LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯ ನಿವಾಸಿ ಆಯುಕ್ತ ಸಮೀರ್ ಶುಕ್ಲಗೆ ಬೀಳ್ಕೊಡುಗೆ ನೀಡಿದ ಈಶ್ವರ ಖಂಡ್ರೆ

ಬೆಂಗಳೂರು- ದೆಹಲಿ ನಿವಾಸಿ ಆಯುಕ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸ್ನೇಹ ಸೇತುವಾಗಿದ್ದು, ಸಮೀರ್ ಶುಕ್ಲ ಅವರು ಈ ಕಾರ್ಯವನ್ನು ಉತ್ತಮವಾಗಿ ನಿರ್ಹವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ದೆಹಲಿಯ ನಿವಾಸಿ ಆಯುಕ್ತರಾಗಿ ವರ್ಗಾವಣೆಯಾಗಿರುವ ಸಮೀರ್ ಶುಕ್ಲ ಅವರಿಗೆ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ ಸಮೀರ್ ಶುಕ್ಲ ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ. ಕೇಂದ್ರ ಸರ್ಕಾರ ಕಾರ್ಯದರ್ಶಿಗಳೊಂದಿಗೆ ಸಂಪರ್ಕ ಬೆಳೆಸಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಇಲಾಖೆಗೆ ಪ್ರಧಾನಕಾರ್ಯದರ್ಶಿಗಳಾಗಿ ವರ್ಗಾವಣೆಯಾಗಿ ಅಧಿಕಾರ ವಹಿಸಿಕೊಂಡಿರುವ ಪಂಕಜ್ ಕುಮಾರ್ ಪಾಂಡೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮತ್ತು ಸವಾಲುಗಳು

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.60ರಷ್ಟು ಜನರು ಗ್ರಾಮೀಣ ಕರ್ನಾಟಕದಲ್ಲಿ ವಾಸಿಸುತ್ತಿದ್ದು, ಇವರೆಲ್ಲರ ಜೀವನಮಟ್ಟ ಸುಧಾರಿಸುವ ಮತ್ತು ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಪ್ರಸ್ತುತ ಮಳೆಯ ಕೊರತೆಯಿಂದ ನೀರಿನ ಸಮಸ್ಯೆ ಇದ್ದು, ವಿಬಿಜಿ ರಾಮ್ ಜಿ ಉದ್ಯೋಗವನ್ನು ಗ್ರಾಮೀಣ ಬಡಜನರಿಗೆ ಒದಗಿಸಿ ಗುಳೆ ತಪ್ಪಿಸಬೇಕು. ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಯೋಜನೆ ರೂಪಿಸಬೇಕು ಎಂದರು.

ಇಲಾಖೆಯ ಪ್ರಧಾನಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್, ಆಯುಕ್ತರುಗಳಾದ ಫೌಜಿಯ ತರನ್ನಂ, ವೈ.ಎಸ್. ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಕಲಬುರಗಿಯಲ್ಲಿ ಹಾಸ್ಟೆಲ್ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲುಜಿಬಿಎ ವ್ಯಾಪ್ತಿಯಲ್ಲಿ 5 ಹೊಸ ಪೊಲೀಸ್ ಕಮಿಷನರೇಟ್ ರಚನೆಗೆ ಸಚಿವ ಸಂಪುಟ ಮಹತ್ವದ ಅನುಮೋದನೆBREAKING: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು₹100 ಕೋಟಿ ಹೂಡಿಕೆ; KSTDCಯ 24 ಹೋಟೆಲ್‌, 2 ರೆಸ್ಟೋರೆಂಟ್‌ಗಳಿಗೆ ಹೊಸ ರೂಪ: ಸಚಿವ ಕೆ.ಜೆ. ಜಾರ್ಜ್ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗ: SIT ರಚನೆಗೆ ಸಚಿವ ರಾಮಲಿಂಗಾರೆಡ್ಡಿ ಆಗ್ರಹBIG NEWS: ರೆಬೆಲ್ ಸ್ಟಾರ್ ಅಂಬರೀಶ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪತ್ರದೆಹಲಿಯ ನಿವಾಸಿ ಆಯುಕ್ತ ಸಮೀರ್ ಶುಕ್ಲಗೆ ಬೀಳ್ಕೊಡುಗೆ ನೀಡಿದ ಈಶ್ವರ ಖಂಡ್ರೆBREAKING: KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ED ದಾಳಿಚಿಕ್ಕಮಗಳೂರಲ್ಲಿ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲುಜನರಲ್ಲಿ ಭಯ ಭೀತಿಯನ್ನು ಹುಟ್ಟಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ: ಛಲವಾದಿ ನಾರಾಯಣಸ್ವಾಮಿ