LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಬಹಿರಂಗ: ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನನ್ನನ್ನೂ ಸಿಲುಕಿಸಲು ಸಂಚು ನಡೆದಿತ್ತು!

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೂಲ ವ್ಯಕ್ತಿಯನ್ನು ಕರೆಸಿ ನ್ಯಾಯಾಲಯದಲ್ಲಿ 164ರ ಅಡಿಯಲ್ಲಿ ಹೇಳಿಕೆ ಕೊಡಿಸಿ, ತನ್ನನ್ನು ಕೂಡ ಈ ಕೇಸಿನಲ್ಲಿ ಸಿಲುಕಿಸುವ ದೊಡ್ಡ ಪ್ಲ್ಯಾನ್ ನಡೆದಿತ್ತು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿರುವ ಸ್ಟಿಂಗ್ ಆಪರೇಷನ್ ವಿವಾದ, ತನಿಖೆಯ ಬೆಳವಣಿಗೆಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ಅಕ್ರಮಗಳ ಕುರಿತು ಹಲವು ಆಘಾತಕಾರಿ ಸಂಗತಿಗಳನ್ನು ಹೊರಹಾಕಿದರು.

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಘಟನೆಗಳ ಬಗ್ಗೆ ಹಿಂದೆಯೇ ಎಚ್ಚರಿಸಿದ್ದೆ ಎಂದ ಅವರು, ವಿಜಯದಶಮಿಯ ಸಂದರ್ಭದಲ್ಲಿ ಯುದ್ಧಕ್ಕೆ ಹೋಗುವ ಸಮಯ ಬಂದಿದೆ ಎಂದು ಹೇಳಿದ್ದೆ. ತಾಯಿ ಚಾಮುಂಡೇಶ್ವರಿ ಮಹಿಷಾಸುರನನ್ನು ಮರ್ಧನ ಮಾಡಿದಂತೆ, ಅನ್ಯಾಯದ ವಿರುದ್ಧ ಹೋರಾಡುವ ಕೆಲಸವೂ ನಡೆಯಬೇಕಿದೆ ಎಂದು ನುಡಿದರು. ಡಾ. ರಾಜ್‌ಕುಮಾರ್ ಅವರ ಸಿನಿಮಾಗಳ ಹಾಡುಗಳನ್ನು ಉಲ್ಲೇಖಿಸಿ, ಈ ಘಟನೆಗಳು ನನ್ನಿಂದಲೂ ನಡೆಯುತ್ತಿಲ್ಲ, ಬೇರೆಯವರಿಂದಲೂ ನಡೆಯುತ್ತಿಲ್ಲ, ಎಲ್ಲರಿಗೂ ತೀರ್ಪು ನೀಡುವವನು ಮೇಲಿದ್ದಾನೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರಿಗೆ ತಾವು ಸ್ಟೇ ಪಡೆಯಲು ಹೋಗಬೇಡಿ, ಧೈರ್ಯವಾಗಿ ಎದುರಿಸಿ ಎಂದು ಹೇಳಿದ್ದೆ ಎಂಬುದನ್ನು ಸ್ಮರಿಸಿದ ಕುಮಾರಸ್ವಾಮಿ, ಸಿಎಂ ಆದೇಶದ ಮೇರೆಗೆ ಗೃಹ ಸಚಿವರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸ್ಟಿಂಗ್ ಆಪರೇಷನ್ ಮೂಲ ವ್ಯಕ್ತಿಯಿಂದ ಹೇಳಿಕೆ ಪಡೆದು ನನ್ನನ್ನೂ ಈ ಕೇಸಿನಲ್ಲಿ ಫಿಕ್ಸ್ ಮಾಡಲು ಪ್ಲ್ಯಾನ್ ನಡೆದಿತ್ತು ಎಂದರಲ್ಲದೆ, ತಾನು ರೇವಣ್ಣ ಅಲ್ಲ, ಅವರಂತೆ ತನ್ನನ್ನು ಜೈಲಿಗೆ ಕಳುಹಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಕೆಪಿಎಸ್‌ಸಿ ಅಕ್ರಮದ ವಿಚಾರ ಪ್ರಸ್ತಾಪಿಸಿದ ಅವರು, ಇಡಿ ಆರಂಭದಲ್ಲೇ ಮಧ್ಯಪ್ರವೇಶಿಸದಿದ್ದರೆ ಪ್ರಕರಣವನ್ನು ಮುಚ್ಚಿಹಾಕಲಾಗುತ್ತಿತ್ತು ಎಂದು ಕಿಡಿಕಾರಿದರು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಸಚಿವರಾಗಿದ್ದ ಸಂದರ್ಭದಲ್ಲೇ ದಾಖಲೆಗಳನ್ನು ನೀಡಲಾಗಿತ್ತು, ಆದರೆ ಈವರೆಗೂ ಸಮರ್ಪಕ ಉತ್ತರ ಬಂದಿಲ್ಲ ಎಂದು ದೂರಿದರು.

ಸ್ಟಿಂಗ್ ಆಪರೇಷನ್ ವಿಚಾರ ಸಂಪುಟದಲ್ಲಿ ಚರ್ಚೆಯಾಗಿದ್ದು ಹೇಗೆ ಎಂದು ಪ್ರಶ್ನಿಸಿದ ಅವರು, ಸಂಪುಟದ ಚರ್ಚೆಗಳು ರಹಸ್ಯವಾಗಿರಬೇಕಾದ ಸಂದರ್ಭದಲ್ಲಿ ಅದರ ಮಾಹಿತಿ ಮಾಧ್ಯಮಗಳಿಗೆ ಸೋರಿಕೆಯಾಗಿದ್ದು ಹೇಗೆ? ಮುಖ್ಯಮಂತ್ರಿಗಳು ಸ್ಟಿಂಗ್ ಆಪರೇಷನ್ ಫೈಲ್ ಅನ್ನು ಸಂಪುಟಕ್ಕೆ ತೆಗೆದುಕೊಂಡು ಹೋಗಿದ್ದೇಕೆ ಎಂದು ತರಾಟೆಗೆ ತೆಗೆದುಕೊಂಡರು. ತಾವು ನೈಸ್ ಅಕ್ರಮಗಳ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡಲು ಸುದ್ದಿಗೋಷ್ಠಿ ಕರೆದಿದ್ದ ವೇಳೆ ಸ್ಟಿಂಗ್ ಆಪರೇಷನ್ ಸುದ್ದಿ ಹೊರಬಂದಿದ್ದೇಕೆ ಎಂದು ಪ್ರಶ್ನಿಸಿದ ಅವರು, ನೈಸ್ ಅಕ್ರಮದ ವಿಚಾರ ಜನರ ಮುಂದೆ ಹೋಗಬಾರದು ಎಂಬ ಉದ್ದೇಶದಿಂದಲೇ ಈ ಸುದ್ದಿ ಹರಿಬಿಡಲಾಗಿದೆ ಎಂದು ಆರೋಪಿಸಿದರು.

ಇದೇ ವೇಳೆ ಡಿಕೆ ಶಿವಕುಮಾರ್ ಅವರಿಗೆ ನೇರ ಪ್ರಶ್ನೆಗಳನ್ನು ಕೇಳಿದ ಹೆಚ್‌ಡಿಕೆ, ಶಾಂಗ್ರಿಲ್ಲಾ ಹೋಟೆಲ್‌ನಲ್ಲಿ ಯಾರನ್ನು ಭೇಟಿಯಾಗಿದ್ದಿರಿ ಮತ್ತು ಆ ಭೇಟಿಯ ಉದ್ದೇಶವೇನು ಎಂದು ತರಾಟೆಗೆ ತೆಗೆದುಕೊಂಡರು. ಭೇಟಿಗೆ ಎರಡು ದಿನಗಳ ಮೊದಲು ಸಂಬಂಧಪಟ್ಟ ವ್ಯಕ್ತಿಯನ್ನು ಮುಖ್ಯಮಂತ್ರಿ ತಮ್ಮ ಮನೆಗೆ ಕರೆಸಿಕೊಂಡಿದ್ದರು. ಬಳಿಕ ನೈಸ್ ಸಂಸ್ಥೆಗೆ ಸಂಬಂಧಿಸಿದ ವ್ಯಕ್ತಿಯ ಸಂದರ್ಶನವನ್ನು ಅದೇ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡಲಾಯಿತು. ಆ ವ್ಯಕ್ತಿ 16 ಗಂಟೆಗಳ ಕಾಲ ಇರುವ ಸ್ಥಳದಲ್ಲೇ ಸಂದರ್ಶನ ನಡೆಸಿದ್ದೇಕೆ ಮತ್ತು ನೈಸ್ ವ್ಯಕ್ತಿ ಮುಖ್ಯಮಂತ್ರಿ ಮನೆಗೂ ಭೇಟಿ ನೀಡಿದ್ದೇಕೆ ಎಂದು ಪ್ರಶ್ನಿಸಿದರು.

2024ರ ಆಗಸ್ಟ್ 2ರಂದು ನಡೆದ ಬೆಳವಣಿಗೆಗಳನ್ನು ಉಲ್ಲೇಖಿಸಿದ ಅವರು, ಈ ಸ್ಟಿಂಗ್ ಆಪರೇಷನ್ ಬಗ್ಗೆ ರಮೇಶ್ ಜಾರಕಿಹೊಳಿ ಮೊದಲೇ ಎಚ್ಚರಿಸಿದ್ದರು. ಪ್ರಜ್ವಲ್ ರೇವಣ್ಣನಂತೆ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರಿಗೆ ಸಂಬಂಧಿಸಿದ ವಿಡಿಯೋಗಳು ಹೊರಬರಬಹುದು ಎಂಬ ಎಚ್ಚರಿಕೆಯನ್ನು ನೀಡಲಾಗಿತ್ತು ಎಂದರು. ತಮ್ಮನ್ನು ಬ್ರೈನ್ ಮ್ಯಾಪಿಂಗ್ ಮಾಡಬೇಕು ಎಂಬ ಮಾತುಗಳಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ತಾನು ಮಲಗಲು ಹೋದರೆ ಎರಡು ನಿಮಿಷದಲ್ಲಿ ನಿದ್ರೆ ಬರುತ್ತದೆ, ಆದರೆ ಇಡಿ, ಐಟಿ ಬರುತ್ತದೆ ಎಂಬ ಆತಂಕದಲ್ಲಿ ನಿದ್ರೆ ಕಳೆದುಕೊಳ್ಳುತ್ತಿರುವವರು ನೀವೇ ಎಂದು ವಾಗ್ದಾಳಿ ನಡೆಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ