ಜೈಪುರ: ಇದೆಂತಹ ಭೀಭತ್ಯ್ಸ. ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಕಿರಾತಕರು ಮಗಳಿಗೆ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದ ತಂದೆ ಕೇಸ್ ಹಿಂಪಡೆಯಲು ಒಪ್ಪಿಲ್ಲ ಎಂದು ಅವರನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಜಸ್ಥಾನದ ಜೈಪುರದ ಕಲ್ವಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರವೆಸಗಿದ್ದ ಆರೋಪಿಗಳೇ ಸಂತ್ರಸ್ತೆಯ ತಂದೆಯನ್ನು ಕೊಲೆಗೈದಿದ್ದಾರೆ. 58 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಅವರ ಮನೆಯ ಸಮೀಪವಿರುವ ಬಯಲು ಪ್ರದೇಶವೊಂದರಲ್ಲಿ ಹಗ್ಗದ ಕುಣಿಕೆಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ವ್ಯಕ್ತಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ. ಆರಂಭದಲ್ಲಿ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದರಾದರೂ, ಇದೀಗ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಮಗಳನ್ನು ಜೂನ್ ತಿಂಗಳಲ್ಲಿ ಅಪಹರಿಸಲಾಗಿತ್ತು. ಅಪಹರಣಕಾರ ತನ್ನ ಸ್ನೇಹಿತರ ಸಹಾಯದಿಂದ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಎಂದು ಮೃತ ವ್ಯಕ್ತಿಯ ಪತ್ನಿ ದೂರಿನಲ್ಲಿ ಆರೋಪಿಸಿದ್ದಾರೆ. ಎರಡು ದಿನಗಳ ನಂತರ ಮಗಳು ವಾಪಸ್ ಆದಾಗ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು. ನಾಲ್ವರು ವ್ಯಕ್ತಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಲಾಯಿತು. ತನಿಖೆಯ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಪ್ರಕರಣ ದಾಖಲಾದಾಗಿನಿಂದಲೂ ಆರೋಪಿಯು ನಮಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದ. ಪ್ರಕರಣವನ್ನು ಹಿಂಪಡೆಯದಿದ್ದರೆ ನಿನ್ನ ಪತಿಯನ್ನು ಕೊಲ್ಲುವುದಾಗಿ ಹೆದರಿಸಿದ್ದ. ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು ಸಂಚು ರೂಪಿಸಿ, ಈಗ ನನ್ನ ಪತಿಯನ್ನೂ ಹತ್ಯೆ ಮಾಡಿದ್ದಾರೆ. ಘಟನೆಯನ್ನು ಆತ್ಮಹತ್ಯೆಯಂತೆ ಬಿಂಬಿಸಲು ಮೃತದೇಹವನ್ನು ಫ್ಯಾನ್‌ಗೆ ನೇತುಹಾಕಿದ್ದರು ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅರೆಸ್ಟ್
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯವೆಸಗಿ ಕೈಕೊಟ್ಟ ಆರೋಪದಲ್ಲಿ ಮಹಿಳೆಯೊಬ್ಬಳು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಗಂಭೀರತೆಯನ್ನು ಅರಿತಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿಗಳು, ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು ಸ್ವಾಮೀಜಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಖಾಕಿ ಪಡೆಯು ಈ ಕುರಿತು ಕಟ್ಟುನಿಟ್ಟಿನ ವಿಚಾರಣೆ ಮತ್ತು ತನಿಖಾ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ. ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಸ್ವಾಮೀಜಿ ವಿರುದ್ಧ ಕೇಳಿಬಂದಿದೆ.
ಹುಣಸಮಾರನಹಳ್ಳಿ ಮಠವು ಬೆಂಗಳೂರಿನ ವಿಮಾನ ನಿಲ್ದಾಣದ ಹತ್ತಿರದ ಪ್ರಮುಖ ಪ್ರದೇಶದಲ್ಲಿ ಸುಮಾರು 1500ಕ್ಕೂ ಅಧಿಕ ಎಕರೆ ಅತ್ಯಮೂಲ್ಯ ಜಮೀನನ್ನು ಹೊಂದಿದ್ದು, ಈ ಹಿಂದೆ 2017ರಲ್ಲೂ ಇವರ ವಿರುದ್ಧ ಇಂತಹದ್ದೇ ಆರೋಪಗಳು ಕೇಳಿಬಂದಿದ್ದವು.
ಸದ್ಯ ಸ್ವಾಮೀಜಿಯ ಬಂಧನ ಧಾರ್ಮಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದು ನಿಜಕ್ಕೂ ಮೋಸದ ಪ್ರಕರಣವೇ ಅಥವಾ ಆಸ್ತಿ ವಿವಾದ ಹಾಗೂ ಬ್ಲಾಕ್‌ಮೇಲ್ ತಂತ್ರವೇ ಎಂಬುದು ಪೊಲೀಸರ ಸಮಗ್ರ ತನಿಖೆಯಿಂದಷ್ಟೇ ಹೊರಬರಬೇಕಿದೆ.
ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಮೇಲಿನ ವಿವಾದ ಇದು ಮೊದಲಲ್ಲ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹುಣಸಮಾರನಹಳ್ಳಿ ಮಠವು ಸುಮಾರು 1500ಕ್ಕೂ ಅಧಿಕ ಎಕರೆ ಅತ್ಯಮೂಲ್ಯ ಜಮೀನನ್ನು ಹೊಂದಿರುವ ಅತ್ಯಂತ ಶ್ರೀಮಂತ ಮಠಗಳಲ್ಲಿ ಒಂದಾಗಿದ್ದು, ಇದರ ಆಸ್ತಿ ಹಾಗೂ ಜಮೀನಿಗೆ ಸಂಬಂಧಿಸಿದ ವಿವಾದಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿರುತ್ತವೆ.
ಇದಕ್ಕೂ ಮೊದಲು, 2017ರ ಅಕ್ಟೋಬರ್‌ನಲ್ಲೂ ಸಹ ಸ್ವಾಮೀಜಿಯವರ ವಿರುದ್ಧ ಇದೇ ರೀತಿಯಾಗಿ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹಾಗೂ ದೈಹಿಕ ಸಂಪರ್ಕದ ಆರೋಪಗಳು ಕೇಳಿಬಂದಿದ್ದು, ಆ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭಕ್ತರು ಮಠದ ಮುಂದೆ ಪ್ರತಿಭಟನೆ ನಡೆಸಿ ಅವರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದರು.
ಪ್ರಸ್ತುತ ಮುನ್ನೆಲೆಗೆ ಬಂದಿರುವ ಅತ್ಯಾಚಾರ ಹಾಗೂ ವಂಚನೆಯ ಪ್ರಕರಣದ ಹಿಂದೆ ವೈಯಕ್ತಿಕ ದೂರುಗಳ ಜೊತೆಗೆ ಮಠದ ಆಸ್ತಿ ಮತ್ತು ಹಣಕಾಸಿನ ವಿವಾದಗಳ ಶಂಕೆಯೂ ಇದ್ದು, ಸತ್ಯಾಸತ್ಯತೆ ತನಿಖೆಯಿಂದಷ್ಟೇ ಹೊರಬರಬೇಕಿದೆ.