LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತರ ಮೇಲಿನ ದೌರ್ಜನ್ಯಕ್ಕೆ ಕಡಿವಾಣವೇ ಇಲ್ಲ? ಬಿಹಾರಕ್ಕೆ ಏನಾಗಿದೆ..? ಕಾನೂನು ಸುವ್ಯವಸ್ಥೆ ಬಗ್ಗೆ ಭಾರೀ ಚರ್ಚೆ

ಪಾಟ್ನಾ : ಬಿಹಾರದಲ್ಲಿ ಅಪ್ರಾಪ್ತ ವಯಸ್ಕರ ಮೇಲಿನ ಕಿರುಕುಳ ಹಾಗೂ ಹಲ್ಲೆ ಘಟನೆಗಳು ಸಾಲು ಸಾಲಾಗಿ ಬೆಳಕಿಗೆ ಬರುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿವೆ. ಇತ್ತೀಚಿನ ಘಟನೆಯಲ್ಲಿ, ಗಯಾ ಜಿಲ್ಲೆಯ ಶೇರ್ಘಾಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹುದಿಹ್ ಗ್ರಾಮದ ಬೆಟ್ಟದ ಬಳಿ ಅಪ್ರಾಪ್ತ ಬಾಲಕ ಮತ್ತು ಬಾಲಕಿಯ ಮೇಲೆ ಯುವಕರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದೆ.

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು, ತಕ್ಷಣವೇ ಕಾರ್ಯಪ್ರವೃತ್ತರಾಗಿ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯಂತೆ, ಅಪ್ರಾಪ್ತ ಬಾಲಕ ಮತ್ತು ಬಾಲಕಿ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಯುವಕರ ಗುಂಪೊಂದು ಅವರನ್ನು ತಡೆದು ನಿಲ್ಲಿಸಿದೆ. ಬಳಿಕ ಅವರ ಮೇಲೆ ಹಲ್ಲೆ ನಡೆಸಿ, ಬೈಕ್‌ನ ಕೀಲಿಗಳನ್ನು ಕಸಿದುಕೊಂಡು, ಟೈರ್‌ಗಳನ್ನು ಪಂಕ್ಚರ್ ಮಾಡಿ ಸ್ಥಳದಲ್ಲೇ ಒತ್ತೆಯಾಳಾಗಿರಿಸಿಕೊಂಡಿದ್ದರು.

ಮಂಗಳವಾರ ಈ ವಿಡಿಯೋ ಗಮನಕ್ಕೆ ಬರುತ್ತಿದ್ದಂತೆ ಶೇರ್ಘಾಟಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಎಸ್‌ಎಸ್‌ಪಿ ಸುಶೀಲ್ ಕುಮಾರ್ ತಿಳಿಸಿದ್ದಾರೆ.

ಮರುಕಳಿಸುತ್ತಿರುವ ಆಘಾತಕಾರಿ ಪ್ರಕರಣಗಳು:

ಬಿಹಾರದಲ್ಲಿ ಅಪ್ರಾಪ್ತರ ಹಾಗೂ ಮಹಿಳೆಯರ ಮೇಲಿನ ಕಿರುಕುಳದ ವೀಡಿಯೋಗಳನ್ನು ಹರಿದುಬಿಡುವ ಜಾಲ ಸಕ್ರಿಯವಾಗಿರುವುದು ಇತ್ತೀಚಿನ ಸರಣಿ ಘಟನೆಗಳಿಂದ ಸ್ಪಷ್ಟವಾಗುತ್ತಿದೆ:ಪ್ರಸಿದ್ಧ ಪ್ರವಾಸಿ ತಾಣವಾದ ಮಂದರ್ ಪರ್ವತದ ಬಳಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ವೀಡಿಯೋ ವೈರಲ್ ಆದ ನಂತರ, ಪೊಲೀಸರು ಆರು ಅಪರಿಚಿತ ಯುವಕರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯೊಬ್ಬಳ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಆರೋಪಿಯೊಂದಿಗಿನ ಸಂಬಂಧ ಹಾಗೂ ಸಾವಿನ ಸುತ್ತಲಿನ ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ.

ಅಪ್ರಾಪ್ತ ಬಾಲಕಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಿದ ವೀಡಿಯೋ ಹರಿದಾಡಿದ ಬೆನ್ನಲ್ಲೇ ಪೊಲೀಸರು ಬಿಎನ್‌ಎಸ್ (BNS), ಐಟಿ ಕಾಯ್ದೆ ಮತ್ತು ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ನಾಲ್ವರನ್ನು ಬಂಧಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಏಷ್ಯನ್ ಗೇಮ್ಸ್ 2026 : ಟ್ರ್ಯಾಪ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತದ ನೀರೂ–ಕೈನನ್‌ಗೆ ಚಿನ್ನದ ಪದಕಮಂಗಳೂರು: ಜೋಕಟ್ಟೆಯ MRPL‌ನಲ್ಲಿ ಭಾರಿ ಸ್ಪೋಟ, ಹೊತ್ತಿ ಉರಿದ ಕಾರ್ಖಾನೆ - ಮುಗಿಲೆತ್ತರಕ್ಕೆ ಚಿಮ್ಮಿದ ದಟ್ಟ ಹೊಗೆ!BREAKING : ಮುಂದಿನ ಶೈಕ್ಷಣಿಕ ವರ್ಷದಿಂದ KPS ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ: ಸಚಿವ ಮಧು ಬಂಗಾರಪ್ಪ ಘೋಷಣೆBIIG NEWS : 'SBI' ಗ್ರಾಹಕರಿಗೆ ಸಿಹಿ ಸುದ್ದಿ: ಲಾಗಿನ್ ಆಗದೆ ಬ್ಯಾಲೆನ್ಸ್, ವಹಿವಾಟು ಪರಿಶೀಲನೆಗೆ ಹೊಸ ಸೌಲಭ್ಯ!BREAKING : ವಿಜಯಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲು!ನವೆಂಬರ್ ಒಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಕಮಿಷನ್ ದಂಧೆಯ ದಾಖಲೆ ಬಹಿರಂಗ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ವಾರ್ನಿಂಗ್!‘ಹನುಮಾನ್ ಅಂಶ 2’ ತಾರಾಗಣದ ಸುತ್ತ ಕುತೂಹಲ: ಅಕ್ಷಯ್ ಕುಮಾರ್ ಅಭಿನಯದ ಬಗ್ಗೆ ನಿರ್ಮಾಪಕಿ ನೀಡಿದ ಹೇಳಿಕೆಯೇನು?ಅಪ್ರಾಪ್ತರ ಮೇಲಿನ ದೌರ್ಜನ್ಯಕ್ಕೆ ಕಡಿವಾಣವೇ ಇಲ್ಲ? ಬಿಹಾರಕ್ಕೆ ಏನಾಗಿದೆ..? ಕಾನೂನು ಸುವ್ಯವಸ್ಥೆ ಬಗ್ಗೆ ಭಾರೀ ಚರ್ಚೆಶಿವಸೇನೆ ನಾಯಕ ಪ್ರದೀಪ್ ಪುರ್ಣೇಕರ್ ಗುಂಡಿಕ್ಕಿ ಹತ್ಯೆಬಿಹಾರದಲ್ಲಿ ಅಧಿಕಾರಿ ದಂಪತಿ ಮನೆಗಳ ಮೇಲೆ ವಿಜಿಲೆನ್ಸ್ ದಾಳಿ: ₹1 ಕೋಟಿಗೂ ಅಧಿಕ ನಗದು, ಆಭರಣ, ಐಷಾರಾಮಿ ಕೈಗಡಿಯಾರಗಳು ಪತ್ತೆ