವರು ಸಂಚಾರಿ ಪೊಲೀಸ್ ಠಾಣೆ ಬಳಿಗೆ ಆಗಮಿಸಿದ್ದರು.

ಹೆಗಲ ಮೇಲೆ ಹೊತ್ತು ಕುಣಿದ ಸಿಬ್ಬಂದಿ

ಶಾಸಕರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ಟ್ರಾಫಿಕ್ ಪೊಲೀಸರು ಅತ್ಯುತ್ಸಾಹದಿಂದ ಅವರನ್ನು ತಮ್ಮ ಹೆಗಲ ಮೇಲೆ ಕೂರಿಸಿಕೊಂಡು ಕುಣಿಯುತ್ತಾ ಕೆಲ ದೂರ ಮೆರವಣಿಗೆ ಮಾಡಿದ್ದಾರೆ. ಮೆರವಣಿಗೆಯ ಜತೆಯಲ್ಲೇ ಸಿಬ್ಬಂದಿ ಸಂಭ್ರಮದಿಂದ ಕುಣಿದಾಡಿದ್ದು, ಅಲ್ಲಿದ್ದ ಸಾರ್ವಜನಿಕರು ಈ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆ

ಪೊಲೀಸ್ ಸಮವಸ್ತ್ರದಲ್ಲಿದ್ದ ಸಿಬ್ಬಂದಿಯೇ ಜನಪ್ರತಿನಿಧಿಯನ್ನು ಈ ರೀತಿ ಹೊತ್ತು ಕುಣಿದಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಪರ-ವಿರೋಧದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಗಣೇಶೋತ್ಸವದ ಸಂಭ್ರಮದಲ್ಲಿ ಉತ್ಸಾಹದಿಂದ ಹೀಗೆ ಮಾಡಿದ್ದಾರೆ ಎಂದು ಕೆಲವರು ಸಮರ್ಥಿಸಿಕೊಂಡರೆ, ಶಿಸ್ತಿನ ಇಲಾಖೆಯಾದ ಪೊಲೀಸ್ ವ್ಯವಸ್ಥೆಯಲ್ಲಿದ್ದುಕೊಂಡು ಸಮವಸ್ತ್ರದಲ್ಲಿ ಇಂತಹ ನಡವಳಿಕೆ ತೋರುವುದು ಸರಿಯಲ್ಲ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಪಿಜಿಸಿಇಟಿಗೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟBREAKING: ರಾಜ್ಯ ಸರ್ಕಾರದಿಂದ 'ಇಂಜಿನಿಯರ್‌'ಗಳಿಗೆ ಬಿಗ್ ಗಿಫ್ಟ್: ಇನ್ಮುಂದೆ ಹೆಸರಿನ ಮುಂದೆ 'Er' ಬಳಸಲು ಅನುಮತಿಸಿ ಆದೇಶ!ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸುವಂತೆ ಒತ್ತಾಯಿಸುವುದು ಆಕೆಯ ಘನತೆಯ ಹಕ್ಕಿಗೆ ಭಂಗ ತರುತ್ತದೆ: ದೆಹಲಿ ಹೈಕೋರ್ಟ್BIG NEWS: ನಾಳೆಯಿಂದ 5 ದಿನ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 'ಮದ್ಯ ಮಾರಾಟ' ನಿಷೇಧಶಾಸಕರನ್ನು ಹೆಗಲ ಮೇಲೆ ಹೊತ್ತು ಕುಣಿದ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್2,000 ರೂ.ಗಿಂತ ಹೆಚ್ಚಿನ UPI ಪಾವತಿಗಳಿಗೆ ಶುಲ್ಕ ವಿಧಿಸಲಾಗುತ್ತದೆಯೇ? ಹೊಸ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಟನೆಸೆ.17ರಿಂದ ಒಂದು ತಿಂಗಳ ಕಾಲ 'ಸೇವಾ ಸಂಕಲ್ಪ' ಅಭಿಯಾನ: ಕೇಂದ್ರ ಸಚಿವ ಜೆ.ಪಿ ನಡ್ಡಾಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ, ಇದನ್ನು ತೊಲಗಿಸಲು ನಾವು ಮುಂದಾಗಬೇಕು: ಜೆ.ಪಿ ನಡ್ಡಾ ಕರೆಹುರೂನ್‌ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಅಗ್ರಸ್ಥಾನ: ಗೃಹ ಸಚಿವ ಪ್ರಿಯಾಂಕ್ ಖರ್ಗೆJOB ALERT: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸೆ.18ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ