ಚಂಡೀಗಢ: ಶಿರೋಮಣಿ ಅಕಾಲಿದಳದ ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಲೂಧಿಯಾನದಲ್ಲಿ ನಡೆದಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರನೇ ಸಹೋದರನೇ ಕೊಲೆ ಮಾಡಿದ್ದಾನೆಂದು ಕುಟುಂಬ ಆರೋಪಿಸಿದೆ. ಶಿರೋಮಣಿ ಅಕಾಲಿ ದಳದ ನವತೇಜ್ ಸಿಂಗ್ ಅಲಿಯಾಸ್ ನೀತು ಹತ್ಯೆಗೀಡಾದವರು.
ಮನೆಗೆ ಮರಳುತ್ತಿದ್ದಾಗ ಲಾಧುವಾಲ್‌ನಲ್ಲಿ ಬೈಕ್‌ನಲ್ಲಿದ್ದ ಇಬ್ಬರು ದುಷ್ಕರ್ಮಿಗಳು ನವತೇಜ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನವತೇಜ್ ಸಿಂಗ್ ಅವರ ಟೊಯೊಟಾ ಇನ್ನೋವಾ ವಾಹನವನ್ನು ಅಡ್ಡಗಟ್ಟಿ ಇಬ್ಬರು ದುಷ್ಕರ್ಮಿಗಳು 13 ಸುತ್ತು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಕೊಲೆ ದೃಶ್ಯವು ನವತೇಜ್ ಅವರ ಇನ್ನೋವಾ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.
ಗಂಭೀರ ಸ್ಥಿತಿಯಲ್ಲಿದ್ದ ನವತೇಜ್ ಸಿಂಗ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಶಿದ್ದಾರೆ.
ಹನಿಟ್ರ್ಯಾಪ್ ಜಾಲಕ್ಕೆ ಬಿದ್ದು ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ನಾವಿಕ ಅರೆಸ್ಟ್
ನವದೆಹಲಿ: ಭಾರತೀಯ ನೌಕಾಪಡೆಯ ರಕ್ಷಣಾ ಇಲಾಖೆಯ ಅತ್ಯಂತ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಗೆ (PIO) ರವಾನಿಸುತ್ತಿದ್ದ ನೌಕಾಪಡೆಯ ನಾವಿಕನೊಬ್ಬನನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ.
ಹನಿಟ್ರ್ಯಾಪ್ ಬಲೆಗೆ ಬಿದ್ದು ನಾವಿಕ ಇಂತಹ ದೇಶದ್ರೋಹಿ ಕೃತ್ಯ ಎಸಗಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ನಾವಿಕನನ್ನು ಆಂಧ್ರಪ್ರದೇಶ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ.
ಈತ ನೌಕಾಪಡೆಯಲ್ಲಿ ತಾಂತ್ರಿಕ ಹುದ್ದೆಯಲ್ಲಿದ್ದುಕೊಂಡು ಸೇವೆ ಸಲ್ಲಿಸುತ್ತಿದ್ದ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಪಾಕಿಸ್ತಾನಿ ಮಹಿಳಾ ಏಜೆಂಟರೊಬ್ಬರ ಜೊತೆ ನಿಕಟ ಸಂಪರ್ಕ ಹೊಂದಿದ್ದ ಈತ, ಆಕೆಯ ಮಾತುಗಳಿಗೆ ಮರುಳಾಗಿ ಭಾರತೀಯ ಸೇನಾ ರಹಸ್ಯವನ್ನು ಬಾಯ್ಬಿಡುತ್ತಿದ್ದ.
ಸಾಮಾಜಿಕ ಜಾಲತಾಣಗಳ ಮೂಲಕ ನೌಕಾಪಡೆಯ ಯುದ್ಧನೌಕೆಗಳ ಚಲನವಲನ, ನೌಕಾನೆಲೆಗಳ ನಕ್ಷೆ ಹಾಗೂ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳು ಮತ್ತು ಫೋಟೋಗಳನ್ನು ಆಕೆಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು ನೀಡಿದ ರಹಸ್ಯ ಮಾಹಿತಿಯ ಆಧಾರದ ಮೇಲೆ ತಮಿಳುನಾಡು ಪೊಲೀಸರು ಹಾಗೂ ನೌಕಾಪಡೆಯ ಗುಪ್ತಚರ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕೊಯಮತ್ತೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆತನ ಬಳಿಯಿದ್ದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಹಾಗೂ ಡಿಜಿಟಲ್ ಸಾಧನಗಳನ್ನು ಜಪ್ತಿ ಮಾಡಲಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ.
ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಆರ್ಥಿಕ ವ್ಯವಹಾರಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ರಕ್ಷಣಾ ಪಡೆಗಳ ಸಿಬ್ಬಂದಿ ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಎಚ್ಚರದಿಂದಿರಬೇಕೆಂದು ರಕ್ಷಣಾ ಇಲಾಖೆ ಮತ್ತೊಮ್ಮೆ ಸೂಚನೆ ನೀಡಿದೆ.