LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಪೊಲೀಸ್ ಕಾನ್‌ಸ್ಟೇಬಲ್ (ಕೆ.ಎಸ್.ಆರ್.ಪಿ, ಕೆ.ಎಸ್.ಐ.ಎಸ್.ಎಫ್, ಐ.ಆರ್.ಬಿ) ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಅಭ್ಯರ್ಥಿಗಳಿಗೆ ಸೂಚನೆಗಳು ಹಾಗೂ ನಿಯಮಗಳು:

ಮುಂಚಿತವಾಗಿ ಹಾಜರಾತಿ: ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಆರಂಭವಾಗುವ 2 ಗಂಟೆಗಳ ಮುಂಚಿತವಾಗಿಯೇ ಹಾಜರಾಗಬೇಕು. ಪ್ರವೇಶ ಪತ್ರದೊಂದಿಗೆ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿ (ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ) ತರುವುದು ಕಡ್ಡಾಯ.

200 ಮೀಟರ್ ನಿರ್ಬಂಧಿತ ಪ್ರದೇಶ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಜೆರಾಕ್ಸ್ ಹಾಗೂ ಇಂಟರ್ನೆಟ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ: ಪರೀಕ್ಷೆಗೆ ಸಂಬAಧಿಸಿದAತೆ ಸುಳ್ಳು ಸುದ್ದಿ ಅಥವಾ ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.

ಕೈಗೊಂಡ ಮುಂಜಾಗ್ರತಾ ಕ್ರಮಗಳು :

ಪರೀಕ್ಷಾ ಗೌಪ್ಯ ಸಾಮಗ್ರಿಗಳ ರಕ್ಷಣೆಗಾಗಿ ಜಿಲ್ಲಾ ಖಜಾನೆಯ ಒಳಗೆ ಮತ್ತು ಹೊರಗೆ 24/7 ಸಿಸಿಟಿವಿ ಕಣ್ಗಾವಲು ಹಾಗೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆಗೆ ತ್ರಿಸದಸ್ಯ ಮಾರ್ಗಾಧಿಕಾರಿಗಳ 5 ತಂಡಗಳನ್ನು ಮತ್ತು ಪ್ರತಿ ಕೇಂದ್ರಕ್ಕೆ ಒಬ್ಬ ವೀಕ್ಷಕರನ್ನು ನೇಮಿಸಲಾಗಿದೆ.

ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಜೆಸ್ಕಾಂ ವತಿಯಿಂದ ತಡೆರಹಿತ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಕೇಂದ್ರದಲ್ಲಿ ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕಾö್ಯನರ್, ಪಲ್ಸ್ ಆಕ್ಸಿಮೀಟರ್ ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್‌ಸೈಟ್‌ಗೆ (http://kea.kar.nic.in) ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!