LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

ಬೆಂಗಳೂರು : ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಗ್ರಾಮ ಪಂಚಾಯತಿಗಳ ಮೀಸಲಾತಿ ಪೂರ್ಣಗೊಂಡಿದೆ.  ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಮೀಸಲಾತಿ ಪ್ರಕ್ರಿಯೆಯೂ ಮುಗಿದಿದ್ದು ಕರಡು ಅಧಿಸೂಚನೆ ಹೊರಡಿಸಲು ಸಿದ್ಧವಾಗಿದ್ದೇವೆ. ಆದರೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕೇಂದ್ರ ಚುನಾವಣೆ ಆಯೋಗದ ಅನುಮತಿ ಕೇಳಲಾಗಿದ್ದು, ಅನುಮತಿ ಸಿಕ್ಕರೆ ತಕ್ಷಣ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಕರಡು ಅಧಿಸೂಚನೆ ಪ್ರಕಟವಾದ ಬಳಿಕ ಆಕ್ಷೇಪಣೆ ಸಲ್ಲಿಸಲು ನಿಯಮಾನುಸಾರ ಕಾಲಾವಕಾಶ ನೀಡಿ, ಪ್ರಕ್ರಿಯೆಯ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿ, ಉಚ್ಚ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಕೆ ಮಾಡಲಾಗುವುದು. ಬಳಿಕ ರಾಜ್ಯ ಚುನಾವಣೆ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ನಿಮ್ಮ ಸರಿಯಾದ ಜಾಗ ಜೈಲು’..! ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂಕೋರ್ಟ್ ತೀವ್ರ ತರಾಟೆಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಸರ್ಕಾರದಿಂದ ಅಧಿಸೂಚನೆಬದಲಾಯಿಸಿದ ಫಾರ್ಮ್-6ಗೆ ನಾವು ಅನುಮೋದನೆ ನೀಡಿಲ್ಲ..! ಸುಪ್ರೀಂಕೋರ್ಟ್ ಖಡಕ್ ಸ್ಪಷ್ಟನೆಬಾಲಕಿಯ ಮೇಲೆ ತಂದೆಯಿಂದ ಅತ್ಯಾಚಾರ ಆರೋಪ; ತಾಯಿ ನಗ್ನ ಚಿತ್ರ ತೆಗೆದಿದ್ದಾಳೆ ಎಂದು ದೂರು.!BREAKING: ನಟ ಶಿವರಾಜ್ ಕುಮಾರ್ ಸನಿಹದಲ್ಲೇ ಪಟಾಕಿ ಸ್ಫೋಟ: ಕೂದಲೆಳೆ ಅಂತರದಲ್ಲಿ ಅಪಾಯದಿಂದ ಹ್ಯಾಟ್ರಿಕ್ ಹೀರೋ ಪಾರುರೈತರಿಗೆ ಸಿಹಿಸುದ್ದಿ: ಮೋಜಿಣಿ ಜಮೀನು ಅಳತೆ ಪರಿಷ್ಕೃತ ಶುಲ್ಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ ಟ್ರೇಲರ್ ರಿಲೀಸ್ |WATCH VIDEOಕಾಂಗೋ ನದಿಯಲ್ಲಿ ಎರಡು ದೋಣಿ ಡಿಕ್ಕಿ: ಕನಿಷ್ಠ 30 ಮಂದಿ ಸಾವು, ಹಲವರು ನಾಪತ್ತೆBREAKING : ಬ್ರಿಟಿಷ್ ಏರ್‌ವೇಸ್ ವಿಮಾನದಲ್ಲಿ ತಾಂತ್ರಿಕ ದೋಷ ; 28,000 ಅಡಿ ಏಕಾಏಕಿ ಕುಸಿತ, ತುರ್ತು ಪರಿಸ್ಥಿತಿಬಾಲ್ಯದಲ್ಲಿ ಲೈಂಗಿಕ ಕಿರುಕುಳ.. 20ನೇ ವಯಸ್ಸಿನಲ್ಲಿ ತಾತನ ವಿರುದ್ಧ ಪ್ರತೀಕಾರ..! ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಹತ್ಯೆ