LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಕ್ಷ್ಯವಿಲ್ಲದೆ ಆರೋಪಪಟ್ಟಿ ಸಲ್ಲಿಸುವುದು ಬದುಕುವ ಹಕ್ಕಿನ ಉಲ್ಲಂಘನೆ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಯಾವುದೇ ಪೂರಕ ಸಾಕ್ಷ್ಯಗಳಿಲ್ಲದೆ, ಕೇವಲ ದೂರುದಾರರ ಸಾಮಾನ್ಯ ಹಾಗೂ ಅಸ್ಪಷ್ಟ ಆರೋಪಗಳನ್ನಷ್ಟೇ ಆಧಾರವಾಗಿಟ್ಟುಕೊಂಡು ಆರೋಪಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸುವುದು ಸಂವಿಧಾನದ 21ನೇ ವಿಧಿಯಡಿ ಪ್ರತಿಯೊಬ್ಬ ಪ್ರಜೆಗೂ ಖಾತರಿಪಡಿಸಲಾಗಿರುವ ಬದುಕುವ ಹಕ್ಕಿಗೆ ಧಕ್ಕೆ ಉಂಟುಮಾಡುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಂಪನಿಯೊಂದರ ಆಂತರಿಕ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸದ ಪೊಲೀಸರ ನಡೆಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಂಪನಿಯೊಂದರ ನಿರ್ದೇಶಕರ ಸ್ಥಾನಕ್ಕೆ ಸಂಬಂಧಿಸಿದಂತೆ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ವಿ. ನಾಗರಾಜ್ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಅರ್ಜಿದಾರರ ಮೇಲಿನ ಆರೋಪಗಳಿಗೆ ಸೂಕ್ತ ಬೆಂಬಲಿತ ಸಾಕ್ಷ್ಯಗಳಿಲ್ಲದಿರುವುದನ್ನು ಪುರಸ್ಕರಿಸಿ ಅವರ ವಿರುದ್ಧದ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್‌ ಅನ್ನು ರದ್ದುಗೊಳಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: 'ವಿನ್ಯಾಸ ಕನ್ಸ್‌ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್' ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು ಪೊಲೀಸರಿಗೆ ದೂರು ನೀಡಿ, ತಮ್ಮ ಹೆಸರಿನಲ್ಲಿ ನಕಲಿ ರಾಜೀನಾಮೆ ಪತ್ರವನ್ನು ಸೃಷ್ಟಿಸಿ, ತಮ್ಮನ್ನು ನಿರ್ದೇಶಕ ಸ್ಥಾನದಿಂದ ಹೊರಹಾಕಲು ಹಾಗೂ ಆ ಸ್ಥಾನಕ್ಕೆ ತಾವೇ ನೇಮಕಗೊಳ್ಳಲು ನಾಗರಾಜ್ ಮತ್ತು ಇತರರು ಒಳಸಂಚು ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದರೆ, ಆರೋಪವನ್ನು ಸಾಬೀತುಪಡಿಸಲು ಅಗತ್ಯವಿದ್ದ ಸೂಕ್ತ ದಾಖಲೆಗಳನ್ನು ತನಿಖಾಧಿಕಾರಿಗಳು ಸಲ್ಲಿಸದ ಕಾರಣ, ಹೈಕೋರ್ಟ್ ಈ ನಿರ್ಧಾರ ತಳೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!