LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಒಗ್ಗೂಡಿ ಸ್ಪರ್ಧಿಸುವುದಾಗಿ ಬಿವೈ ವಿಜಯೇಂದ್ರ ಘೋಷಣೆ

ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಎರಡು ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದ್ದು, ಎಲ್ಲ 4 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ, ಒಂದುಗೂಡಿ ಚುನಾವಣೆ ಎದುರಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. 

ನಗರದಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಚುನಾವಣೆ ಎದುರಿಸುವ ಸಂಬಂಧ ಭಾರತೀಯ ಜನತಾ ಪಾರ್ಟಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರ ವಿಶೇಷ ಸಭೆ ಕರೆದಿದ್ದೆವು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಜೀ, ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಎಲ್ಲ ಮುಖಂಡರು, ಜಿಲ್ಲಾ ಅಧ್ಯಕ್ಷರು ಪ್ರಮುಖರು ಭಾಗವಹಿಸಿದ್ದಾಗಿ ವಿವರಿಸಿದರು.

ನಾಲ್ಕು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಜೆಡಿಎಸ್ ಪಕ್ಷ ಒಟ್ಟಾಗಿ- ಒಂದಾಗಿ ಚುನಾವಣೆ ಎದುರಿಸಬೇಕು. ನಾಲ್ಕು ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಆ ನಿಟ್ಟಿನಲ್ಲಿ ಒಟ್ಟಾಗಿ ಹೋರಾಟ ಮಾಡಬೇಕು ಅಂತ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು. ಕ್ಷೇತ್ರವಾರು ಯಾರ್ಯಾರು ಜವಾಬ್ದಾರಿ ಹೊಂದಿರಬೇಕು ಎಂಬುದರ ಘೋಷಣೆಯನ್ನು ಮಾಡಿದ್ದೇವೆ ಎಂದರು.

ಸಿಎಂ ಬಗ್ಗೆ ವಿಶ್ವಾಸ ಕಳಕೊಂಡ ಕಾಂಗ್ರೆಸ್ ಶಾಸಕರು

ರಾಜ್ಯದ ಆಡಳಿತ ಪಕ್ಷದಲ್ಲಿ ಕಾಂಗ್ರೆಸ್ ಶಾಸಕರೇ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸ ಕಳಕೊಳ್ಳುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ.  ಮುಖ್ಯಮಂತ್ರಿಗಳಿಗೆ ಆಡಳಿತದ ಮೇಲೆ ಹಿಡಿತ ಸಿಗುತ್ತಿಲ್ಲ ಎಂದು ಟೀಕಿಸಿದರು.

ಘೋಷಣೆಗೆ ಸೀಮಿತವಾದ ಸರ್ಕಾರ..

ಹಣಕಾಸು ಇಲಾಖೆಯು ಬರೆದ ಪತ್ರದ ಮೂಲಕ ಇದೆಲ್ಲ ಜಗಜ್ಜಾಹೀರಾಗಿದೆ. ಖಜಾನೆಯಲ್ಲಿ ಹಣ ಇಲ್ಲ. ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಒಂದಾಗಿ ಹೋರಾಟಗಳನ್ನು ಮಾಡುವುದು; ಯಾವ ರೀತಿ ಮುಂದೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯದಲ್ಲಿ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ತರುವ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!