LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲೆನಾಡಿನಲ್ಲಿ ರೈಲ್ವೆ ಜಾಲ ವಿಸ್ತರಣೆಗೆ ವೇಗ: ಕೇಂದ್ರ ಸಚಿವ ವಿ.ಸೋಮಣ್ಣ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ರೈಲ್ವೆ ಮೂಲಸೌಕರ್ಯ ಬಲವರ್ಧನೆ ಮತ್ತು ಸಂಪರ್ಕ ಕ್ರಾಂತಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ನಗರದಲ್ಲಿಂದು ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಪ್ರಮುಖ ಕಾಮಗಾರಿಗಳು, ಪ್ರಸ್ತಾವಿತ ಹೊಸ ಮಾರ್ಗಗಳು ಹಾಗೂ ನಿಲ್ದಾಣಗಳ ಆಧುನೀಕರಣ ಯೋಜನೆಗಳ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಅವರು ಸುದೀರ್ಘ ಚರ್ಚೆ ನಡೆಸಿದರು.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಂಸದ ಬಿ. ವೈ. ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್. ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ಡಿ. ಎಸ್. ಅರುಣ್ ಹಾಗೂ ರೈಲ್ವೆ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ರೈಲ್ವೆ ಯೋಜನೆಗಳ ಸ್ಥಿತಿಗತಿ ಪರಾಮರ್ಶೆ

ಸಭೆಯಲ್ಲಿ ಮಲೆನಾಡು ಹಾಗೂ ಕರಾವಳಿಯನ್ನು ಬೆಸೆಯುವ ಮಹತ್ವಾಕಾಂಕ್ಷೆಯ ಯೋಜನೆಗಳ ಕುರಿತು ವಿಸ್ತೃತ ಪರಾಮರ್ಶೆ ನಡೆಯಿತು. ಪ್ರಮುಖವಾಗಿ:

  • ತಾಳಗುಪ್ಪ–ಸಿದ್ದಾಪುರ–ಸಿರಸಿ–ಹುಬ್ಬಳ್ಳಿ ಹೊಸ ರೈಲು ಮಾರ್ಗ

  • ಶಿವಮೊಗ್ಗ–ತೀರ್ಥಹಳ್ಳಿ–ಶೃಂಗೇರಿ–ಮಂಗಳೂರು ಮಾರ್ಗದ ರೈಲ್ವೆ ಸಮೀಕ್ಷೆ

  • ಭದ್ರಾವತಿ–ಚಿಕ್ಕಜಾಜೂರು ಹಾಗೂ ತಾಳಗುಪ್ಪ–ಹೊನ್ನಾವರ ಹೊಸ ಮಾರ್ಗಗಳು

  • ಶಿವಮೊಗ್ಗ–ಬೀರೂರು ಜೋಡಿ ರೈಲು ಮಾರ್ಗ (ಡಬ್ಲಿಂಗ್)

  • ಕೋಟೆಗಂಗೂರಿನಲ್ಲಿ ಅತ್ಯಾಧುನಿಕ ಕೋಚಿಂಗ್ ಡಿಪೋ ಸ್ಥಾಪನೆ

  • ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ಹೊಸ ಮಾರ್ಗದ ಒಂದು ಮತ್ತು ಎರಡನೇ ಹಂತದ ಕಾಮಗಾರಿಗಳು

  • ಲೆವೆಲ್ ಕ್ರಾಸಿಂಗ್‌ಗಳು, ಮೇಲ್ಸೇತುವೆಗಳು (ROB), ಕೆಳಸೇತುವೆಗಳು (RUB) ಹಾಗೂ ‘ಅಮೃತ ಭಾರತ ನಿಲ್ದಾಣ ಯೋಜನೆ’ಯಡಿ (ABSS) ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.

ಸಂಸದ ಬಿ. ವೈ. ರಾಘವೇಂದ್ರ ಅವರಿಂದ ಪ್ರಮುಖ ಪ್ರಸ್ತಾವನೆಗಳು

ಸಭೆಯಲ್ಲಿ ಮಾತನಾಡಿದ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಅವರು, ಪ್ರಸ್ತುತ ಸಮೀಕ್ಷೆ ಹಂತದಲ್ಲಿರುವ ತಾಳಗುಪ್ಪ–ಸಿದ್ದಾಪುರ–ಸಿರಸಿ ಹೊಸ ಮಾರ್ಗದಲ್ಲಿ ಸೊರಬ ಪಟ್ಟಣವನ್ನೂ ಸೇರ್ಪಡೆಗೊಳಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು. ಇದರಿಂದ ಗಡಿ ಭಾಗದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಪ್ರತಿಪಾದಿಸಿದರು. ಇದೇ ವೇಳೆ, ಕೈಗಾರಿಕಾ ನಗರಿ ಭದ್ರಾವತಿಯ ರೈಲು ನಿಲ್ದಾಣವನ್ನು 'ಅಮೃತ ಭಾರತ ನಿಲ್ದಾಣ ಯೋಜನೆ' ವ್ಯಾಪ್ತಿಗೆ ಸೇರಿಸಿ, ಪ್ರಯಾಣಿಕರ ಸೌಲಭ್ಯಗಳು ಹಾಗೂ ಮೂಲಸೌಕರ್ಯಗಳನ್ನು ಸಮಗ್ರವಾಗಿ ಉನ್ನತೀಕರಿಸುವಂತೆ ಕೋರಿದರು.

ನಿಲ್ದಾಣಗಳಿಗೆ ಸಚಿವರ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ

ಪರಿಶೀಲನಾ ಸಭೆಗೂ ಮುನ್ನ ಸಚಿವ ವಿ. ಸೋಮಣ್ಣ ಅವರು ಶಿವಮೊಗ್ಗ ರೈಲು ನಿಲ್ದಾಣಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಪ್ಲಾಟ್‌ಫಾರ್ಮ್‌ಗಳು, ಪ್ರಯಾಣಿಕರ ಸೌಕರ್ಯಗಳು ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕೆಲಸ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಶಿವಮೊಗ್ಗದ ಕಾರ್ಯಕ್ರಮಗಳ ಬಳಿಕ ಸಚಿವರು ತರೀಕೆರೆ ರೈಲು ನಿಲ್ದಾಣಕ್ಕೂ ಭೇಟಿ ನೀಡಿ, ಸ್ಥಳೀಯ ಪ್ರಯಾಣಿಕರು ಮತ್ತು ನಾಗರಿಕರೊಂದಿಗೆ ನೇರ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ರೈಲ್ವೆ ಸೌಲಭ್ಯಗಳಿಗೆ ಸಂಬಂಧಿಸಿದ ಅಹವಾಲು ಮತ್ತು ಕುಂದುಕೊರತೆಗಳನ್ನು ಆಲಿಸಿ, ಸೂಕ್ತ ಕ್ರಮದ ಭರವಸೆ ನೀಡಿದರು.

ಪರಿಶೀಲನೆಯ ವೇಳೆ ನೈಋತ್ಯ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಭಯ್ ಕುಮಾರ್ ಗುಪ್ತಾ, ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್, ಶಿವಮೊಗ್ಗ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!