LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಸ್ಥಾನದಲ್ಲಿ ಭೀಕರ ಘರ್ಷಣೆ: ಬಿಜೆಪಿ ಮಾಜಿ ಶಾಸಕನನ್ನು ಹೊಡೆದು ಕೊಂದ ಗ್ರಾಮಸ್ಥರು

ಜೈಪುರ: ಗಣಿಗಾರಿಕೆ ವಿಚಾರವಾಗಿ ನಡೆದ ಭೀಕರ ಘರ್ಷಣೆಯಲ್ಲಿ ಬಿಜೆಪಿ ಮಾಜಿ ಶಾಸಕರೊಬ್ಬರನ್ನು ಗ್ರಾಮಸ್ಥರೇ ಹೊಡೆದು ಕೊಂದಿರುವ ದೂಷಣಾರ್ಹ ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಭೋಂಡಾ ಗ್ರಾಮದಲ್ಲಿ ನಡೆದಿದೆ.

ಹರಿಯಾಣ ಮೂಲದ ಮಾಜಿ ಶಾಸಕ ಅಟರ್ ಸಿಂಗ್ ಭದಾನಾ ಅವರು ಭೋಂಡಾ ಗ್ರಾಮದ ಬೆಟ್ಟಗಳ ಸಮೀಪ ತಮ್ಮ ಪತ್ನಿ ಕಮಲೇಶ್ ಭದಾನಾ ಅವರ ಹೆಸರಿನಲ್ಲಿ ಗಣಿಗಾರಿಕೆ ಗುತ್ತಿಗೆ ಹಾಗೂ ಕ್ರಷರ್ ಘಟಕವನ್ನು ಹೊಂದಿದ್ದರು. ಕಳೆದ ಎರಡು ವರ್ಷಗಳಿಂದ ಈ ಗಣಿಗಾರಿಕೆ ಚಟುವಟಿಕೆಗಳು ಮತ್ತು ಕ್ರಷರ್ ಘಟಕದ ವಿರುದ್ಧ ಭೋಂಡಾ ಹಾಗೂ ರಾಯ್‌ಪುರ ಗ್ರಾಮಗಳ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರು. ಹಲವು ಬಾರಿ ಧರಣಿಗಳನ್ನು ನಡೆಸಿ, ಗಣಿಗಾರಿಕೆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ತಡೆದು ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದರು.

ಈ ನಡುವೆ ನಿನ್ನೆ ತಡರಾತ್ರಿ ಅಟರ್ ಸಿಂಗ್ ಭದಾನಾ ಅವರು ತಮ್ಮ ಗಣಿಗಾರಿಕೆ ಗುತ್ತಿಗೆ ಪ್ರದೇಶಕ್ಕೆ ತೆರಳಿದ್ದಾಗ ನೂರಾರು ಗ್ರಾಮಸ್ಥರು ಒಟ್ಟಾಗಿ ಜಮಾಯಿಸಿದ್ದಾರೆ. ಸ್ಥಳದಲ್ಲಿ ತೀವ್ರ ಮಾತಿನ ಚಕಮಕಿ ನಡೆದು, ಗ್ರಾಮಸ್ಥರು ಬಡಿಗೆ ಹಾಗೂ ಕಲ್ಲುಗಳಿಂದ ಭದಾನಾ ಅವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ದಾಳಿಯ ವೇಳೆ ಅವರ ಅಂಗರಕ್ಷಕ ಗಗನ್ ಶರ್ಮಾ ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭದಾನಾ ಅವರನ್ನು ತಕ್ಷಣವೇ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗೆ ಜೈಪುರಕ್ಕೆ ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!