LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಹಿತರಕ್ಷಣೆಗೆ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಣಯ ಅಂಗೀಕಾರ: ಸಿಎಂ

ಸಕಲೇಶಪುರ :  "ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕೆ. ಕಸ್ತೂರಿರಂಗನ್ ಸಮಿತಿ ವರದಿ ಬಗ್ಗೆ ಚರ್ಚಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ರೈತರಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.

ಸಕಲೇಶಪುರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುರುಳಿ ಮೋಹನ್ ಅವರ ನಿವಾಸದ ಬಳಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

"ಕಳೆದ ಎರಡು ದಿನಗಳಿಂದ ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಇಂದು ಸಕಲೇಶಪುರಕ್ಕೆ ಭೇಟಿ ನೀಡಿದ್ದೇನೆ. ಕಸ್ತೂರಿರಂಗನ್ ವರದಿಯಿಂದಾಗಿ ಈ ಭಾಗದ ಜನರಲ್ಲಿ ತೀವ್ರ ಕಳವಳವಿದೆ. ಈ ಹಿಂದೆ ನಮ್ಮ ಸರ್ಕಾರ ಈ ವರದಿಯನ್ನು ತಿರಸ್ಕರಿಸಿದ್ದರೂ, ಇದೀಗ ಈ ತಿಂಗಳ 27ರ ಒಳಗೆ ಕೇಂದ್ರಕ್ಕೆ ನಮ್ಮ ಅಭಿಪ್ರಾಯ ಕಳುಹಿಸಬೇಕಾಗಿದೆ" ಎಂದರು.

ಕಸ್ತೂರಿ ರಂಗನ್ ವರದಿ ಹಾಗೂ ಬರಪರಿಸ್ಥಿತಿ ಚರ್ಚೆಗೆ ವಿಶೇಷ ಅಧಿವೇಶನ

"ವಿಪಕ್ಷಗಳು ಅಧಿವೇಶನದಲ್ಲಿ ಬರ ಹಾಗೂ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸದ ಹಿನ್ನೆಲೆಯಲ್ಲಿ, ರೈತರ ಬೇಡಿಕೆಗಳನ್ನು ಆಲಿಸಲು ಮತ್ತು ಸೂಕ್ತ ಅಭಿಪ್ರಾಯ ರೂಪಿಸಲು ಹಾಗೂ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ" ಎಂದರು.

ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧ

"ಶಾಸನಸಭೆಯಲ್ಲಿ ಚರ್ಚಿಸುವ ಮುನ್ನ ಪ್ರತಿಯೊಂದು ಬಾಧಿತ ತಾಲೂಕಿಗೂ ಭೇಟಿ ನೀಡುವುದು ನನ್ನ ಕರ್ತವ್ಯ ಎಂದು ಭಾವಿಸಿ ಪ್ರವಾಸ ಮಾಡುತ್ತಿದ್ದೇನೆ.ಈಗಾಗಲೇ 4 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಇನ್ನೆರಡು ಜಿಲ್ಲೆಗಳಿಗೆ ಭೇಟಿ ನೀಡಬೇಕಿದೆ. ರೈತರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಅವರೂ ಮುಕ್ತವಾಗಿ ಅಭಿಪ್ರಾಯಗಳನ್ನು ನೀಡಿದ್ದಾರೆ. ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ" ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG BREAKING: ಬೆಂಗಳೂರಲ್ಲಿ 'ನಕಲಿ ಔಷಧಿ ಜಾಲ'ಕ್ಕೆ 'FDA ಸರ್ಜಿಕಲ್ ಸ್ಟ್ರೈಕ್': 16 ಫಾರ್ಮಸಿ ಲೈಸೆನ್ಸ್ ರದ್ದು!ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕೇಸರಿ ಶಾಲು ಧರಿಸಿ ಮಸೀದಿ ಮುಂದೆ ಪೂಜೆಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ: ವಿಪಕ್ಷಗಳ ಸಹಕಾರ ಕೋರಿದ ಸಚಿವ ಎನ್. ಚಲುವರಾಯಸ್ವಾಮಿSHOCKING: ಮದುವೆ ಆಗಲು ಹುಡುಗಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆBREAKING: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್, ಆರೋಪಿ ಪರಾರಿರೈತರ ಹಿತರಕ್ಷಣೆಗೆ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಣಯ ಅಂಗೀಕಾರ: ಸಿಎಂಬರಗಾಲದಿಂದ ಕಂಗೆಟ್ಟ ರೈತರ ಸಾಲ ಸಂಪೂರ್ಣ ಮನ್ನಾ ಮಾಡಿ: ಸರ್ಕಾರಕ್ಕೆ ಕುರುಬೂರು ಶಾಂತಕುಮಾರ್ ಆಗ್ರಹಕಸ್ತೂರಿ ರಂಗನ್ ವರದಿ; ಸರ್ವಪಕ್ಷ ನಿಯೋಗದ ಮೂಲಕ ಕೇಂದ್ರಕ್ಕೆ ರೈತರ ಅಭಿಪ್ರಾಯ ಮುಟ್ಟಿಸುತ್ತೇವೆ: ಸಿಎಂ ಡಿಕೆಶಿ