LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬ್ರಾಹ್ಮಣ ಮಂಡಳಿ ನಿರ್ದೇಶಕರ ಕಡೆಗಣನೆ: ಶಿವಮೊಗ್ಗ ಪಾಲಿಕೆ ಆಯುಕ್ತರ ವಿರುದ್ಧ ಮಾಲತೇಶ್ ಅಸಮಾಧಾನ

ಶಿವಮೊಗ್ಗ: ನಗರದಲ್ಲಿ ಆರಂಭವಾಗಿರುವ ನಾಡಹಬ್ಬ ದಸರಾ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದ್ದು, ಅಧಿಕಾರಿಗಳು ಇಡೀ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತೆ ನಡೆದುಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪಿ.ಎಂ. ಮಾಲತೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಯಮಾವಳಿಗಳನ್ನು ಗಾಳಿಗೆ ತೂರಿರುವ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಆರೋಪ

ಈ ಕುರಿತಂತೆ ಪತ್ರಿಕಾ ಹೇಳಿಗೆ ಬಿಡುಗಡೆ ಮಾಡಿರುವಂತ ಅವರು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರದನ್ವಯ ನಡೆದುಕೊಳ್ಳುವಂತೆ ರಾಜ್ಯ ಸರ್ಕಾರವು ಸಂಬಂಧಪಟ್ಟ ಇಲಾಖೆಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲ್ಲದೆ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರನ್ನು ಇಂತಹ ಕಾರ್ಯಕ್ರಮಗಳಿಗೆ ಶಿಷ್ಟಾಚಾರದಂತೆ ಆಹ್ವಾನಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಸರ್ಕಾರದಿಂದ ಪ್ರತ್ಯೇಕ ಸೂಚನೆಗಳು ಬಂದಿದ್ದವು. ಆದಾಗ್ಯೂ, ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಯಾವುದೇ ನಿಯಮಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸಿವೆ ಎಂದು ಮಾಲತೇಶ್ ಆರೋಪಿಸಿದ್ದಾರೆ.

ಪಾಲಿಕೆ ಆಯುಕ್ತರ ನಡೆಗೆ ತೀವ್ರ ಆಕ್ರೋಶ

ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಅವರು ಸರ್ಕಾರದ ಅಧಿಕಾರಿಯಂತೆ ನಡೆದುಕೊಳ್ಳದೆ, ಸ್ಥಳೀಯ ಶಾಸಕರ ಮಾತು ಕೇಳಿಕೊಂಡು ಮನಸ್ಸಿಗೆ ಬಂದಂತೆ ವರ್ತಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. "ಸ್ಥಳೀಯ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ನಿರ್ದೇಶಕರ ಮಾಹಿತಿ ಆಯುಕ್ತರಿಗೆ ಇಲ್ಲವೇ? ಪಾಲಿಕೆಯ ಶಿಷ್ಟಾಚಾರ ವಿಭಾಗದ ಅಧಿಕಾರಿಗೆ ಸಂಪೂರ್ಣ ಮಾಹಿತಿ ಇದ್ದರೂ ಸಹ ಈ ರೀತಿ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆಯುಕ್ತರು ಸರ್ಕಾರದ ಅಧಿಕಾರಿಯೋ ಅಥವಾ ಯಾವುದೋ ಒಂದು ರಾಜಕೀಯ ಪಕ್ಷದ ಕಚೇರಿ ಸಿಬ್ಬಂದಿಯೋ ಎಂಬುದನ್ನು ಸ್ಪಷ್ಟಪಡಿಸಬೇಕು" ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಖ್ಯಮಂತ್ರಿ, ಸಚಿವರಿಗೆ ದೂರು ಸಲ್ಲಿಸಲು ತೀರ್ಮಾನ

ಸರ್ಕಾರದ ನಿಯಮಾವಳಿಗಳನ್ನು ಕಡೆಗಣಿಸಿ, ಶಿಷ್ಟಾಚಾರ ಉಲ್ಲಂಘಿಸಿರುವ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಅಧಿಕೃತವಾಗಿ ದೂರು ನೀಡುವುದಾಗಿ ಪಿ.ಎಂ. ಮಾಲತೇಶ್ ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಜನತೆಗೆ ಶಿಕ್ಷಣದ ಜೊತೆ ಸಂಸ್ಕಾರ ನೀಡಿ: ಸಾಗರದಲ್ಲಿ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಕರೆನಮ್ಮ ಮೆಟ್ರೋ 'ಪಿಂಕ್ ಲೈನ್‌'ಗೆ BMTC ಫೀಡರ್ ಬಸ್ ಸೇವೆ: ಕಿಕ್ಕಿರಿದ ರಸ್ತೆಗಳಿಗಾಗಿ 7 ಮೀಟರ್ ಮಿನಿ ಬಸ್‌ಗಳುಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ಶೇ.7.5ರಷ್ಟು ಮೀಸಲಾತಿ ಜಾರಿ: ಸಚಿವ ಮಧು ಬಂಗಾರಪ್ಪಬ್ರಾಹ್ಮಣ ಮಂಡಳಿ ನಿರ್ದೇಶಕರ ಕಡೆಗಣನೆ: ಶಿವಮೊಗ್ಗ ಪಾಲಿಕೆ ಆಯುಕ್ತರ ವಿರುದ್ಧ ಮಾಲತೇಶ್ ಅಸಮಾಧಾನದಸರಾ ಆಮಂತ್ರಣದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಶಿವಮೊಗ್ಗ ಪಾಲಿಕೆ ಆಯುಕ್ತರ ವಿರುದ್ಧ ಸಿಎಂಗೆ ದೂರು ನೀಡಲು ಮಾಲತೇಶ್ ನಿರ್ಧಾರಸಾಗರದ ಹೊಸಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಖ್ಯಾತ ನಟ ನಾನಾ ಪಾಟೇಕರ್ ಸಾವಿನ ಕಾರಣ: ಹೃದಯಾಘಾತ ದೃಢಪಡಿಸಿದ ವೈದ್ಯರುಅಜ್ಜಿ ಮರಣದ ನಂತರ ಮನೆಗೆ ಮರಳಲು ನಿರಾಕರಿಸಿದ್ರಾ ಅಭಿಜೀತ್ ದೀಪ್ಕೆ..?: ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರುಸಂಭೋಗ ಮತ್ತು ಯೋಗದ ನಡುವಿನ ಸಂಬಂಧ ಏನು? ಇಲ್ಲಿದೆ ಓದಿ!ಪದವೀಧರರಿಗೆ ಗುಡ್ ನ್ಯೂಸ್: ರೈಲ್ವೆ ನೇಮಕಾತಿ ಮಂಡಳಿಯಿಂದ 3,548 ಪದವೀಧರ ಮಟ್ಟದ ಹುದ್ದೆಗಳ ನೇಮಕ