LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಪಾರ್ಟ್ನರ್’ ಬಳಗದಿಂದ ಸ್ಪೆಷಲ್ ಗಿಫ್ಟ್: ಕೃಷ್ಣ ಅಜಯ್ ರಾವ್ ಸಿನಿಮಾದ ‘ಲವಲವಿಕೆ’ ಸಾಂಗ್ ರಿಲೀಸ್ ಡೇಟ್ ಫಿಕ್ಸ್!

ಸ್ಯಾಂಡಲ್‌ವುಡ್‌ನ ಕೃಷ್ಣ ಅಜಯ್ ರಾವ್ ಅಭಿನಯದ ಬಹುನಿರೀಕ್ಷಿತ ‘ಪಾರ್ಟ್ನರ್’ ಸಿನಿಮಾದ ಎರಡನೇ ಹಾಡು ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ‘ಲವಲವಿಕೆ’ ಎಂದು ಸಾಗುವ ಈ ಮೆಲೋಡಿ ಹಾಗೂ ಆಕರ್ಷಕ ಹಾಡು ಅಕ್ಟೋಬರ್ ಆರರಂದು ಬೆಳಿಗ್ಗೆ 11:11ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದೆ.

ಎಚ್‌ಪಿಆರ್ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಹರೀಶ್ ದೇವಿತಂದೆ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಿವತೇಜಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಜಯ್ ರಾವ್ ಜೊತೆಗೆ ಬೃಂದಾ ಆಚಾರ್ಯ ಹಾಗೂ ಸುಷ್ಮಿತಾ ಗೌಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ಗಿರಿ, ಗೌರವ್ ಶೆಟ್ಟಿ, ಮನೋಹರ, ಅರವಿಂದ್ ರಾವ್, ಚಿತ್ಕಳಾ ಬಿರಾದಾರ್, ಶ್ರೀಭವ್ಯ ಸೇರಿದಂತೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಚಿತ್ರಕ್ಕೆ ಸುಜ್ಞಾನ್ ಛಾಯಾಗ್ರಹಣ ಹಾಗೂ ಕೆ ಎಂ ಪ್ರಕಾಶ್ ಸಂಕಲನ ಮಾಡಿದ್ದು, ಮುರಳಿ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಡಿಗಿದೆ. ಮೊದಲ ಹಾಡಿಗೆ ಸಿಕ್ಕ ಉತ್ತಮ ಪ್ರತಿಕ್ರಿಯೆಯ ನಂತರ, ಇದೀಗ ಬಿಡುಗಡೆಯಾಗುತ್ತಿರುವ ಈ ಎರಡನೇ ಹಾಡಿನ ಮೇಲೆಯೂ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸಾಗರದಲ್ಲಿ ವನ್ಯಜೀವಿ ಸಪ್ತಾಹ ಅಂಗವಾಗಿ ಬೈಕ್ ಜಾಥಾ: ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆಗೃಹಲಕ್ಷ್ಮಿ ಹಣ ಬೇಕಾ? ಯಜಮಾನಿ ಹೆಸರಲ್ಲೇ ಇರಬೇಕು ಸಿಮ್ ಕಾರ್ಡ್: ರಾಜ್ಯ ಸರ್ಕಾರದ ಹೊಸ ರೂಲ್ಸ್ರೇಷನ್‌ ಕಾರ್ಡ್‌ದಾರರಿಗೆ ಗುಡ್ ನ್ಯೂಸ್: ಮನೆಯಲ್ಲೇ ಮೊಬೈಲ್ ಮೂಲಕ ‘e-KYC’ಗೆ ‘ಅನ್ನ ಸೇವೆ’ ಆ್ಯಪ್ ಬಿಡುಗಡೆ!BIG NEWS: SIR ವೇಳೆ ಭಾರೀ ಎಡವಟ್ಟು: ಬೆಂಗಳೂರಿನಲ್ಲಿ ಒಂದೇ ಕುಟುಂಬದ 8 ಜನರ ಹೆಸರು ಡಿಲೀಟ್ಅಂತರ್ಜಲ ಮರುಪೂರಣಕ್ಕೆ ಜಲಮೂಲಗಳ ಬಳಕೆ; ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿಕಾರ್ಗಲ್‌ನಲ್ಲಿ ವನ್ಯಜೀವಿ ಸಪ್ತಾಹದ ಬೈಕ್ ಜಾಥಾಕ್ಕೆ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಚಾಲನೆ: ಪ್ರಾಣಿಗಳ ಸಂರಕ್ಷಣೆಗೆ ಕರೆಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಯಶಸ್ವಿ: ಶೇ.74ರಷ್ಟು ಅಭ್ಯರ್ಥಿಗಳು ಹಾಜರುಶಿರೋಮಣಿ ಅಕಾಲಿ ದಳದ ನಾಯಕನ ಗುಂಡಿಕ್ಕಿ ಹತ್ಯೆ: ಕಾರಿನ ಡ್ಯಾಶ್‌ಕ್ಯಾಮ್‌ ನಲ್ಲಿ ಸೆರೆಯಾಯ್ತು ದೃಶ್ಯ6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ‘ಲವ್ ಜಿಹಾದ್’, ಮತಾಂತರ ವಿರುದ್ಧ ಕಠಿಣ ಕಾನೂನು: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿಗಾಂಜಾ ಮತ್ತಿನಲ್ಲಿ ಯುವಕರ ದುಷ್ಕೃತ್ಯ: 500 ರೂ.ಗಾಗಿ ಕೂಲಿ ಕಾರ್ಮಿಕನ ಕೊಲೆ