LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ರಕ್ಷಣಾ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ: ಶಿವಮೊಗ್ಗಕ್ಕೆ ಆಯೋಗದ ಸದಸ್ಯರ ಭೇಟಿ

ಶಿವಮೊಗ್ಗ : ಮಕ್ಕಳ ರಕ್ಷಣಾ ಕಾನೂನುಗಳು ಹಾಗೂ ಮಕ್ಕಳ ಕಲ್ಯಾಣ ಮತ್ತು ರಕ್ಷಣೆಗೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವನ್ನು ಪರಿಶೀಲಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಜಗನ್ನಾಥ ಹಲಮಡಗಿ ಹಾಗೂ ವೆಂಕಟೇಶ್ ಅವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದರು. 

ಭೇಟಿಯ ವೇಳೆ ಜಿಲ್ಲಾಧಿಕಾರಿ  ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ರಿಷಿ ಆನಂದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. 
ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು:

ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆ: 18 ವರ್ಷದೊಳಗಿನ ಮಕ್ಕಳ ರಕ್ಷಣೆ, ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಪೋಕ್ಸೋ ಸಪೋರ್ಟ್ ಪರ್ಸನ್ ವ್ಯವಸ್ಥೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಕಾರ್ಯವೈಖರಿ ಬಗ್ಗೆ ಚರ್ಚಿಸಲಾಯಿತು.

ಜಾಗೃತಿ ಮತ್ತು ಸಮನ್ವಯತೆ: ವಿವಿಧ ಇಲಾಖೆಗಳ ಸಮನ್ವಯತೆಯನ್ನು ಬಲಪಡಿಸುವುದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಶೋಷಣೆ ತಡೆಯಲು ಕ್ರಮಗಳನ್ನು ಕೈಗೊಳ್ಳುವುದು, ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತಿಗಳ ನಿರ್ಮಾಣ ಹಾಗೂ ಶಾಲಾ ಹಂತದಲ್ಲಿ ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು. 

ಹಾಗೂ  ಜಿಲ್ಲೆಯಲ್ಲಿ ಅರ್ಬನ್ ವಾರ್ಡ್ ಚೈಲ್ಡ್ ಪ್ರೊಟೆಕ್ಷನ್ ಕಮಿಟಿ, 18 ವರ್ಷದೊಳಗಿನ ಮಕ್ಕಳ ಗ್ರಾಮ ಸಭೆ, ಐಇಸಿ ಚಟುವಟಿಕೆಗಳು ಹಾಗೂ 'ಡಿಸ್ಟ್ರಿಕ್ಟ್ ಚೈಲ್ಡ್ ಪ್ರೊಟೆಕ್ಷನ್ ಪಾಲಿಸಿ' ತಯಾರಿಸುವ ಕುರಿತು ಗಮನಹರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. 

ನಂತರ ಬಾಲನ್ಯಾಯ ಮಂಡಳಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಬಾಲನ್ಯಾಯ ಕಾಯ್ದೆಯ ಅನುಷ್ಠಾನ, ಬಾಲ್ಯವಿವಾಹ ಪ್ರಕರಣಗಳು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಲು ಎಲ್ಲ ಇಲಾಖೆಗಳು ಮುಂಜಾಗ್ರತಾ ಕ್ರಮ ವಹಿಸಬೇಕೆಂದು ನಿರ್ದೇಶಿಸಲಾಯಿತು. 

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಆರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ  ತಾಜುದ್ದೀನ್ ಖಾನ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ  ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಪಂಜಾಬ್ ಸಿಎಂ ‘ಭಗವಂತ್ ಮಾನ್ ಕ್ಯಾಂಪ್ ಕಚೇರಿ ಮೇಲೆ CBI ದಾಳಿಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂ ಸ್ಪರ್ಷ: ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!ಪದಕ ವಿಜೇತರಿಗೆ ಗ್ರೂಪ್ ಬಿ ಹುದ್ದೆಗೆ ನೇರ ನೇಮಕಾತಿ: ಸಾಧಕ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿBIG BREAKING: ಕೊನೆಗೂ ರಾಜ್ಯದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್ | ZP, TP Electionಸಾಗರ, ಹೊಸನಗರವನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ: ಸಚಿವ ಮಧು ಬಂಗಾರಪ್ಪಗೆ ರಾಜ್ಯ ರೈತ ಸಂಘ ಮನವಿGOOD NEWS: ಮೈಸೂರು ದಸರಾ ಹಬ್ಬದ ಪ್ರಯುಕ್ತ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರಮಕ್ಕಳ ರಕ್ಷಣಾ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ: ಶಿವಮೊಗ್ಗಕ್ಕೆ ಆಯೋಗದ ಸದಸ್ಯರ ಭೇಟಿಬೆಂಗಳೂರು – ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲುಅಲ್ಪಸಂಖ್ಯಾತ ಮತದಾರರ ಹೆಸರು ಡಿಲೀಟ್‌ಗೆ ಯತ್ನ?: ಪೊಲೀಸ್ ಕಮಿಷನರ್‌ಗೆ MLC ರಮೇಶ್ ಬಾಬು ದೂರುರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ