LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬು ಬೆಳೆಗಾರರ ​​ಹಿತರಕ್ಷಣೆಗೆ ಕೇಂದ್ರ ಮಹತ್ವದ ನಿರ್ಧಾರ: ಬೆಳೆಗಾರರ ಸಮಸ್ಯೆ ಪರಿಹರಿಸಲು ರೈತರು ಮತ್ತು ವಿಜ್ಞಾನಿಗಳ ಜಂಟಿ ಸಮಿತಿಗೆ ಸಭೆ ಸಮ್ಮತಿ

ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ರೈತರ ​​ಹಿತರಕ್ಷಣೆಗಾಗಿ ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆಯಂತಹ ತ್ವರಿತ ಕ್ರಮಕ್ಕೆ ಮುಂದಾಗಿದೆ.

ನವದೆಹಲಿಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಮತ್ತು ಪ್ರಮುಖ ರೈತ ಮುಖಂಡರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳನ್ನೆಲ್ಲ ಆಲಿಸಿದ ಸಚಿವದ್ವಯರು, ರೈತ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಅಂತಿಮವಾಗಿ ಸಮಸ್ಯೆಗಳ ಪರಿಹಾರಕ್ಕೆ ಒಂದು ವಾರದೊಳಗೆ ರೈತರು ಮತ್ತು ವಿಜ್ಞಾನಿಗಳನ್ನೂ ಒಳಗೊಂಡ ಜಂಟಿ ಸಮಿತಿ ರಚಿಸುವುದಾಗಿ ಪ್ರಕಟಿಸಿದರು.

ಸಭೆಯಲ್ಲಿ ಮಾತನಾಡಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಸಕ್ಕರೆ ಇಳುವರಿ (ರಿಕವರಿ), ತೂಕ ಮತ್ತು ಪಾವತಿಗೆ ಸಂಬಂಧಿಸಿದ ವಿವಾದಗಳನ್ನು ಪರಿಹರಿಸಲು ಜಂಟಿ ಸಮಿತಿ ರಚಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಇದರಲ್ಲಿ ರೈತರು ಹಾಗೂ ಕೃಷಿ ವಿಜ್ಞಾನಿಗಳನ್ನೂ ಸೇರ್ಪಡೆ ಮಾಡಲಾಗುತ್ತದೆ ಎಂದು ಸ್ಪಷ್ಟ ಭರವಸೆ ನೀಡಿದರು.

ಜಂಟಿ ಸಮಿತಿ ಶಿಫಾರಸ್ಸು ಮೇರೆಗೆ ಅಗತ್ಯ ಕ್ರಮ:

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಸಚಿವದ್ವಯರು, ʼರೈತರ ಸೇವೆ ನಮಗೆ ದೇವರ ಪೂಜೆಗೆ ಸಮಾನʼ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಮ್ಮ ಸರ್ಕಾರ ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದೆ. ಅಂತೆಯೇ ಕಬ್ಬು ಬೆಳೆಗಾರರ ​​ಸಮಸ್ಯೆಗಳ ಪರಿಹಾರಕ್ಕೂ ಪಾರದರ್ಶಕ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ, ರಾಜ್ಯಗಳು, ರೈತರು ಮತ್ತು ವಿಜ್ಞಾನಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಿ ಅದರ ವರದಿ ಅನ್ವಯ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮೋದಿ ಸರ್ಕಾರಕ್ಕೆ ರೈತರೇ ಪ್ರಥಮಾದ್ಯತೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರೈತರೇ ಪ್ರಥಮಾದ್ಯತೆಯಾಗಿದ್ದು, ಸಕ್ಕರೆ ಇಳುವರಿ ಅಂಕಿ-ಅಂಶಗಳ ತಿರುಚುವಿಕೆ ಮತ್ತು ಸಂಬಂಧಿತ ವಿಷಯಗಳ ಬಗ್ಗೆ ದೃಢ ನಿಲುವು ಹೊಂದಿದೆ ಎಂದು ಸ್ಪಷ್ಟಪಡಿಸಿದ ಕೃಷಿ ಸಚಿವ ಶಿವರಾಜಸಿಂಗ್‌ ಚೌಹಾಣ್, ಅಗತ್ಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿಯೇ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ರೈತರ ಸರ್ವತೋಮುಖ ಅಭಿವೃದ್ಧಿ, ಕೃಷಿ ಉತ್ಪನ್ನಗಳ ಪಾರದರ್ಶಕ ಮೌಲ್ಯಮಾಪನ ಮತ್ತು ಕೃಷಿಕರ ಆದಾಯ ವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು, ಆ ನಿಟ್ಟಿನಲ್ಲಿ ದೃಢವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.

ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರಿಬ್ಬರೂ ರೈತರ ಅಹವಾಲುಗಳನ್ನು ಗಂಭೀರವಾಗಿ ಮತ್ತು ಅತ್ಯಂತ ಸಹಾನುಭೂತಿಯಿಂದ ಆಲಿಸಿದರು. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ರೈತರ ಶೋಷಣೆಯನ್ನು ಸಹಿಸುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟರು.

ಸಕ್ಕರೆ ಇಳುವರಿ ಅಂಕಿ-ಅಂಶಗಳಲ್ಲಿನ ವ್ಯತ್ಯಾಸ, ತೂಕ ಕಡಿತ ಮತ್ತು ಸಕ್ಕರೆ ಕಾರ್ಖಾನೆಗಳು ನೈಜ ಇಳುವರಿಯನ್ನು ಮರೆಮಾಚುವ ಆರೋಪ ಸೇರಿದಂತೆ ರೈತರು ಪ್ರಸ್ತಾಪಿಸಿದ ವಿಷಯಗಳು ಕುರಿತಂತೆ ಗಂಭೀರ ಚರ್ಚೆ ನಡೆಸಲಾಯಿತು. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ತಾತ್ಕಾಲಿಕ ಅಥವಾ ಅಪೂರ್ಣ ಪರಿಹಾರ ಹುಡುಕುವ ಬದಲು ಭವಿಷ್ಯದಲ್ಲಿಯೂ ಯಾವುದೇ ಕಾರ್ಖಾನೆಗಳು ರೈತರನ್ನು ವಂಚಿಸದಂತೆ ತಡೆಯಲು ಪಾರದರ್ಶಕ ಮತ್ತು ವೈಜ್ಞಾನಿಕ ವ್ಯವಸ್ಥೆ ರೂಪಿಸುವುದು ಅಗತ್ಯವಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಲಿದೆ ಎಂದು ಸ್ಪಷ್ಟ ಭರವಸೆ ನೀಡಿದರು.

ಕರ್ನಾಟಕ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಲಿದ್ದು, ರೈತರಿಗೆ ಪರಿಣಾಮಕಾರಿ ಪರಿಹಾರ ಒದಗಿಸುವ ಉದ್ದೇಶದಿಂದ ಒಂದು ವಾರದೊಳಗೆ ವಿಶೇಷ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸಲಾಗುವುದು ಎಂದು ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಘೋಷಿಸಿದರು.

ಈ ಜಂಟಿ ಸಮಿತಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ರಾಜ್ಯ ಸರ್ಕಾರಗಳಾದ ಕರ್ನಾಟಕ, ಮಹಾರಾಷ್ಟ್ರದ ಪ್ರತಿನಿಧಿಗಳು, ರೈತ ಸಂಘಟನೆಗಳ ಅಧಿಕೃತ ಪ್ರತಿನಿಧಿಗಳು, ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು, ವಿಷಯ ತಜ್ಞರು (ವೈಜ್ಞಾನಿಕ ತಜ್ಞರು) ಇರಲಿದ್ದಾರೆ ಎಂದು ಹೇಳಿದರು.

ಈ ಸಮಿತಿ ಕಬ್ಬು ಕಟಾವಿನ ಸಮಯ, ಸಕ್ಕರೆ ಇಳುವರಿ ಅಳೆಯುವ ವೈಜ್ಞಾನಿಕ ಮಾನದಂಡಗಳು, ಆಧುನಿಕ ಪ್ರಯೋಗಾಲಯ ಪರೀಕ್ಷಾ ವ್ಯವಸ್ಥೆ ಮತ್ತು ತೂಕದ ನಿಖರತೆ ಸೇರಿದಂತೆ ಪ್ರತಿಯೊಂದು ತಾಂತ್ರಿಕ ಅಂಶವನ್ನು ಕೂಲಂಕಷವಾಗಿ ಪರಿಶೀಲಿಸಲಿದ್ದು, ನಿಗದಿತ ಸಮಯದೊಳಗೆ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಲಿದೆ ಎಂದು ತಿಳಿಸಿದರು.

ರೈತರ ಕಲ್ಯಾಣಕ್ಕಾಗಿ ಕೇಂದ್ರ ಅಗತ್ಯ ಕ್ರಮ ಕೈಗೊಳ್ಳಲಿದೆ. ತ್ವರಿತ ಕ್ರಮ ಕೈಗೊಳ್ಳುವಲ್ಲಿ ಆಯಾ ರಾಜ್ಯ ಸರ್ಕಾರಗಳ ಸಹಕಾರವೂ ಅಗತ್ಯವಾಗಿದೆ ಎಂದು ಕೋರಿದ ಸಚಿವರು, ರಾಜ್ಯದಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಾಸ್ತವ ಸಮಸ್ಯೆಗಳು, ಸಕ್ಕರೆ ಕಾರ್ಖಾನೆಗಳು ವರದಿ ಮಾಡುವ ಸಕ್ಕರೆ ಇಳುವರಿ ಅಂಕಿ-ಅಂಶಗಳಲ್ಲಿನ ವ್ಯತ್ಯಾಸ, ತೂಕ, ತ್ಯಾಜ್ಯ ನಿರ್ವಹಣೆ, ಪ್ರಯೋಗಾಲಯ ಪರೀಕ್ಷೆ ಹಾಗೂ ಬೆಳೆ ವಿಮೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ರಚನಾತ್ಮಕ ಚರ್ಚೆ ನಡೆಸಿದರು.

ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಲ್ಹಾದ್ ಜೋಶಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆಗಾಗಿ ತಕ್ಷಣದ ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೆ ತರುವ ಜತೆಗೆ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಂಡು ನೀತಿ-ನಿಯಮ ಮತ್ತು ತಾಂತ್ರಿಕ ಕಾರ್ಯವಿಧಾನಗಳನ್ನು ಮತ್ತಷ್ಟು ಬಲಪಡಿಸಲು ಹಾಗೂ ರೈತರ ಆರ್ಥಿಕ ಸಬಲೀಕರಣಕ್ಕೆ ಅಗತ್ಯ ಕಾರ್ಯವಿಧಾನಗಳನ್ನು ರೂಪಿಸಲು ಮಹತ್ತರ ಸಮಾಲೋಚನೆ ನಡೆಸಲಾಯಿತು.

FRP-SAP, ಎಥೆನಾಲ್‌ ವಿಸ್ತೃತ ಚರ್ಚೆ:

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರು, ಕಬ್ಬಿನ FRP ನಿರ್ಣಯ, ವೈಜ್ಞಾನಿಕ ಪ್ರಕ್ರಿಯೆ ಹಾಗೂ ವೆಚ್ಚದ ಮೌಲ್ಯಮಾಪನಕ್ಕೆ ಬಳಸುವ ವಿಧಾನಗಳ ಬಗ್ಗೆ ವಿವರಿಸಿದರು. ಸಕ್ಕರೆ ವಲಯದಲ್ಲಿ ಪ್ರತಿ ಹಂತದಲ್ಲೂ ಪಾರದರ್ಶಕತೆ ಹೆಜ್ಜೆಯಿರಿಸಿದ ಕೇಂದ್ರ ಸರ್ಕಾರ, ರೈತರು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದರು. ಕಬ್ಬು ಬೆಳೆಗಾರರೊಂದಿಗೆ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರಲ್ಲದೆ, MSP ಮತ್ತು FRP ಗಿರುವ ವ್ಯತ್ಯಾಸವನ್ನು ಮನವರಿಕೆ ಮಾಡಿಕೊಟ್ಟರು ಮತ್ತು SAP (ಕನಿಷ್ಠ ಮಾರಾಟ ದರ), ಎಥೆನಾಲ್ ಉತ್ಪಾದನೆ ಬಗ್ಗೆಯೂ ರೈತರ ಗಮನ ಸೆಳೆದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ