LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗ ದಸರಾ: ಸಹನಾ ದೀಪಕ್ ಸಾಗರ್ ಗಾನಸುಧೆಗೆ ಕಲಾಪ್ರೇಮಿಗಳು ತನ್ಮಯ!

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಾಹಿತ್ಯ ಸಂಭ್ರಮ’ ಕಾರ್ಯಕ್ರಮದಲ್ಲಿ ಸುಗಮ ಸಂಗೀತ ಗಾಯಕಿ ಸಹನಾ ದೀಪಕ್ ಸಾಗರ್ ಮತ್ತು ತಂಡದವರ ಭಾವಗೀತೆಗಳ ಗಾಯನ ಕಲಾಪ್ರೇಮಿಗಳನ್ನು ಮಂತ್ರಮುಗ್ಧರನ್ನಾಗಿಸಿತು.

​ಕನ್ನಡದ ಪ್ರಮುಖ ಕವಿಗಳ ಗೀತೆಗಳ ಗಾನಸುಧೆ

ವೇದಿಕೆಯಲ್ಲಿ ವರಕವಿ ಡಾ. ದ.ರಾ. ಬೇಂದ್ರೆ, ರಾಷ್ಟ್ರಕವಿ ಕುವೆಂಪು, ನಿತ್ಯೋತ್ಸವ ಕವಿ ಡಾ. ಕೆ.ಎಸ್. ನಿಸಾರ್ ಅಹ್ಮದ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ನವ್ಯ ಸಾಹಿತ್ಯದ ಹರಿಕಾರ ಗೋಪಾಲಕೃಷ್ಣ ಅಡಿಗ ಹಾಗೂ ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಸೇರಿದಂತೆ ಮುಂತಾದ ದಿಗ್ಗಜ ಕವಿಗಳ ಜನಪ್ರಿಯ ಭಾವಗೀತೆಗಳನ್ನು ಸಹನಾ ದೀಪಕ್ ಸಾಗರ್ ಕಂಠತುಂಬಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು.

​ವಾದ್ಯ ಕಲಾವಿದರ ಸಾಥ್

ಈ ಗಾನ ವೈಭವಕ್ಕೆ ಶಿವಮೊಗ್ಗದ ಹೆಸರಾಂತ ವಾದ್ಯ ಕಲಾವಿದರಾದ ಅವಿನ್, ವಿನಯ್ ಮತ್ತು ಶಾಮ್ ಅವರು ಪಕ್ಕವಾದ್ಯ ನುಡಿಸಿ ಸಮರ್ಥವಾಗಿ ಸಾಥ್ ನೀಡಿದರು. ಸುಮಧುರ ಸಂಗೀತ ಹಾಗೂ ಸಾಹಿತ್ಯದ ಸಮ್ಮಿಲನ ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು.

news_1791873039_0_320.webp

​ಶಾಸಕ ಚನ್ನಬಸಪ್ಪ ಅವರಿಂದ ಅಭಿನಂದನೆ

ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಗಾಯಕಿ ಸಹನಾ ದೀಪಕ್ ಸಾಗರ್ ಪಿ.ಜಿ. ಹಾಗೂ ಅವರ ತಂಡದ ಕಲಾವಿದರನ್ನು ಸ್ಥಳೀಯ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಶಾಲು ಹೊದಿಸಿ ಅಭಿನಂದಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಪ್ರಮುಖರು ಹಾಗೂ ಅಪಾರ ಸಂಖ್ಯೆಯ ಸಂಗೀತ-ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!