LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಕಲ್ಯಾಣ ಕರ್ನಾಟಕ ಉತ್ಸವ : ಧ್ವಜಾರೋಹಣಕ್ಕೆ ಸಚಿವರನ್ನು ನಿಯೋಜಿಸಿ ಸರ್ಕಾರ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ (ಕಲ್ಯಾಣ ಕರ್ನಾಟಕ ಉತ್ಸವ) ಅಂಗವಾಗಿ ಸೆಪ್ಟೆಂಬರ್ 17ರಂದು ಆ ಭಾಗದ 7 ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ಸಚಿವರುಗಳನ್ನು ನಿಯೋಜಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ರಾಜ್ಯ ಶಿಷ್ಟಾಚಾರ) ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ರವಾನಿಸಿದೆ.

ಜಿಲ್ಲಾವಾರು ಧ್ವಜಾರೋಹಣ ನೆರವೇರಿಸಲಿರುವ ಸಚಿವರ ವಿವರ:

  • ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ

  • ಬೀದರ್: ಸಚಿವ ಈಶ್ವರ್ ಖಂಡ್ರೆ

  • ಯಾದಗಿರಿ: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್

  • ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ

  • ಬಳ್ಳಾರಿ: ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ

  • ರಾಯಚೂರು: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್

  • ವಿಜಯನಗರ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ

ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗುವ ಅಧಿಕೃತ ಸರ್ಕಾರಿ ಸಮಾರಂಭದಲ್ಲಿ ನಿಯೋಜಿತ ಸಚಿವರು ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಲಿದ್ದಾರೆ.

news_1789472952_0_216.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯಿಂದ 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ಪ್ರಧಾನಿ ಮೋದಿ 76ನೇ ಜನ್ಮದಿನ: ನಾಳೆಯಿಂದ ಬಿಜೆಪಿ ವತಿಯಿಂದ ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನಪೋಷಕರೇ ಎಚ್ಚರ : ಬಾಲ್ಯವಿವಾಹ ಮಾಡಿಸಿದರೆ 2 ವರ್ಷ ಜೈಲು, ₹1 ಲಕ್ಷ ದಂಡ ಫಿಕ್ಸ್.!ಗೃಹಜ್ಯೋತಿ ಅಕ್ರಮ ತಡೆಗೆ ಮನೆ-ಮನೆ ಪರಿಶೀಲನೆ; ಡೋರ್‌ಲಾಕ್ ಮನೆಗಳಿಗೆ ನೋಟಿಸ್ ಕಡ್ಡಾಯ!BIG NEWS: ಇಂದಿನಿಂದ 5 ದಿನ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 'ಮದ್ಯ ಮಾರಾಟ' ನಿಷೇಧರಾಜ್ಯ ಜನತೆಗೆ ಬಿಗ್ ಶಾಕ್ : ಮತ್ತೆ ಅಕ್ಕಿ ದರ ಭಾರಿ ಏರಿಕೆ | Rice Price Hikeರಾಜ್ಯದ 956 ಸರ್ಕಾರಿ ಶಾಲೆಗಳಲ್ಲಿ ಹಣಕಾಸು ಶಿಕ್ಷಣ: ಬ್ಯಾಂಕಿಂಗ್, ಡಿಜಿಟಲ್ ವಹಿವಾಟು ಬಗ್ಗೆ ಪಾಠ.!ನಾಳೆ ಕಲ್ಯಾಣ ಕರ್ನಾಟಕ ಉತ್ಸವ : ಧ್ವಜಾರೋಹಣಕ್ಕೆ ಸಚಿವರನ್ನು ನಿಯೋಜಿಸಿ ಸರ್ಕಾರ ಆದೇಶಗ್ರಾಹಕರೇ ಗಮನಿಸಿ : 2 ದಿನಗಳ ಕಾಲ ಬೆಸ್ಕಾಂ ಆನ್ ಲೈನ್ ಸೇವೆ ಸ್ಥಗಿತರಾಜ್ಯ ಸರ್ಕಾರದಿಂದ 'ಇಂಜಿನಿಯರ್‌'ಗಳಿಗೆ ಬಿಗ್ ಗಿಫ್ಟ್ : ಇನ್ಮುಂದೆ ಹೆಸರಿನ ಮುಂದೆ 'Er' ಬಳಸಲು ಅನುಮತಿಸಿ ಆದೇಶ!