LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿಪಕ್ಷೀಯ ವಾಣಿಜ್ಯ ಬಲವರ್ಧನೆ: ಸಿಂಗಪುರ್ ಜತೆ ಎಂ.ಬಿ.ಪಾಟೀಲ ಮಾತುಕತೆ

ಬೆಂಗಳೂರು: ಏರೋಸ್ಪೇಸ್, ರಕ್ಷಣೆ, ಸೆಮಿಕಂಡಕ್ಟರ್ಸ್, ವಿಮಾನ‌ ನಿರ್ವಹಣೆ ಮತ್ತು ದುರಸ್ತಿ (ಎಂ.ಆರ್.ಒ) ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಲವರ್ಧನೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಎಂಟರ್ಪ್ರೈಸ್ ಸಿಂಗಪುರ್ ಮುಖ್ಯಸ್ಥ ಲೀ ಚುವಾನ್ ಟೆಕ್ ಮಂಗಳವಾರ ವಿಸ್ತೃತ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಾಟೀಲ, ಕರ್ನಾಟಕ ಮತ್ತು ಸಿಂಗಪುರ ಎರಡಕ್ಕೂ ಪರಸ್ಪರ ಲಾಭದಾಯಕವಾಗಿರುವ ಕ್ಷೇತ್ರಗಳನ್ನು ಕುರಿತು ಮಾತುಕತೆ ನಡೆಯಿತು. ವಾಣಿಜ್ಯ, ತಂತ್ರಜ್ಞಾನ ಮತ್ತು ಬಂಡವಾಳ ಹೂಡಿಕೆ ವಲಯಗಳಲ್ಲಿ ಇರುವ ಅವಕಾಶಗಳನ್ನು ಆದ್ಯತೆಯ ಮೇಲೆ ನಾವು ಚರ್ಚಿಸಿದ್ದೇವೆ ಎಂದಿದ್ದಾರೆ.

ಮುಖ್ಯವಾಗಿ ಇನ್ವೆಸ್ಟ್ ಕರ್ನಾಟಕ ಫೋರಂ ಮತ್ತು ಬೆಂಗಳೂರಿನಲ್ಲೇ ಕಚೇರಿ ಹೊಂದಿರುವ ಎಂಟರ್ಪ್ರೈಸ್ ಸಿಂಗಪುರ್ ನಡುವೆ ಸಹಭಾಗಿತ್ವ ಹೆಚ್ಚಿಸುವ ಕುರಿತು ಒಮ್ಮತಕ್ಕೆ ಬರಲಾಗಿದೆ. ನಮ್ಮ‌ ಕೈಗಾರಿಕಾ ನೀತಿ ಮತ್ತು ಇಲ್ಲಿನ‌ ಔದ್ಯಮಿಕ ಕಾರ್ಯಪರಿಸರವನ್ನು ಲೀ ಅವರಿಗೆ ವಿವರಿಸಲಾಗಿದೆ. ಇತ್ತೀಚೆಗೆ ಕೈಗೊಂಡಿದ್ದ ಸಿಂಗಪುರ್ ಪ್ರವಾಸದಲ್ಲಿ‌ ಹತ್ತಾರು ಕಂಪನಿಗಳ‌ ಜತೆ ನಡೆಸಿದ ಹೂಡಿಕೆ ಮಾತುಕತೆಯ ಫಲಿತಾಂಶಗಳನ್ನು ಅವರೊಂದಿಗೆ ಹಂಚಿಕೊಂಡಿದ್ದೇನೆ ಎಂದು ಅವರು ನುಡಿದಿದ್ದಾರೆ.

ಮಾತುಕತೆಯ ಸಂದರ್ಭದಲ್ಲಿ, 2027ರಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಿಂಗಪುರದ ಪ್ರತಿನಿಧಿಗಳನ್ನು ಆಹ್ವಾನಿಸಲಾಯಿತು ಎಂದು ಪಾಟೀಲ ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!