LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತನ ತೋಟದಲ್ಲಿ ಅದ್ಭುತ : ಪಪ್ಪಾಯಿ ಹಣ್ಣಿನಲ್ಲಿ ಮೂಡಿತು ವಿಘ್ನನಿವಾರಕ ಗಣೇಶನ ರೂಪ!

ವಿಜಯನಗರ: ಗಣೇಶ ಚತುರ್ಥಿಯ ಸಂಭ್ರಮದ ನಡುವೆಯೇ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡಗು ಗ್ರಾಮದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ರಾಮದ ರೈತ ಬಸವರಾಜ್ ಪಾಲ್ತೂರ್ ಎಂಬುವವರ ತೋಟದಲ್ಲಿ ಬೆಳೆದ ಪಪ್ಪಾಯಿ ಹಣ್ಣಿನಲ್ಲಿ ವಿನಾಯಕನ ಆಕೃತಿ ಪತ್ತೆಯಾಗಿದೆ. ಸಹೋದರನಿಗೆ ನೀಡಲು ತೋಟದಿಂದ ಕಿತ್ತು ತಂದಿದ್ದ ಪಪ್ಪಾಯಿಯನ್ನು ಗಮನಿಸಿದಾಗ ಅದರಲ್ಲಿ ಸ್ಪಷ್ಟವಾಗಿ ಗಣೇಶನ ರೂಪ ಗೋಚರಿಸಿದ್ದು, ಇದನ್ನು ಕಂಡ ರೈತ ಕುಟುಂಬ ಮತ್ತು ಗ್ರಾಮಸ್ಥರು ಆಶ್ಚರ್ಯಚಕಿತರಾಗಿದ್ದಾರೆ.

ಹಲವು ವರ್ಷಗಳಿಂದ ಮನೆಗೆ ಗಣೇಶನ ಮೂರ್ತಿ ತರಲು ಸಾಧ್ಯವಾಗದಿದ್ದ ಈ ಕುಟುಂಬಕ್ಕೆ, ಹಣ್ಣಿನ ರೂಪದಲ್ಲೇ ವಿಘ್ನನಿವಾರಕ ಒಲಿದು ಬಂದಂತಾಗಿದೆ. ಈ ವಿಸ್ಮಯಕಾರಿ ಘಟನೆಯಿಂದ ಹರ್ಷಗೊಂಡ ಬಸವರಾಜ್ ಅವರ ಕುಟುಂಬಸ್ಥರು, ಆ ಪಪ್ಪಾಯಿ ಹಣ್ಣನ್ನೇ ಪವಿತ್ರ ಗಣಪತಿಯ ಸ್ವರೂಪವೆಂದು ಭಾವಿಸಿ ಶಾಸ್ತ್ರೋಕ್ತವಾಗಿ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಪಾಲ್ತೂರ್ ಕುಟುಂಬದಲ್ಲಿ ಹಲವು ವರ್ಷಗಳ ಬಳಿಕ ಮತ್ತೆ ಗಣೇಶೋತ್ಸವದ ಅದ್ಧೂರಿ ಸಂಭ್ರಮ ಮನೆಮಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ