LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದಿಂದ ತೀವ್ರಗೊಂಡ ಪ್ರತಿಭಟನೆ: ಚುನಾವಣಾ ಆಯೋಗಕ್ಕೆ ಮುತ್ತಿಗೆ ಯತ್ನ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಸಂಸತ್ ಭವನದಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿ ‘ನಿರ್ವಚನ ಸದನ’ದವರೆಗೆ ಮಂಗಳವಾರ ಬೃಹತ್ ಪಾದಯಾತ್ರೆ ನಡೆಸಿದ್ದಾರೆ.

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ,ವೇಣುಗೋಪಾಲ್, ಸೇರಿದಂತೆ ವಿಪಕ್ಷಗಳ ನಾಯಕರು ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಿಸಿದ್ದರು. ಆಯೋಗವು “ವಂಚನಾ ಆಯೋಗ”ವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ನಾಯಕರು, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಿಇಸಿ ವಿರುದ್ಧ ಮಹಾಭಿಯೋಗ ನಿರ್ಣಯ ತರಲು ನೀಲನಕ್ಷೆ ಸಿದ್ಧಪಡಿಸಿದ್ದಾರೆ.

ಈ ವೇಳೆ ಪ್ರತಿಭಟನಾ ನಾಯಕರು ಚುನಾವಣಾ ಆಯೋಗದ ಕೇಂದ್ರ ಕಚೇರಿ ‘ನಿರ್ವಚನ ಸದನ’ಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಚುನಾವಣಾ ಆಯೋಗದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ವೇಳೆ ಕಚೇರಿ ಹಿಂಭಾಗದಿಂದ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಕಚೇರಿ ಹಿಂಭಾಗದಲ್ಲಿಯೂ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರಿಂದ ಪ್ರತಿಭಟನಾಕಾರರು ಸ್ಥಳದಲ್ಲೇ ಕುಳಿತು ಧರಣಿ ಮುಂದುವರೆಸಿದರು.

ಇದೇ ವೇಳೆ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ಆಯೋಗದ ಕಚೇರಿಯ ಹೊರಗೆ ಧರಣಿ ನಡೆಸಿದರು. ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಲು ಎಂದು ಆಗ್ರಹಿಸಿದರು.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನಚಕಮಕಿ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಕೆಲ ನಾಯಕರನ್ನು ವಶಕ್ಕೆ ಪಡೆದು ವಾಹನದಲ್ಲಿ ತುಂಬಿ ಕರೆದೊಯ್ದಿದ್ದಾರೆ.

ಅಕ್ಟೋಬರ್ 10-20: ಬ್ಲಾಕ್ ಮಟ್ಟದಲ್ಲಿ ಬೈಕ್-ಸೈಕಲ್ ರ್ಯಾಲಿ ಹಾಗೂ ಪ್ರತಿಕೃತಿ ದಹನ. ಅಕ್ಟೋಬರ್ 25-ನವೆಂಬರ್ 25ರಂದು ದೇಶಾದ್ಯಂತ ಬೂತ್ ಮಟ್ಟದಲ್ಲಿ “ವೋಟ್ ಬಚಾವೋ” ಚೌಪಾಲ್ ಸಭೆಗಳು ನಡೆಯಲಿವೆ.

ನವೆಂಬರ್ 1 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಜನಾಕ್ರೋಶ ಸಮಾವೇಶ. ನವೆಂಬರ್ 25-26: ‘ಚಲೋ ದೆಹಲಿ’ ಮೂಲಕ ಸಂವಿಧಾನ ದಿನದಂದು ರಾಜಧಾನಿ ಮುತ್ತಿಗೆ ನಡೆಯಲಿದೆ. ಚುನಾವಣಾ ಆಯೋಗದ ನಿರ್ಧಾರಗಳ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಮುಂದುವರೆಸಿದ್ದು, ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆವರೆಗೂ ಈ ಹೋರಾಟ ತೀವ್ರಗೊಳಿಸಲು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ನಿರ್ಧರಿಸಿವೆ.

ಸಜಾ ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಡಿಐಜಿ: ಬಂಧಿತ ಜೈಲಾಧಿಕಾರಿಯ ಮತ್ತಷ್ಟು ಕರ್ಮಕಾಂಡ ಬಯಲು

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಅವರ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ.

2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನ ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ಆಧಾರದ ಮೇಲೆ ಬಿಡುಗಡೆ ಮಾಡಲಾಗಿತ್ತು. ಶಂಕರ್ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಕಲಿ ದಾಖಲೆಯನ್ನ ಜೈಲಿನ ಎಸ್‌ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪವಿದೆ. ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಐಜಿ ಸೋಮಶೇಖರ್ ಹಾಗೂ ಶ್ರೀಕಾಂತ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಡುಗಡೆ ನಂತರ ಪತ್ನಿಗೆ ಕೈದಿ ಶಂಕರ್ ಕೈಕೊಟ್ಟಿದ್ದರಿಂದ ಪ್ರಕರಣ ಬಹಿರಂಗವಾಗಿದೆ ಎನ್ನಲಾಗಿದ್ದು, ಪತಿ ಮತ್ತೊಂದು ಮದುವೆಯಾಗಿದ್ದಕ್ಕೆ ಕೋಪಗೊಂಡ ಪತ್ನಿ ಸತ್ಯ ಹೇಳಿರುವ ಮಾಹಿತಿ ಲಭ್ಯವಾಗಿದೆ.

‎ಅನಾಮಧೇಯ ಪತ್ರದ ಆಧಾರದ ಮೇಲೆ ಕಾರಾಗೃಹ ಇಲಾಖೆ ತನಿಖೆ ನಡೆಸಿದಾಗ ಬೃಹತ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಅಪಹರಣ, ಕೊಲೆ ಪ್ರಕರಣದಲ್ಲಿ ಶಂಕರ್ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಜೈಲಿಗೆ ಭೇಟಿ ನೀಡುತ್ತಿದ್ದ ಶಂಕರ್ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು, 2018ರಲ್ಲಿ ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕರಾಗಿದ್ದ ಸೋಮಶೇಖರ್ ಸಹಾಯ ಮಾಡಿದ್ದರು.

ಸಜಾ ಬಂದಿಗಳ ವಿಭಾಗದ ಸಿಬ್ಬಂದಿ ಶ್ರೀಕಾಂತ್‌ಗೆ ನಕಲಿ ದಾಖಲೆ ಸೃಷ್ಟಿಸಲು ಸೂಚಿಸಿದ್ದ ಸೋಮಶೇಖರ್, ಸುಪ್ರೀಂಕೋರ್ಟ್‌ನ ನಕಲಿ ಆದೇಶ ಇಟ್ಟುಕೊಂಡು 2018ರಲ್ಲಿ ಶಂಕರ್​​ನ ಜೈಲಿನಿಂದ ಬಿಡುಗಡೆ ಮಾಡಿದ್ದರು ಎನ್ನಲಾಗಿದೆ.

ತನಿಖೆಗೆ ಅಸಹಕಾರ ಹಿನ್ನೆಲೆ ಇತ್ತೀಚೆಗೆ ಶಂಕರ್ ಹಾಗೂ ಶ್ರೀಕಾಂತ್‌ನನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಶಂಕರ್‌ ಪತ್ನಿಗೆ ಡಿಐಜಿ ವಿಡಿಯೋ ಕರೆ ಮಾಡಿರೋದು ಪತ್ತೆಯಾಗಿದೆ. ‎ವಿಡಿಯೋ ಕಾಲ್‌ನಲ್ಲಿ ವಿವಸ್ತ್ರವಾಗುವಂತೆ ಡಿಐಜಿ ಸೋಮಶೇಖರ್‌ ಹೇಳಿದ್ದು, ‎ವಿಡಿಯೋ ವಶಕ್ಕೆ ಪಡೆದ ಪೊಲೀಸರು ಅದನ್ನು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ಶಂಕರ್ ಪತ್ನಿ ಮನೆಗೆ ಹೋಗದೇ ಬೇರೊಬ್ಬಳನ್ನು ಎರಡನೇ ಮದುವೆಯಾಗಿದ್ದ. ಇದರಿಂದ ಕೋಪಗೊಂಡ ಶಂಸ್ಕರ್ ಪತ್ನಿ, ಅನಾಮಧೇಯ ಪತ್ರದ ಮೂಲಕ ಇಡೀ ಪ್ರಕರಣ ಬಯಲಿಗೆಳೆದಿದ್ದಾಳೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS: ರೆಬೆಲ್ ಸ್ಟಾರ್ ಅಂಬರೀಶ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪತ್ರದೆಹಲಿಯ ನಿವಾಸಿ ಆಯುಕ್ತ ಸಮೀರ್ ಶುಕ್ಲಗೆ ಬೀಳ್ಕೊಡುಗೆ ನೀಡಿದ ಈಶ್ವರ ಖಂಡ್ರೆBREAKING: KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ED ದಾಳಿಚಿಕ್ಕಮಗಳೂರಲ್ಲಿ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲುಜನರಲ್ಲಿ ಭಯ ಭೀತಿಯನ್ನು ಹುಟ್ಟಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ: ಛಲವಾದಿ ನಾರಾಯಣಸ್ವಾಮಿ‘ದಿ ವಾನ್’ ಸಕ್ಸಸ್ ನಡುವೆ ಆಧ್ಯಾತ್ಮಿಕ ಕಥೆ ಬಿಚ್ಚಿಟ್ಟ ತಮನ್ನಾ: ನಟ ಸಿದ್ಧಾರ್ಥ್ ಮಲ್ಹೋತ್ರಾಗೆ ಸದ್ಗುರು ಆಶ್ರಮದ ಕನೆಕ್ಷನ್!ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದಿಂದ ತೀವ್ರಗೊಂಡ ಪ್ರತಿಭಟನೆ: ಚುನಾವಣಾ ಆಯೋಗಕ್ಕೆ ಮುತ್ತಿಗೆ ಯತ್ನದೆಹಲಿಯ ನಿವಾಸಿ ಆಯುಕ್ತ ಸಮೀರ್ ಶುಕ್ಲಗೆ ಸಚಿವ ಈಶ್ವರ ಖಂಡ್ರೆ ಬೀಳ್ಕೊಡುಗೆಅನಂತ್ ಅಂಬಾನಿಯವರ ‘ಚಾಂಪಿಯನ್ಸ್ ಆಫ್ ಕೇರ್’ಅಭಿಯಾನ ಆರಂಭ: ಕರ್ನಾಟಕದ ಮೂರು ಪ್ರಾಣಿ ಕಲ್ಯಾಣ ಸಂಸ್ಥೆಗಳ ಜತೆಗೆ ವಂತಾರಾ ಪಾಲುದಾರಿಕೆಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದವರಿಗೆ ₹1 ಕೋಟಿ, ಬೆಳ್ಳಿ ಗೆದ್ದವರಿಗೆ ₹75 ಲಕ್ಷ ನಗದು ಬಹುಮಾನ: ಸಿಎಂ ಘೋಷಣೆ