LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಪ್ರೀಂ ಕೋರ್ಟ್ ಒಪ್ಪಿಗೆ:ಕೆಪಿಎಸ್‌ಸಿ ಹಗರಣದ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ

ಬೆಂಗಳೂರು- ಸುಪ್ರೀಂ ಕೋರ್ಟ್ ಒಪ್ಪಿಗೆ: ಕೆಪಿಎಸ್‌ಸಿ ಹಗರಣದ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ ​ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾದ ಡಿಜಿಪಿ ಅಲೋಕ್ ಕುಮಾರ್ ಹಾಗೂ ಡಿಐಜಿ ದಿವ್ಯಾ ಗೋಪಿನಾಥ್ ಅವರ ಬದಲಾವಣೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ನಿರ್ಧಾರ ಪ್ರಕಟಿಸಿದೆ.

ಡಿಜಿಪಿ ಅಲೋಕ್ ಕುಮಾರ್ ಮತ್ತು ಡಿಐಜಿ ದಿವ್ಯಾ ಗೋಪಿನಾಥ್ ಅವರ ಬದಲು ಹೊಸ ಹಿರಿಯ ಅಧಿಕಾರಿಗಳ ಹೆಸರನ್ನು ಎರಡು ವಾರಗಳ ಒಳಗೆ ಹೈಕೋರ್ಟ್‌ಗೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಸರ್ಕಾರದ ಪರ ವಕೀಲರಾದ ಕಪಿಲ್ ಸಿಬಲ್ ಅವರು ವಾದ ಮಂಡಿಸಿ, ಎಸ್‌ಐಟಿ ಮುಖ್ಯಸ್ಥರಾಗಿದ್ದ ಅಲೋಕ್ ಕುಮಾರ್ ಅವರ ವಿರುದ್ಧ ಹಿಂದೆ ಫೋನ್ ಟ್ಯಾಪಿಂಗ್ ಆರೋಪಗಳಿದ್ದ ಹಿನ್ನೆಲೆಯಲ್ಲಿ ಬದಲಿ ಅಧಿಕಾರಿಗಳ ಪಟ್ಟಿಯನ್ನು ಪರಿಗಣಿಸುವಂತೆ ಕೋರಿದರು.

ಫೋನ್ ಟ್ಯಾಪಿಂಗ್ ಪ್ರಕರಣದ ಆಕ್ಷೇಪಣೆ

​

ಅಲೋಕ್ ಕುಮಾರ್ ಅವರು ಈಗಾಗಲೇ ಫೋನ್ ಟ್ಯಾಪಿಂಗ್ ಪ್ರಕರಣದಿಂದ ಮುಕ್ತರಾಗಿದ್ದಾರೆ ಎಂದು ಅಭ್ಯರ್ಥಿಗಳ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟುಹಿಡಿದರು. ಆದರೆ, ಸಿಬಿಐ ತನಿಖೆ ಬೇಕಿದ್ದರೆ ಪ್ರತ್ಯೇಕ ಅರ್ಜಿ ಸಲ್ಲಿಸುವಂತೆ ಅಥವಾ ಹೈಕೋರ್ಟ್‌ಗೆ ತೆರಳುವಂತೆ ನ್ಯಾಯಪೀಠ ಸ್ಪಷ್ಟಪಡಿಸಿತು.

ಕೊರ್ಟ್ ನಿರ್ದೇಶನಗಳು

ಸುಪ್ರೀಂ ಕೋರ್ಟ್ ನಿರ್ದೇಶನಗಳು:

​ಹೊಸ ಅಧಿಕಾರಿಗಳ ಹೆಸರನ್ನು ಎರಡು ವಾರಗಳಲ್ಲಿ ಹೈಕೋರ್ಟ್‌ಗೆ ಸಲ್ಲಿಸಬೇಕು.

​ಹೈಕೋರ್ಟೇ ಈ ತನಿಖೆಯನ್ನು ನೇರವಾಗಿ ಮೇಲ್ವಿಚಾರಣೆ (Monitor) ಮಾಡಲಿದೆ.

​ಪ್ರಕರಣದಲ್ಲಿ ಮರು ತನಿಖೆ ಅಥವಾ ಮೊದಲಿನಿಂದ ಹೊಸ ತನಿಖೆ ನಡೆಸುವಂತಿಲ್ಲ.

​ಎಸ್‌ಐಟಿ ತಂಡ ಅಂತಿಮಗೊಳ್ಳುವವರೆಗೆ ಸಿಐಡಿ (CID) ಯಾವುದೇ ದೋಷಾರೋಪ ಪಟ್ಟಿ (Charge Sheet) ಸಲ್ಲಿಸುವಂತಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆ