LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾರವಾರ: ಲಾರಿ ಡಿಕ್ಕಿಯಾಗಿ ರಸ್ತೆಯಲ್ಲೇ ಹೊತ್ತಿ ಉರಿದ ಸ್ಕೂಟಿ ; ಚಕ್ರಕ್ಕೆ ಸಿಲುಕಿ ಸವಾರ ದುರಂತ ಸಾವು!

ಕಾರವಾರ: ತಾಲೂಕಿನ ಅರಗಾ ಸಮೀಪ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಮೃತಪಟ್ಟಿದ್ದಾರೆ. ಬಿಣಗಾ ನಿವಾಸಿ ಗಣಪತಿ ಗೌಡ (40) ಮೃತಪಟ್ಟ ದುರ್ದೈವಿ. ಬಿಣಗಾದಿಂದ ರಾಷ್ಟ್ರೀಯ ಹೆದ್ದಾರಿ 66ರ ಮಾರ್ಗವಾಗಿ ಕಾರವಾರದ ಭಾನುವಾರದ ಸಂತೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಾರವಾರದ ಕಡೆಯಿಂದ ಅಂಕೋಲಾ ಕಡೆಗೆ ಅತಿ ವೇಗವಾಗಿ ತೆರಳುತ್ತಿದ್ದ ಲಾರಿಯೊಂದು, ಗಣಪತಿ ಗೌಡ ಅವರು ಪ್ರಯಾಣಿಸುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರ ರಭಸಕ್ಕೆ ಸ್ಕೂಟಿಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮತ್ತೊಂದೆಡೆ, ಡಿಕ್ಕಿ ಹೊಡೆದ ಲಾರಿಯು ಸವಾರ ಗಣಪತಿ ಗೌಡ ಅವರ ಮೇಲೆಯೇ ಹರಿದುಕೊಂಡು ಹೋಗಿದ್ದರಿಂದ, ಅವರ ದೇಹವು ಲಾರಿಯ ಚಕ್ರಕ್ಕೆ ಸಿಲುಕಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ.

ಅಪಘಾತ ಎಸಗಿದ ತಕ್ಷಣ ಲಾರಿ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಲಾರಿ ಚಾಲಕ ಹಾಗೂ ವಾಹನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!