LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪತ್ರಕರ್ತ ಭಂಡಿಗಡಿ ನಂಜುಂಡಪ್ಪ ನಿಧನ: ಸಾಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಶಿವಮೊಗ್ಗ: ಶಿವಮೊಗ್ಗದ ಹಿರಿಯ ಪತ್ರಕರ್ತ ಹಾಗೂ 'ವಾಯ್ಸ್ ಆಫ್ ಶಿವಮೊಗ್ಗ' ಪತ್ರಿಕೆಯ ಸಂಪಾದಕ ಭಂಡಿಗಡಿ ನಂಜುಂಡಪ್ಪ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಾಗರ ಶಾಖೆಯ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.

​ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಹೆಗಡೆ, "ಭಂಡಿಗಡಿ ನಂಜುಂಡಪ್ಪನವರು ಕಳೆದ ನಾಲ್ಕು ದಶಕಗಳಿಂದಲೂ ಪತ್ರಿಕಾರಂಗದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಅಪಾರ ಸೇವೆ ಸಲ್ಲಿಸಿದ ಹಿರಿಯ ಚೇತನ. ಸ್ವತಃ ತಾವೇ ಪತ್ರಿಕೆಯನ್ನು ಮುದ್ರಣ ಮಾಡಿಸಿ, ಸಾರ್ವಜನಿಕರಿಗೆ ಹಂಚುವ ಮೂಲಕ ಪತ್ರಿಕೆಯ ಉಳಿವಿಗೆ ಅಪಾರ ಶ್ರಮಪಟ್ಟಿದ್ದರು. ಕಳೆದ 25 ವರ್ಷಗಳಿಂದ ಪತ್ರಕರ್ತರ ರಾಷ್ಟ್ರೀಯ ಮಂಡಳಿಯ (National Council) ಸದಸ್ಯರಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪತ್ರಕರ್ತರ ಹಿತರಕ್ಷಣೆಗೆ ಧ್ವನಿಯಾಗಿದ್ದರು. ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾರ ಬಳಿಯೂ ನಿಷ್ಠುರವಾಗದ ರೀತಿಯಲ್ಲಿ ಸೌಜನ್ಯದ ನಡವಳಿಕೆಯೊಂದಿಗೆ ಅವರು ವೃತ್ತಿ ನಿರ್ವಹಿಸಿದ ರೀತಿ ಮುಂದಿನ ಪೀಳಿಗೆಗೆ ಮಾದರಿ" ಎಂದು ಸ್ಮರಿಸಿದರು.

​ಶಿವಮೊಗ್ಗ ಜಿಲ್ಲಾ KUWJ ಸಂಘದ ವಿಶೇಷ ಆಹ್ವಾನಿತರಾದ ನಾಗೇಶ್ ಜಿ. ಮಾತನಾಡಿ, "ಸ್ಥಳೀಯ ಪತ್ರಿಕೆಯನ್ನು ಇಷ್ಟೊಂದು ಸುದೀರ್ಘ ಕಾಲ ನಿರಂತರವಾಗಿ, ಅತ್ಯಂತ ಯಶಸ್ವಿಯಾಗಿ ಮುನ್ನಡೆಸುವುದು ಸುಲಭದ ಮಾತಲ್ಲ. 'ವಾಯ್ಸ್ ಆಫ್ ಶಿವಮೊಗ್ಗ' ಪತ್ರಿಕೆಯ ಮೂಲಕ ಜಿಲ್ಲೆಯ ಪ್ರಮುಖ ಸಮಸ್ಯೆಗಳಿಗೆ ಧ್ವನಿಯಾಗಿದ್ದ ನಂಜುಂಡಪ್ಪನವರು ಸದಾ ಪತ್ರಕರ್ತರ ಸಂಘಟನೆಯ ಒಳಿತಿಗಾಗಿ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಹೊಸದಾಗಿ ಕ್ಷೇತ್ರಕ್ಕೆ ಬರುವ ಯುವ ಪತ್ರಕರ್ತರಿಗೆ ಸದಾ ಮಾರ್ಗದರ್ಶನ ನೀಡುತ್ತಿದ್ದ ಹಿರಿಯ ಮಾರ್ಗದರ್ಶಕರೊಬ್ಬರನ್ನು ಜಿಲ್ಲೆಯ ಮಾಧ್ಯಮ ರಂಗ ಕಳೆದುಕೊಂಡಂತಾಗಿದೆ" ಎಂದು ವಿಷಾದ ವ್ಯಕ್ತಪಡಿಸಿದರು.

​ಈ ವೇಳೆ ಪತ್ರಕರ್ತರಾದ ಲೋಕೇಶ್ ಗುಡಿಗಾರ್ ಹಾಗೂ ಎಂ.ಜಿ. ರಾಘವನ್ ಅವರು ಮಾತನಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಶಿವನಗೌಡ, ಸತ್ಯನಾರಾಯಣ, ಜಮೀಲ್ ಸಾಗರ್, ಇಮ್ರಾನ್ ಸಾಗರ್, ವಸಂತ ಬಿ ಈಶ್ವರಗೆರೆ ಉಪಸ್ಥಿತರಿದ್ದು, ಎರಡು ನಿಮಿಷ ಮೌನಾಚರಣೆ ಮೂಲಕ ಅಗಲಿದ ಹಿರಿಯ ಚೇತನಕ್ಕೆ ನಮನ ಸಲ್ಲಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!