LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಮುಂದೆ ಮದ್ಯದ ಬಾಟಲಿ ಮಾದರಿಯಲ್ಲಿ ಉಪ್ಪಿನ ಪ್ಯಾಕೆಟ್ ಮೇಲೆಯೂ ಬರಲಿದೆ ಎಚ್ಚರಿಕೆ ಸ್ಟಿಕರ್ : ಸಚಿವ ಯುಟಿ ಖಾದರ್!

ಬೆಂಗಳೂರು: ರಾಜ್ಯದಲ್ಲಿ ಉಪ್ಪು ಮತ್ತು ಸಕ್ಕರೆಯ ಅತಿಯಾದ ಬಳಕೆ ನಿಯಂತ್ರಿಸಲು ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಕ್ಕರೆ ಹಾಗೂ ಉಪ್ಪಿನ ಅನಿಯಂತ್ರಿತ ಬಳಕೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಈ ಕುರಿತು ಆರೋಗ್ಯ ಸಚಿವರು ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅತಿಯಾದ ಉಪ್ಪು ಮತ್ತು ಸಕ್ಕರೆ ಸೇವನೆಯಿಂದಾಗಿ ಜನರ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಹಿಂದೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಸಕ್ಕರೆ ಮತ್ತು ಉಪ್ಪನ್ನು ವಿತರಿಸಲಾಗುತ್ತಿತ್ತು. ಆದರೆ, ಇವುಗಳ ಅತಿಯಾದ ಬಳಕೆದಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಬ್ಸಿಡಿ ವಿತರಣೆಯನ್ನು ಈಗ ನಿಲ್ಲಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸಾರ್ವಜನಿಕರ ದೈಹಿಕ ಆರೋಗ್ಯಕ್ಕೆ ಪೂರಕವಾಗುವಂತಹ ಮತ್ತು ಹಾನಿಕಾರಕವಲ್ಲದ ರೀತಿಯ ಉಪ್ಪನ್ನು ಮಾತ್ರ ತಯಾರಿಸಿ ಮಾರಾಟ ಮಾಡುವಂತೆ ಉತ್ಪಾದಕರಿಗೆ ಆರೋಗ್ಯ ಇಲಾಖೆ ಸೂಕ್ತ ಸೂಚನೆ ಹಾಗೂ ಮಾರ್ಗದರ್ಶನ ನೀಡಿದೆ.

ಈ ಜಾಗೃತಿ ಅಭಿಯಾನದ ಭಾಗವಾಗಿ, ಮದ್ಯದ ಬಾಟಲಿಗಳ ಮೇಲೆ ನೀಡಲಾಗುವ ಆರೋಗ್ಯ ಎಚ್ಚರಿಕೆಯ ಮಾದರಿಯಲ್ಲೇ ಇನ್ಮುಂದೆ ಉಪ್ಪಿನ ಪ್ಯಾಕೆಟ್‌ಗಳ ಮೇಲೆಯೂ 'ಹಾನಿಕಾರಕ' ಎಂಬ ಎಚ್ಚರಿಕೆ ಸ್ಟಿಕ್ಕರ್ ಪ್ರಿಂಟ್ ಮಾಡುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ. ಉಪ್ಪಿನ ಅತಿಯಾದ ಬಳಕೆಯಿಂದಾಗುವ ಅಪಾಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ಈ ವಿಶಿಷ್ಟ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಸಂಸ್ಥೆಗಳಿಗೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!