LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಸ್ಫೋಟ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ, ಓರ್ವನ ಸ್ಥಿತಿ

ಬೆಂಗಳೂರು: ನಗರದ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ರಿಯಾಕ್ಟರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಿಟಕಿ-ಬಾಗಿಲುಗಳು ಚಿಂದಿಯಾಗಿದ್ದು, ಸುತ್ತಮುತ್ತಲಿನ ಹಳ್ಳಿಗಳ ಜನತೆ ಬೆಚ್ಚಿಬಿದ್ದಿದ್ದಾರೆ.

ಅತ್ತಿಬೆಲೆ ಸಮೀಪದ ಇಚ್ಚಂಗೂರು-ವಡ್ಡರಪಾಳ್ಯ ಮುಖ್ಯ ರಸ್ತೆಯಲ್ಲಿರುವ ‘ಲೇಕ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್’ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಎಂದಿನಂತೆ ಬೆಳಗ್ಗೆ ಕಾರ್ಮಿಕರು ರಿಯಾಕ್ಟರ್‌ನಲ್ಲಿ ರಾಸಾಯನಿಕಗಳನ್ನು ಮಿಶ್ರಣ (Chemical Mixing) ಮಾಡುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದ್ದು, ಇಡೀ ಆವರಣದಲ್ಲಿ ದಟ್ಟ ಹೊಗೆ ಹಾಗೂ ಆಕ್ರಂದನ ಮುಗಿಲುಮುಟ್ಟಿತ್ತು.

ಕಾರ್ಮಿಕರಿಗೆ ತೀವ್ರ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು 

ಸ್ಫೋಟದ ತೀವ್ರತೆಗೆ ಕಾರ್ಖಾನೆಯಲ್ಲಿದ್ದ ಅಸ್ಸಾಂ ಮೂಲದ ಫೀರ್ ಮೊಹಮ್ಮದ್, ತಮಿಳುನಾಡು ಮೂಲದ ವಿನೀತ್ ಹಾಗೂ ವರುಣ್ ಟಿ. ಜಯನ್ ಎಂಬ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಸಾಯನಿಕಗಳು ಎರಚಿದ ಪರಿಣಾಮ ಕಾರ್ಮಿಕರ ದೇಹದ ಬಹುತೇಕ ಭಾಗಗಳು ಸುಟ್ಟುಹೋಗಿದ್ದು, ಅವರ ಪೈಕಿ ಓರ್ವನ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭದ್ರತಾ ಲೋಪವೇ ಸ್ಫೋಟಕ್ಕೆ ಕಾರಣ? 

ಕೆಮಿಕಲ್ ರಿಯಾಕ್ಟರ್‌ನಲ್ಲಿ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವಾಗ ಕಡ್ಡಾಯವಾಗಿ ಕೈಗೊಳ್ಳಬೇಕಾದ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸದಿರುವುದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಮುಖ್ಯವಾಗಿ ರಿಯಾಕ್ಟರ್‌ಗೆ ಸರಿಯಾದ ಅರ್ಥಿಂಗ್ (Earthing) ವ್ಯವಸ್ಥೆ ಮಾಡಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಾರ್ಮಿಕರ ಜೀವಕ್ಕೆ ಕಂಟಕ ತಂದೊಡ್ಡುವ ಇಂತಹ ಭಾರಿ ಅನಾಹುತ ಸಂಭವಿಸಿದ್ದರೂ, ‘ಕಾರ್ಮಿಕರಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿವೆಯಷ್ಟೇ’ ಎಂದು ಕಾರ್ಖಾನೆ ಆಡಳಿತ ಮಂಡಳಿ ಬೇಜವಾಬ್ದಾರಿಯ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ: ಕಾರ್ಖಾನೆ ಸೀಜ್ ಮಾಡಲು ಸ್ಥಳೀಯರ ಆಗ್ರಹ 

ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಅತ್ತಿಬೆಲೆ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸ್ಫೋಟದ ನಂತರ ಇಡೀ ಪ್ರದೇಶದಲ್ಲಿ ರಾಸಾಯನಿಕದ ತೀವ್ರ ದುರ್ವಾಸನೆ ಹರಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಉಸಿರಾಟದ ಆತಂಕ ಮೂಡಿಸಿತ್ತು.

ಈ ಕಾರ್ಖಾನೆಯಲ್ಲಿ ಈ ಹಿಂದೆಯೂ ಹಲವಾರು ಬಾರಿ ಇಂತಹ ಸ್ಫೋಟಗಳು ಮತ್ತು ಸಣ್ಣಪುಟ್ಟ ಅವಘಡಗಳು ಸಂಭವಿಸಿದ್ದು, ಸ್ಥಳೀಯರ ಪ್ರಾಣಕ್ಕೆ ನಿರಂತರ ಕಂಟಕವಾಗಿ ಪರಿಣಮಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಕಡೆಗಣಿಸಿರುವ ಈ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಿ (Seize), ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ತೀವ್ರವಾಗಿ ಒತ್ತಾಯಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದಲ್ಲಿ CJP ಪ್ರತಿಭಟನೆಗೆ ಅಮೆರಿಕದಿಂದ ಹಣಕಾಸು ನೆರವು ? ಗಾಯಕಿ ಮೇರಿ ಮಿಲ್ಬೆನ್‌ ಗಂಭೀರ ಆರೋಪ!ರಷ್ಯಾ ಸೇನೆಗೆ ಸೇರಿದ ಭಾರತೀಯರೆಷ್ಟು? ಎಷ್ಟು ಮಂದಿ ಸಾವು, ಎಷ್ಟು ಜನ ನಾಪತ್ತೆ? ಸುಪ್ರೀಂಕೋರ್ಟ್‌ಗೆ ಕೇಂದ್ರದ ಮಾಹಿತಿಮನೆಯ ಹಿತ್ತಲಲ್ಲಿ ಬೃಹತ್ ಹೆಬ್ಬಾವು ಪತ್ತೆ | WATCH VIDEOಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ15,000 ಲಂಚ ಪಡೆಯುತ್ತಿದ್ದಾಗಲೇ ಹೆಸ್ಕಾಂ ಅಧಿಕಾರಿ, ಗುತ್ತಿಗೆದಾರ ಲೋಕಾಯುಕ್ತ ಬಲೆಗೆBREAKING: ಜೆಡಿಎಸ್ ಸೋಶಿಯಲ್ ಮೀಡಿಯಾ ತಂಡದ ಯುವಕ ಪೊಲೀಸರು ವಶಕ್ಕೆ: HDK ಕಿಡಿಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಸಿಬ್ಬಂದಿಗೆ ಸಿಬಿಐ ಎಸ್ಪಿ ಆನಂದಕೃಷ್ಣನ್ ಅವರಿಂದ ವಿಶೇಷ ಉಪನ್ಯಾಸಬೆಂಗಳೂರಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಸ್ಫೋಟ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ, ಓರ್ವನ ಸ್ಥಿತಿಮಧು ಬಂಗಾರಪ್ಪ ಅವರ ಪ್ರಯತ್ನಕ್ಕೆ ಫಲ: ಇಡೀ ಶಿವಮೊಗ್ಗ ಜಿಲ್ಲೆ ಬರಪೀಡಿತ ಘೋಷಣೆಕಬ್ಬು ಬೆಳೆಗಾರರ ಬೇಡಿಕೆ ಪರಿಶೀಲನೆಗೆ ಕೇಂದ್ರದ ಮಹತ್ವದ ಕ್ರಮ: ರಮೇಶ್ ಚಂದ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ