LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕಾಗಿ ಸೇವಾ ಸೇತು ಶಿಬಿರ ಆಯೋಜನೆ

ಶಿವಮೊಗ್ಗ: ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಮೆಸ್ಕಾಂ ಉಪವಿಭಾಗ ಕಛೇರಿಗಳಲ್ಲಿ ದಿನಾಂಕ 15.10.2026, 16.10.2026 ಮತ್ತು 17.10.2026 ರಂದು ಮೂರು ದಿನಗಳ ಸೇವಾ ಸೇತು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಈ ಶಿಬಿರಗಳ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸುವುದು ಹಾಗೂ ಮೇಲ್ಛಾವಣಿ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಿಕೊಳ್ಳಲು ಅಗತ್ಯವಿರುವ ನೋಂದಣಿ ಪ್ರಕ್ರಿಯೆ, ಬ್ಯಾಂಕ್ ಸಾಲ ಸೌಲಭ್ಯಗಳನ್ನು ಪಡೆಯುವ ಕುರಿತು ಮಾರ್ಗದರ್ಶನ ಮತ್ತು ಸೌರ ವಿದ್ಯುತ್ ಘಟಕಗಳ ಅಳವಡಿಕೆಗಾಗಿ ಅಧಿಕೃತ ಮಾರಾಟಗಾರರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಸಹಾಯ ಒದಗಿಸುವುದಾಗಿದೆ.

ಆಸಕ್ತ ಸಾರ್ವಜನಿಕರು ಮೇಲ್ಕಂಡ ದಿನಾಂಕಗಳಂದು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿರುವ ಮೆಸ್ಕಾಂ ಉಪವಿಭಾಗ ಕಛೇರಿಗಳಿಗೆ ತಮ್ಮ ವಿದ್ಯುತ್ ಬಿಲ್ಲಿನ ಪ್ರತಿ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಭೇಟಿ ನೀಡಿ, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸಭೆಯ ಪ್ರಯೋಜನವನ್ನು ಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!