LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ಮುಂದುವರಿಯಲಿದೆ ಒಣಹವೆ: ಬಿಸಿಲಿನ ತೀವ್ರತೆ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ


ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸುತ್ತಿದ್ದಂತೆ ಮುಂದಿನ ಕೆಲವು ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಬಿಸಿಲು ಮತ್ತು ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆ ತಗ್ಗಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣ ವಾತಾವರಣವೇ ಆವರಿಸಿರಲಿದೆ. ಪ್ರಮುಖವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅತಿಯಾದ ಆರ್ದ್ರತೆಯ ವಾತಾವರಣ ಕಂಡುಬರಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಹವಾಮಾನವು ಶುಷ್ಕವಾಗಿರಲಿದ್ದು, ಕರಾವಳಿ ಭಾಗದಲ್ಲಿ ಸದ್ಯಕ್ಕೆ ಯಾವುದೇ ಗಮನಾರ್ಹ ಮಳೆಯಾಗುವ ಮುನ್ಸೂಚನೆ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಭಾಗಗಳಲ್ಲಿ ತಾಪಮಾನ ಹೆಚ್ಚಿರಲಿದ್ದು, ದಿನಪೂರ್ತಿ ಒಣಹವೆಯ ಪ್ರಭಾವ ಬೀರಲಿದೆ. ಮತ್ತೊಂದೆಡೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಒಣ ವಾತಾವರಣವೇ ಮುಂದುವರಿಯಲಿದೆ. ಅಕ್ಟೋಬರ್ 13ರವರೆಗೂ ಈ ಎಲ್ಲಾ ಜಿಲ್ಲೆಗಳಲ್ಲಿ ಹವಾಮಾನ ಸ್ಥಿರವಾಗಿರಲಿದ್ದು, ಮಳೆಯಾಗುವ ಸಾಧ್ಯತೆ ಅತ್ಯಂತ ವಿರಳವಾಗಿದೆ. ಬಿಸಿಲಿನ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಮತ್ತು ದೇಹದಲ್ಲಿ ನಿರ್ಜಲೀಕರಣವಾಗದಂತೆ ಎಚ್ಚರಿಕೆಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!