LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಗಳೂರಲ್ಲಿ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ಲಿಖಿತ್ (12), ಭುವನ್ (12) ಹಾಗೂ ತರುಣ್ (12) ಎಂದು ಗುರುತಿಸಲಾಗಿದೆ. ಮೃತಪಟ್ಟವರೆಲ್ಲರೂ ಒಂದೇ ವಯಸ್ಸಿನವರಾಗಿದ್ದು, ಗ್ರಾಮದ ಶಾಲಾ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದುಬಂದಿದೆ.

ಈಜಲು ಹೋದಾಗ ಸಂಭವಿಸಿದ ದುರಂತ:

ಮಂಗಳವಾರ ಮಧ್ಯಾಹ್ನ ಈ ಮೂವರು ಬಾಲಕರು ಗ್ರಾಮದ ಮರ್ಲೆ ಕೆರೆಗೆ ಈಜಲೆಂದು ತೆರಳಿದ್ದರು. ಕೆರೆಯಲ್ಲಿ ನೀರಾಟವಾಡುತ್ತಿದ್ದ ವೇಳೆ ನೀರಿನ ಆಳ ತಿಳಿಯದೆ ಒಬ್ಬರ ಹಿಂದೆ ಒಬ್ಬರಂತೆ ಮೂವರೂ ನೀರಿನ ಸುಳಿಗೆ ಸಿಲುಕಿ ಮುಳುಗಿದ್ದಾರೆ. ಬಾಲಕರು ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ರಕ್ಷಣೆಗೆ ಧಾವಿಸಿದರಾದರೂ ಅಷ್ಟರಲ್ಲೇ ತಡವಾಗಿತ್ತು.

ಬಳಿಕ ಸ್ಥಳೀಯರು ಕೆರೆಗೆ ಇಳಿದು ತೀವ್ರ ಶೋಧ ನಡೆಸಿ ಮೂವರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮುದ್ದು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮರ್ಲೆ ಗ್ರಾಮದಲ್ಲಿ ಶೋಕಸಾಗರ ಆವರಿಸಿದೆ.

ವಿಷಯ ತಿಳಿದ ತಕ್ಷಣ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಕಲಬುರಗಿಯಲ್ಲಿ ಹಾಸ್ಟೆಲ್ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲುಜಿಬಿಎ ವ್ಯಾಪ್ತಿಯಲ್ಲಿ 5 ಹೊಸ ಪೊಲೀಸ್ ಕಮಿಷನರೇಟ್ ರಚನೆಗೆ ಸಚಿವ ಸಂಪುಟ ಮಹತ್ವದ ಅನುಮೋದನೆBREAKING: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು₹100 ಕೋಟಿ ಹೂಡಿಕೆ; KSTDCಯ 24 ಹೋಟೆಲ್‌, 2 ರೆಸ್ಟೋರೆಂಟ್‌ಗಳಿಗೆ ಹೊಸ ರೂಪ: ಸಚಿವ ಕೆ.ಜೆ. ಜಾರ್ಜ್ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗ: SIT ರಚನೆಗೆ ಸಚಿವ ರಾಮಲಿಂಗಾರೆಡ್ಡಿ ಆಗ್ರಹBIG NEWS: ರೆಬೆಲ್ ಸ್ಟಾರ್ ಅಂಬರೀಶ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪತ್ರದೆಹಲಿಯ ನಿವಾಸಿ ಆಯುಕ್ತ ಸಮೀರ್ ಶುಕ್ಲಗೆ ಬೀಳ್ಕೊಡುಗೆ ನೀಡಿದ ಈಶ್ವರ ಖಂಡ್ರೆBREAKING: KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ED ದಾಳಿಚಿಕ್ಕಮಗಳೂರಲ್ಲಿ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲುಜನರಲ್ಲಿ ಭಯ ಭೀತಿಯನ್ನು ಹುಟ್ಟಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ: ಛಲವಾದಿ ನಾರಾಯಣಸ್ವಾಮಿ