LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2026-27ನೇ ಸಾಲಿನಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಮುಖ ಯೋಜನೆಗಳು ಮತ್ತು ಸೌಲಭ್ಯಗಳ ವಿವರ:

ಉದ್ಯೋಗಿನಿ ಯೋಜನೆ:

ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಕನಿಷ್ಠ ₹50,000/- ದಿಂದ ಗರಿಷ್ಠ ₹3.00 ಲಕ್ಷಗಳವರೆಗೆ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ಒದಗಿಸಲಾಗುತ್ತದೆ.

ವಯೋಮಿತಿ: 21 ರಿಂದ 55 ವರ್ಷ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ: ಆದಾಯ ಮಿತಿ ₹2.00 ಲಕ್ಷದೊಳಗಿರಬೇಕು. ಶೇ. 75 ರಷ್ಟು ಅಥವಾ ಗರಿಷ್ಠ ₹2.00 ಲಕ್ಷಗಳವರೆಗೆ ಸಹಾಯಧನ ಲಭ್ಯ.

ಇತರ ವರ್ಗದವರು: ಆದಾಯ ಮಿತಿ ₹1.50 ಲಕ್ಷದೊಳಗಿರಬೇಕು. ಶೇ. 30 ರಷ್ಟು ಅಥವಾ ಗರಿಷ್ಠ ₹90,000/- ಗಳವರೆಗೆ ಸಹಾಯಧನ ದೊರೆಯಲಿದೆ.

ಚೇತನ ಯೋಜನೆ:

ದಮನಿತ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ₹45,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ: 20 ರಿಂದ 55 ವರ್ಷ). ಈ ಯೋಜನೆಗೆ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಧನಶ್ರೀ ಯೋಜನೆ:

ಹೆಚ್.ಐ.ವಿ/ಏಡ್ಸ್ ಸೋಂಕಿತ ಅಥವಾ ಬಾಧಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ₹45,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ: 20 ರಿಂದ 55 ವರ್ಷ). ಇದಕ್ಕೂ ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ ಮಾದರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:

ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ₹45,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ: 20 ರಿಂದ 55 ವರ್ಷ).

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:

ಮಾಜಿ ದೇವದಾಸಿ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹45,000/- ಗಳ ಪ್ರೋತ್ಸಾಹಧನ ಒದಗಿಸಲಾಗುತ್ತದೆ (ವಯೋಮಿತಿ: 20 ರಿಂದ 55 ವರ್ಷ).

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ಷರತ್ತುಗಳು:

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar Seeding) ಮಾಡಿಸಿರಬೇಕು.

ಎಲ್ಲಾ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ (ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಅರ್ಜಿ ಸಲ್ಲಿಸಬಹುದು.

'ಚೇತನ' ಮತ್ತು 'ಧನಶ್ರೀ' ಯೋಜನೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಜಿಲ್ಲೆಯ ಉಪನಿರ್ದೇಶಕರು (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ) ಅಥವಾ ಅಭಿವೃದ್ಧಿ ನಿರೀಕ್ಷಕರು (ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ) ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು.

ಈ ಹಿಂದೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಈಗಾಗಲೇ ನಿಗಮದ ಯಾವುದೇ ಯೋಜನೆಯಲ್ಲಿ ಒಮ್ಮೆ ಪ್ರಯೋಜನ ಪಡೆದ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2026, ಸಂಜೆ 5:30 ರವರೆಗೆ.

ಹೆಚ್ಚಿನ ಮಾಹಿತಿಗಾಗಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು / ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು.

ದೂರವಾಣಿ ಸಂಖ್ಯೆ: 080-26632792 / 080-26632973

ವೆಬ್‌ಸೈಟ್: https://kswdc.karnataka.gov.in

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!