LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಕಾಂಗ್ರೆಸ್ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಟೈಸ್ ಕಾಪಿ ಬಿಡುಗಡೆಗೊಳಿಸಿದ ಅಧ್ಯಕ್ಷ ಮಂಜುನಾಥ್ ಗೌಡ

ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯ ಟೈಸ್ ಕಾಪಿಯನ್ನು ಬುಧವಾರ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು.

ಪಂದ್ಯಾವಳಿಯು ಅಕ್ಟೋಬರ್ 1ರಿಂದ 4ರವರೆಗೆ ನಾಲ್ಕು ದಿನಗಳ ಕಾಲ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಕೆ.ಜಿ. ಗ್ರೌಂಡ್ ನಲ್ಲಿ ನಡೆಯಲಿದ್ದು, ವಿವಿಧ ಕಾಲೇಜುಗಳ 30 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಯುವಜನರಲ್ಲಿ ಕ್ರೀಡಾಸ್ಫೂರ್ತಿ, ಆರೋಗ್ಯಕರ ಸ್ಪರ್ಧಾ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಆಶಯದಿಂದ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಈ ವೇಳೆ ಮಾತನಾಡಿದ ಮಂಜುನಾಥ್ ಗೌಡ ಅವರು, ಕ್ರೀಡೆ ಯುವಕರ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಸುವುದರ ಜೊತೆಗೆ ಶಿಸ್ತು, ತಂಡದ ಸಹಕಾರ ಹಾಗೂ ನಾಯಕತ್ವದಂತಹ ಮೌಲ್ಯಗಳನ್ನು ಬೆಳೆಸುವ ಪ್ರಮುಖ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ," ಎಂದು ತಿಳಿಸಿದರು.

"ಪಂದ್ಯಾವಳಿಯಲ್ಲಿ 2 ಲಕ್ಷಕ್ಕೂ ಅಧಿಕ ಬಹುಮಾನ ಮೊತ್ತ ಇರಲಿದ್ದು, ಯುವ ಕ್ರಿಕೆಟಿಗರು ತಮ್ಮ ಪ್ರತಿಭೆ ಪ್ರದರ್ಶಿಸಲು ಇದು ಉತ್ತಮ ಅವಕಾಶವಾಗಲಿದೆ ಎಂದು ಮಂಜುನಾಥ್ ಗೌಡ ತಿಳಿಸಿದ್ದಾರೆ.

ಈ ವೇಳೆ ಬಿಎಂಟಿಸಿ ಅಧ್ಯಕ್ಷರಾದ ಆರಾಧ್ಯ, ಯುವ ಕಾಂಗ್ರೆಸ್ ಸಾಂಸ್ಕೃತಿಕ ಮತ್ತು ಕ್ರೀಡಾ ಘಟಕದ ಅಧ್ಯಕ್ಷ ಭರತ್ ಯಾದವ್ ಜೆ. ಸೇರಿದಂತೆ ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಹಿತಿ ಸುರಕ್ಷತೆಯ ವ್ಯವಸ್ಥೆಗಾಗಿ ಬೆಸ್ಕಾಂಗೆ ISO ಪ್ರಮಾಣಪತ್ರಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭೀಕರ ಬಾಯ್ಲರ್ ಸ್ಫೋಟ: ಓರ್ವ ಸಾವು, 8 ಮಂದಿಗೆ ಗಾಯಮಂಗಳೂರು MRPL ಸ್ಫೋಟ ದುರಂತಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಸಂತಾಪ: ಸಮಗ್ರ ತನಿಖೆಗೆ ಆದೇಶಬಾವಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಶರಣುಮಣಿಪಾಲ ಕೆಎಂಸಿ ಆಸ್ಪತ್ರೆ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಯತ್ನ: ಐಸಿಯುನಲ್ಲಿ ಚಿಕಿತ್ಸೆ, ಸ್ಥಿತಿ ಗಂಭೀರ!ಬರ ಪರಿಹಾರ ನೀಡಿಲ್ಲ, ನಾವಿಟ್ಟ ಬೇಡಿಕೆ ಈಡೇರಿಸಿಲ್ಲ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್‌.ಅಶೋಕ್ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆರಾಜ್ಯದ ಜನತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ KSRTC ಬಸ್ ಟಿಕೆಟ್ ದರ ಹೆಚ್ಚಳವೆಂದ ಸಾರಿಗೆ ಸಚಿವರುಯುವ ಕಾಂಗ್ರೆಸ್ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಟೈಸ್ ಕಾಪಿ ಬಿಡುಗಡೆಗೊಳಿಸಿದ ಅಧ್ಯಕ್ಷ ಮಂಜುನಾಥ್ ಗೌಡಮುಂದಿನ 2 ತಿಂಗಳಲ್ಲಿ ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ: ಸಚಿವ ಬೈರತಿ ಸುರೇಶ್