LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಗರದಲ್ಲಿ 'ವನ್ಯಜೀವಿ ಸಪ್ತಾಹ ಬೈಕ್ ಜಾಥಾ'ಕ್ಕೆ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಶಿವಮೊಗ್ಗ: ಸಾಗರ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾ ಸೇವೆ ಆಂದೋಲನ ಸಭೆಗೂ ಮುನ್ನ 'ವನ್ಯಜೀವಿ ಸಪ್ತಾಹ-2026' ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಬೈಕ್ ಜಾಥಾಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜಂಟಿಯಾಗಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

news_1791195435_2_504.webp

ಮಾಹಿತಿ ಪ್ರದರ್ಶನ ವಾಹನ ಲೋಕಾರ್ಪಣೆ ಮತ್ತು ಸಿಬ್ಬಂದಿ ಜಾಥಾ

ಇದೇ ಸಂದರ್ಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಸಾರುವ ಅರಣ್ಯ ಇಲಾಖೆಯ ವಿಶೇಷ ಮಾಹಿತಿ ಡಿಸ್‌ಪ್ಲೇ (ಪ್ರದರ್ಶನ) ವಾಹನಕ್ಕೆ ಸಚಿವರು ಮತ್ತು ಶಾಸಕರು ಟೇಪ್ ಕತ್ತರಿಸಿ ಚಾಲನೆ ನೀಡಿದರು. ವನ್ಯಜೀವಿ ಸಪ್ತಾಹದ ಸಂದೇಶವಿರುವ ವಿಶೇಷ ಟೀ-ಶರ್ಟ್‌ಗಳನ್ನು ಧರಿಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು.

news_1791195435_3_826.webp

ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್, ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಪಟಗಾರ್, ಸಾಗರ ವಿಭಾಗದ ಡಿಸಿಎಫ್ ಮೊಹಮ್ಮದ್ ಫಯಾಜುದ್ದೀನ್, ಎಸಿಎಫ್ ಸುಮಾ, ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಬಿ., ಜೋರಡಿ ಆರ್ ಎಫ್ ಓ ಮೋಹನ್ ಕುಮಾರ್.ಎಸ್, ಕಾರ್ಗಲ್ ಆರ್ ಎಫ್ ಓ ಮಂಜುನಾಥ್ ಚನ್ನಣ್ಣನವರ್, ಆಯಾ ಉಪ ವಲಯದ ಡಿಆರ್‌ಎಫ್‌ಒ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

news_1791195435_1_529.webp

ವನ್ಯಜೀವಿ ಸಪ್ತಾಹದ ಹಿನ್ನೆಲೆ ಮತ್ತು ಉದ್ದೇಶ

ದೇಶದ ಶ್ರೀಮಂತ ಜೀವವೈವಿಧ್ಯತೆಯನ್ನು ಸಂರಕ್ಷಿಸಲು ಮತ್ತು ನೈಸರ್ಗಿಕ ಕಾಡುಗಳ ರಕ್ಷಣೆಗೆ ಸಾರ್ವಜನಿಕರನ್ನು ಸಜ್ಜುಗೊಳಿಸಲು ಪ್ರತಿವರ್ಷ ಅಕ್ಟೋಬರ್ ಮೊದಲ ವಾರದಲ್ಲಿ ದೇಶಾದ್ಯಂತ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತದೆ. ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಪಾಡುವಲ್ಲಿ ವನ್ಯಜೀವಿಗಳ ಪಾತ್ರ, ಕಾಡುಗಳ ಪ್ರಾಮುಖ್ಯತೆ ಹಾಗೂ ಸಂರಕ್ಷಣಾ ಕಾನೂನುಗಳ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವುದು ಈ ಅಭಿಯಾನದ ಪ್ರಮುಖ ಧ್ಯೇಯವಾಗಿದೆ.

news_1791195435_0_930.webp

ಪರಿಸರ ಸಮತೋಲನ ಮತ್ತು ಮಾನವ-ವನ್ಯಜೀವಿ ಸಂಘರ್ಷ ತಡೆ

ಇಂದಿನ ದಿನಗಳಲ್ಲಿ ನಗರೀಕರಣ ಮತ್ತು ಆವಾಸಸ್ಥಾನಗಳ ಕುಸಿತದಿಂದಾಗಿ ಮಾನವ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ಹೆಚ್ಚುತ್ತಿದ್ದು, ಅದನ್ನು ನಿಯಂತ್ರಿಸುವ ವಿಧಾನಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು ಸಪ್ತಾಹದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳು ಮಾನವನ ಅಸ್ತಿತ್ವಕ್ಕೆ ಶುದ್ಧ ಗಾಳಿ, ಜಲಮೂಲ ಹಾಗೂ ಹವಾಮಾನ ನಿಯಂತ್ರಣ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಅವುಗಳ ಉಳಿವಿಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ.

news_1791195877_0_836.webp

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸಿಇಓ ರಿಷಿ ಆನಂದ್, ಸಾಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಆರ್ ಜಯಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯ ಸೋಮಶೇಖರ ಲಾವಿಗೇರೆ, ನಗರ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು...

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!