ಮೈಸೂರು: ಪ್ರಯಾಣಿಕರ ಅನುಕೂಲಕ್ಕಾಗಿ ರಾಮಗಿರಿ ರೈಲ್ವೆ ನಿಲ್ದಾಣದಲ್ಲಿ ಬೆಳಗಾವಿ–ಮೈಸೂರು ನಡುವೆ ಸಂಚರಿಸುವ ರೈಲುಗಳ ತಾತ್ಕಾಲಿಕ ನಿಲುಗಡೆ ಅವಧಿಯನ್ನು ಇನ್ನೂ ಆರು ತಿಂಗಳ ಕಾಲ ವಿಸ್ತರಿಸಿ ನೈರುತ್ಯ ರೈಲ್ವೆ ಆದೇಶ ಹೊರಡಿಸಿದೆ.
ರೈಲು ಸಂಖ್ಯೆ 20675/20676 ಬೆಳಗಾವಿ–ಮೈಸೂರು–ಬೆಳಗಾವಿ ರೈಲುಗಳಿಗೆ ಈ ಹಿಂದೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯು 2026ರ ಅಕ್ಟೋಬರ್ 10ರಿಂದ ಜಾರಿಗೆ ಬರುವಂತೆ 2027ರ ಏಪ್ರಿಲ್ 9ರವರೆಗೆ ಮುಂದುವರಿಯಲಿದೆ. ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.