LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ, ಅರಣ್ಯ ಜಾಗದ ಆಸ್ತಿಯನ್ನು ತೆರಿಗೆಯಿಂದ ಹೊರಗಿಡುವ ಸುತ್ತೋಲೆಗೆ ತಡೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಿಂದ ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿನ ಆಸ್ತಿಗಳನ್ನು ಕೈಬಿಡುವ ಬಗ್ಗೆ ಕಳೆದ ಆಗಸ್ಟ್ 13ರಂದು ಹೊರಡಿಸಲಾಗಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಈ ಹಿಂದೆ ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆಯಾಗಿದ್ದ ಹಾಗೂ ರಾಜ್ಯಪಾಲರ ಅಂಗೀಕಾರ ಪಡೆದಿದ್ದ ಕಾಯಿದೆಗೆ ಸಂಬಂಧಿಸಿದಂತೆ ಈ ಸುತ್ತೋಲೆಯನ್ನು ಇಲಾಖೆ ವತಿಯಿಂದ ಹೊರಡಿಸಲಾಗಿತ್ತು. ಆದರೆ ಕಸ್ತೂರಿ ರಂಗನ್ ವರದಿಯ ಮೇಲಿನ ಚರ್ಚೆಯ ವೇಳೆ ವಿಶೇಷ ಅಧಿವೇಶನದಲ್ಲಿ ಹಲವು ಜನಪ್ರತಿನಿಧಿಗಳು ಪಕ್ಷಾತೀತವಾಗಿ ಈ ಸುತ್ತೋಲೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದಂತೆ ಈಗ ಆಗಸ್ಟ್ 13ರ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದರು.

ಕಾಡಿನಂಚಿನಲ್ಲಿರುವ ಮತ್ತು ಸರ್ಕಾರಿ ಭೂಮಿಯಲ್ಲಿ ಈಗಾಗಲೇ ಮನೆ ಕಟ್ಟಿಕೊಂಡು ವಾಸಿಸುತ್ತಿರುವವರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿರುವ ಈಶ್ವರ ಖಂಡ್ರೆ, ಕಂದಾಯ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ  ಬಹು ಇಲಾಖೆಯ ಅಧಿಕಾರಿಗಳ ಉನ್ನತಮಟ್ಟದ ಸಮಿತಿ ರಚಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಇಂದು ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದು, ಮುಂದಿನ ಆದೇಶದವರೆಗೆ ಆಗಸ್ಟ್ 13ರ ಸುತ್ತೋಲೆಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆ ಕೈಗೊಳ್ಳದಿರಲು ಸೂಚಿಸಲಾಗಿದೆ ಎಂದೂ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!