LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ: ವಿಪಕ್ಷಗಳ ಸಹಕಾರ ಕೋರಿದ ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯ ಕುರಿತು ಚರ್ಚಿಸಲು ಸೆಪ್ಟೆಂಬರ್ 21 ರಿಂದ 23ರವರೆಗೆ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನದಲ್ಲಿ ಕೇವಲ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ, ರಾಜ್ಯದ ಹಿತದೃಷ್ಟಿಯಿಂದ ಅರ್ಥಪೂರ್ಣ ಹಾಗೂ ಫಲಪ್ರದ ಚರ್ಚೆ ನಡೆಸಲು ಸಹಕರಿಸುವಂತೆ ಕೋರಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ವಿರೋಧ ಪಕ್ಷದ ನಾಯಕರಿಗೆ ಅಧಿಕೃತ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವರು ಪತ್ರ ರವಾನಿಸಿದ್ದು, ಸಂಕಷ್ಟದಲ್ಲಿರುವ ಅನ್ನದಾತರು ಮತ್ತು ಸಾರ್ವಜನಿಕರ ಪರವಾಗಿ ಪಕ್ಷಾತೀತ ನಿಲುವು ತಳೆಯಲು ಕೋರಿದ್ದಾರೆ.

124 ತಾಲೂಕುಗಳು ಬರಪೀಡಿತ: ಪ್ರತಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಬರಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವರದಿ ಆಧರಿಸಿ ಮೊದಲ ಎರಡು ಹಂತಗಳಲ್ಲಿ ರಾಜ್ಯದ 124 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹1 ಕೋಟಿ ತುರ್ತು ಹಣ ಬಿಡುಗಡೆ ಮಾಡಲಾಗಿದ್ದು, ಮೇವು ಹಾಗೂ ಕುಡಿಯುವ ನೀರಿಗೆ ಕೊರತೆಯಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರಸ್ತುತ 17 ಜಿಲ್ಲೆಗಳ 53 ತಾಲೂಕುಗಳಲ್ಲಿ 3ನೇ ಹಂತದ ಬೆಳೆ ನಷ್ಟ ಹಾಗೂ ಬರ ಪರಿಸ್ಥಿತಿಯ ಜಮೀನು ಮಟ್ಟದ ಸಮೀಕ್ಷೆ ಪ್ರಗತಿಯಲ್ಲಿದೆ.

ಸಾಲ ಮರುಪಾವತಿಗೆ ವಿನಾಯಿತಿ ಮತ್ತು ವಿಸ್ತರಣೆ

ಬರಪೀಡಿತ ತಾಲೂಕುಗಳ ರೈತರಿಗೆ ನೆರವಾಗಲು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ), ಕೃಷಿ ಸಾಲ, ಹೈನುಗಾರಿಕೆ, ರೇಷ್ಮೆ ಮತ್ತು ಮೀನುಗಾರಿಕೆ ಸಾಲಗಳ ಮರುಪಾವತಿಗೆ 12 ತಿಂಗಳ ಕಾಲಾವಕಾಶ (ಮೊರಟೋರಿಯಂ) ನೀಡಲಾಗಿದೆ. ಸಾಧಾರಣ ಬರ ಇರುವ ಕಡೆ ಸಾಲ ಮರುಪಾವತಿ ಅವಧಿಯನ್ನು 36 ತಿಂಗಳು ಮತ್ತು ತೀವ್ರ ಬರವಿರುವ ತಾಲೂಕುಗಳಲ್ಲಿ 60 ತಿಂಗಳವರೆಗೆ (5 ವರ್ಷ) ಮರುಹೊಂದಾಣಿಕೆ ಮಾಡಿ ವಿಸ್ತರಿಸುವಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ಜಲಾಶಯಗಳಲ್ಲಿ 100 ಟಿಎಂಸಿ ನೀರು ಕೊರತೆ: ಕಾವೇರಿ ಕೊಳ್ಳದಲ್ಲಿ ಬಿಕ್ಕಟ್ಟು

ಕಳೆದೆರಡು ವರ್ಷಗಳಿಗೆ ಹೋಲಿಸಿದರೆ ರಾಜ್ಯದ ಜಲಾಶಯಗಳಲ್ಲಿ ಈ ಬಾರಿ ಸುಮಾರು 100 ಟಿಎಂಸಿ ಅಡಿಗಳಷ್ಟು ನೀರಿನ ಸಂಗ್ರಹ ಕಡಿಮೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಂತೂ ಕೇವಲ ಶೇ. 20ರಷ್ಟು ಮಾತ್ರ ನೀರು ಬಂದಿದೆ. ರಾಜ್ಯದ ಪ್ರಮುಖ 22 ಜಲಾಶಯಗಳಲ್ಲಿ 357.54 ಟಿಎಂಸಿ ನೀರಿದ್ದು, ಶೇ. 66.78ರಷ್ಟು ಮಾತ್ರ ಭರ್ತಿಯಾಗಿವೆ. ಕಾವೇರಿ ವ್ಯಾಪ್ತಿಯ ಕೆಆರ್‌ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಒಟ್ಟು ಕೇವಲ 39.79 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಿಂದ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ನಗರಗಳಲ್ಲಿ ಬೇಸಿಗೆ ವೇಳೆ ಕುಡಿಯುವ ನೀರಿಗೆ ತತ್ವಾರ ಉಂಟಾಗುವ ಗಂಭೀರ ಮುನ್ಸೂಚನೆ ಸಿಕ್ಕಿದೆ.

ಬೆಂಗಳೂರಿಗೆ 2027ರ ಜನವರಿಯಿಂದಲೇ ನೀರಿನ ಸಂಕಷ್ಟದ ಭೀತಿ

ರಾಜಧಾನಿ ಬೆಂಗಳೂರಿಗೆ ಕಾವೇರಿ ನದಿಯಿಂದ ದಿನಂಪ್ರತಿ 2,225 ಎಂಎಲ್‌ಡಿ (ವರ್ಷಕ್ಕೆ 28.68 ಟಿಎಂಸಿ, ತಿಂಗಳಿಗೆ 2.35 ಟಿಎಂಸಿ) ನೀರನ್ನು ಜಲಮಂಡಳಿ ಪೂರೈಸುತ್ತಿದೆ. ಈ ಪೈಕಿ ಬಹುಪಾಲು ನೀರು ಕೆಆರ್‌ಎಸ್ ಅಣೆಕಟ್ಟಿನಿಂದಲೇ ಹರಿದುಬರುತ್ತದೆ. ಪ್ರಸ್ತುತ ಕೆಆರ್‌ಎಸ್‌ನಲ್ಲಿ 27.83 ಟಿಎಂಸಿ ನೀರಿದ್ದು, ಮುಂದಿನ ಮೇ ತಿಂಗಳವರೆಗೆ ಬೆಂಗಳೂರಿಗೆ ಸುಮಾರು 18.8 ಟಿಎಂಸಿ ನೀರು ಬೇಕಾಗಿದೆ. ಡೆಡ್ ಸ್ಟೋರೇಜ್ ಹೊರತುಪಡಿಸಿ ಬಳಕೆಗೆ ಸಿಗುವ 19.45 ಟಿಎಂಸಿಯಲ್ಲಿ ಬೆಂಗಳೂರಿಗೇ 18.8 ಟಿಎಂಸಿ ನೀಡಿದರೆ, ಉಳಿಯುವುದು ಕೇವಲ 0.65 ಟಿಎಂಸಿ ನೀರು ಮಾತ್ರ. ಇದು ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸುತ್ತದೆ.

ಕಸ್ತೂರಿ ರಂಗನ್ ವರದಿ ಮತ್ತು ಕೇಂದ್ರಕ್ಕೆ ರಾಜ್ಯದ ನಿಲುವು

ಕಸ್ತೂರಿ ರಂಗನ್ ವರದಿ ಜಾರಿಯಾದರೆ ಪಶ್ಚಿಮ ಘಟ್ಟ ಪ್ರದೇಶದ ರೈತರು, ಗ್ರಾಮೀಣ ನಿವಾಸಿಗಳು, ಸಣ್ಣ ಉದ್ಯಮಗಳು ಮತ್ತು ಸ್ಥಳೀಯ ಆರ್ಥಿಕತೆಯ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಹೋರಾಟಗಾರರು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಮೂರು ದಿನಗಳ ಅಧಿವೇಶನದಲ್ಲಿ ಅಂಕಿಅಂಶ ಹಾಗೂ ವಾಸ್ತವಾಂಶಗಳ ಆಧಾರದ ಮೇಲೆ ವಿಸ್ತೃತ ಚರ್ಚೆ ನಡೆಸಿ, ಕೇಂದ್ರ ಸರ್ಕಾರಕ್ಕೆ ರಾಜ್ಯದ ದೃಢ ನಿಲುವನ್ನು ಸ್ಪಷ್ಟಪಡಿಸಬೇಕಿದೆ.

ಆದ್ದರಿಂದ, ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನದಲ್ಲಿ ಸಕಾರಾತ್ಮಕವಾಗಿ ಪಾಲ್ಗೊಂಡು ಕಲಾಪ ಸುಗಮವಾಗಿ ನಡೆಯಲು ಸಂಪೂರ್ಣ ಬೆಂಬಲ ನೀಡಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.24ರಂದು ಸಿಎಂ ಡಿಕೆ ಶಿವಕುಮಾರ್ ಗಂಗಾಪೂಜೆ: ಚಿತ್ರದುರ್ಗದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ, ಟಿ.ರಘುಮೂರ್ತಿBIG NEWS: 'KSRP ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ' ಸುಗಮ: ಒಎಂಅರ್ ಪ್ರತಿ ವೆಬ್ ಸೈಟ್ ಗೆ 'KEA ಅಪ್ ಲೋಡ್'BIG BREAKING: ಬೆಂಗಳೂರಲ್ಲಿ 'ನಕಲಿ ಔಷಧಿ ಜಾಲ'ಕ್ಕೆ 'FDA ಸರ್ಜಿಕಲ್ ಸ್ಟ್ರೈಕ್': 16 ಫಾರ್ಮಸಿ ಲೈಸೆನ್ಸ್ ರದ್ದು!ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಮದ್ದೂರು ಗಣೇಶೋತ್ಸವ: ಕೇಸರಿ ಶಾಲು ಧರಿಸಿ ಮಸೀದಿ ಮುಂದೆ ಪೂಜೆಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ: ವಿಪಕ್ಷಗಳ ಸಹಕಾರ ಕೋರಿದ ಸಚಿವ ಎನ್. ಚಲುವರಾಯಸ್ವಾಮಿSHOCKING: ಮದುವೆ ಆಗಲು ಹುಡುಗಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆBREAKING: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್, ಆರೋಪಿ ಪರಾರಿರೈತರ ಹಿತರಕ್ಷಣೆಗೆ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಣಯ ಅಂಗೀಕಾರ: ಸಿಎಂ